Karnataka Rains: ಕೊಡಗು, ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಮೇ 28ರವರೆಗೂ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕೊಡಗು, ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಮೇ 28ರವರೆಗೂ ಮಳೆ
ಮಳೆ
Image Credit source: Mint

Updated on: May 22, 2024 | 7:37 AM

ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಬಹುತೇಕ ಕಡೆ ಮೇ 28ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ,ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯನಗರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಯಲ್ಲಾಪುರ, ಎಂಎಂಹಿಲ್ಸ್​, ಎಚ್​ಡಿ ಕೋಟೆ, ಕೊಳ್ಳೇಗಾಲ, ಸಿರಾ, ಯುಗಟಿಯಲ್ಲಿ ಹೆಚ್ಚು ಮಳೆಯಾಗಿದೆ. ಹೊನ್ನಾವರ, ದೇವನಹಳ್ಳಿ, ಶ್ರವಣಬೆಳಗೊಳ, ಭಾಗಮಂಡಲ, ಕಿರವತ್ತಿ, ಮಂಗಳೂರು, ಚನ್ನರಾಯಪಟ್ಟಣ, ಹೊಸದುರ್ಗ, ದಾವಣಗೆರೆ, ಅರಕಲಗೂಡು, ಹರಪನಹಳ್ಳಿ, ಸಿದ್ದಾಪುರ, ಮಾಣಿ, ಸಂತೆಬೆನ್ನೂರು, ಮಂಕಿ, ನಿಪ್ಪಾಣಿ, ಬರಗೂರು, ಹೊಸಕೋಟೆಯಲ್ಲಿ ಮಳೆಯಾಗಿದೆ.

ಮತ್ತಷ್ಟು ಓದಿ: Karnataka Rains: ಉಡುಪಿ, ಕೊಡಗು, ಶಿವಮೊಗ್ಗ ಸೇರಿದಂತೆ ರಾಜ್ಯದ ಕೆಲವೆಡೆ ಭಾರಿ ಮಳೆ ಸಾಧ್ಯತೆ, ಆರೆಂಜ್​ ಅಲರ್ಟ್​

ಸುಳ್ಯ, ಕದ್ರಾ, ಹೊನ್ನಾಳಿ, ಹಳಿಯಾಳ, ಮೂಡಿಗೆರೆ, ಉಪ್ಪಿನಂಗಡಿ, ಕುಮಟಾ, ಮುಂಡಗೋಡು, ಹಾವೇರಿ, ಕೊಟ್ಟೂರು, ನಾಪೋಕ್ಲು, ಗೌರಿಬಿದನೂರು, ನಾಗಮಂಗಲ, ಕುಶಾಲನಗರ, ಚಿತ್ರದುರ್ಗ, ಮಾಗಡಿ, ಬೇಲೂರು, ವಿರಾಜಪೇಟೆಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 36.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು ಇಂದು ಮಧ್ಯಾಹ್ನದ ಬಳಿಕ ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಾವೇರಿಯಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 32.8 ಡಿಗ್ರಿ ಸೆಲ್ಇಸಯಸ್​ ಗರಿಷ್ಠ ಉಷ್ಣಾಂಶ, 17.2 – ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us