Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಐದು ದಿನ ಮಳೆ

ಕರ್ನಾಟಕದಾದ್ಯಂತ ಮಳೆ ಕೊಂಚ ಬಿಡುವು ಪಡೆದಿದೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೇ ಕೆಲವೆಡೆ ಹೆಚ್ಚಿನ ಮಳೆಯಾಗಲಿದ್ದು, ಉಳಿದೆಡೆ ಮೋಡಕವಿದ ವಾತಾವರಣವಿರಲಿದ್ದು, ತುಂತುರು ಮಳೆಯಾಗುವ ನಿರೀಕ್ಷೆ ಇದೆ. ಕಳೆದ ಎರಡು ವಾರಗಳಿಂದ ರಾಜ್ಯಾದ್ಯಂತ ಭಾರಿ ಮಳೆಯಾಗಿದ್ದು ಅವಾಂತರ ಸೃಷ್ಟಿಸಿತ್ತು. ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜೂನ್ 4ರಿಂದ ಮಳೆ ಕೊಂಚ ಹೆಚ್ಚಾಗಬಹುದು. ಪುತ್ತೂರು, ಉಪ್ಪಿನಂಗಡಿ, ಬೆಳ್ತಂಗಡಿ, ಸುಳ್ಯ, ಮಾಣಿ, ಬಂಟವಾಳ, ಭಾಗಮಂಡಲ, ಧರ್ಮಸ್ಥಳ, ನಾಪೋಕ್ಲು, ಶಕ್ತಿನಗರ, ವಿರಾಜಪೇಟೆ, ಕಾರ್ಕಳ, ಚಿಕ್ಕಬಳ್ಳಾಪುರ, ಪೊನ್ನಂಪೇಟೆ, ಹಾರಂಗಿ, ಕೊಟ್ಟಿಗೆಹಾರ, ಶೃಂಗೇರಿ, ಜಯಪುರ, ಕೋಟಾ, ಮುಲ್ಕಿ, ಸಿದ್ದಾಪುರ, ಗೇರುಸೊಪ್ಪದಲ್ಲಿ ಮಳೆಯಾಗಿದೆ.

Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಐದು ದಿನ ಮಳೆ
ಮಳೆ
Image Credit source: PTI

Updated on: Jun 01, 2025 | 7:55 AM

ಬೆಂಗಳೂರು, ಜೂನ್ 01: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ ಐದು ದಿನ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಿಕ್ಕಮಗಳೂರು, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜೂನ್ 4ರಿಂದ ಮಳೆ ಕೊಂಚ ಹೆಚ್ಚಾಗಬಹುದು.

ಪುತ್ತೂರು, ಉಪ್ಪಿನಂಗಡಿ, ಬೆಳ್ತಂಗಡಿ, ಸುಳ್ಯ, ಮಾಣಿ, ಬಂಟವಾಳ, ಭಾಗಮಂಡಲ, ಧರ್ಮಸ್ಥಳ, ನಾಪೋಕ್ಲು, ಶಕ್ತಿನಗರ, ವಿರಾಜಪೇಟೆ, ಕಾರ್ಕಳ, ಚಿಕ್ಕಬಳ್ಳಾಪುರ, ಪೊನ್ನಂಪೇಟೆ, ಹಾರಂಗಿ, ಕೊಟ್ಟಿಗೆಹಾರ, ಶೃಂಗೇರಿ, ಜಯಪುರ, ಕೋಟಾ, ಮುಲ್ಕಿ, ಸಿದ್ದಾಪುರ, ಗೇರುಸೊಪ್ಪದಲ್ಲಿ ಮಳೆಯಾಗಿದೆ.

ಎಚ್​ಎಎಲ್​ನಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,ಬಾಗಲಕೋಟೆಯಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಲ್ಲಿ ಜೂನ್​ 2ರವರೆಗೂ ಭಾರಿ ಮಳೆ, 5 ಜಿಲ್ಲೆಗಳಿಗೆ ರೆಡ್ ಅಲರ್ಟ್​

 

ರಾಜ್ಯದಲ್ಲಿ ಮೇ ತಿಂಗಳಿನಲ್ಲಿ ಸುರಿದಿರುವ 245.2 ಮಿ.ಮೀ. ಮಳೆ ಸಾರ್ವಕಾಲಿಕ ದಾಖಲೆ ಮಳೆ ಯಾಗಿದೆ. 1943ರ ಮೇಯಲ್ಲಿ ಸುರಿದ 185.9 ಮಿ.ಮೀ. ಮಳೆ ಈ ವರೆಗಿನ ದಾಖಲೆಯಾಗಿತ್ತು. ಜತೆಗೆ ಕಳೆದ 3 ತಿಂಗಳುಗಳಲ್ಲಿ ರಾಜ್ಯದಲ್ಲಿ ಸುರಿದ 322.2 ಮಿ.ಮೀ. ಮಳೆ ಕೂಡ ಚಾರಿತ್ರಿಕ ದಾಖಲೆಯಾಗಿದೆ.

ಉತ್ತರ ಒಳನಾಡಿನಲ್ಲಿ ಈ ಸಲ ಮೇಯಲ್ಲಿ 172.5 ಮಿ.ಮೀ. ಮಳೆಯಾಗಿದ್ದು, 1943ರಲ್ಲಿ ಸುರಿದಿದ್ದ 151.6 ಮಿ.ಮೀ. ಮಳೆಯ ದಾಖಲೆಯನ್ನು ಮುರಿದಿದೆ. ಕೊಪ್ಪಳ ಜಿಲ್ಲೆಯಲ್ಲಿ 1901ರ ಮೇ ತಿಂಗಳಲ್ಲಿ ಸುರಿದಿದ್ದ 129.3 ಮಿ.ಮೀ. ಮಳೆ ದಾಖಲೆಯಾಗಿತ್ತು. ಇದೀಗ 124 ವರ್ಷಗಳ ಅನಂತರ 2025ರ ಮೇಯಲ್ಲಿ ಸುರಿದ 165.9 ಮಿ.ಮೀ. ಮಳೆಯು ಹೊಸ ಐತಿಹಾಸಿಕ ದಾಖಲೆ ಸೃಷ್ಟಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಗದಗದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ದಕ್ಷಿಣ ಕನ್ನಡದಲ್ಲಿ ಕಳೆದ 3 ತಿಂಗಳಲ್ಲಿ 1,112.7 ಮಿ.ಮೀ. ದಾಖಲೆ ಮಳೆಯಾಗಿದೆ. ಈ ಹಿಂದೆ 1918ರಲ್ಲಿ 859.4 ಮಿ.ಮೀ. ಮಳೆಯಾಗಿತ್ತು. ಉಡುಪಿಯಲ್ಲಿ 1918ರಲ್ಲಿ 1054.2 ಮಿ.ಮೀ. ದಾಖಲೆ ಮಳೆಯಾಗಿತ್ತು. ಈ ಬಾರಿ ಇದರ ಪ್ರಮಾಣವು 1055.6 ಮಿ.ಮೀ.ಗೆ ಏರಿಕೆಯಾಗಿದೆ.

​ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ