Karnataka Weekend Curfew: ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ವೀಕೆಂಡ್ ಕರ್ಫ್ಯೂ ಘೋಷಿಸಿದ ಸರ್ಕಾರ, ಶಾಲಾ-ಕಾಲೇಜುಗಳು ಕ್ಲೋಸ್
Karnataka Corona Curfew: ಒಳಾಂಗಣವಿರಲಿ, ಹೊರಾಂಗಣವಿರಲಿ ಮದುವೆಗೆ 50 ಜನರು, ಶವಸಂಸ್ಕಾರಕ್ಕೆ 20 ಜನರಿಗೆ ಮಾತ್ರ ಅವಕಾಶ. ಏಪ್ರಿಲ್ 23ರ ನಂತರ ಮಾರುಕಟ್ಟೆಗಳು ಸ್ಥಳಾಂತರಗೊಳ್ಳಲಿವೆ ಎಂದು ರವಿಕುಮಾರ್ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟವಾಗಿದ್ದು, ನಾಳೆ (ಏಪ್ರಿಲ್ 21) ಯಿಂದ ಮೇ 4ರವರೆಗೆ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6ರವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಆದರೆ ಶುಕ್ರವಾರ ರಾತ್ರಿ 9ಗಂಟೆಯಿಂದ ಸೋಮವಾರ ಬೆಳಗ್ಗೆ 6ರವರೆಗೆ ಕರ್ಫ್ಯೂ ಇರಲಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ತಿಳಿಸಿದ್ದಾರೆ.
ಇನ್ನು ಎಲ್ಲ ಖಾಸಗಿ ಕಂಪನಿಗಳು ವರ್ಕ್ ಫ್ರಂ ಹೋಂ ನೀಡಬೇಕು ಎಂದು ತಿಳಿಸಲಾಗಿದ್ದು, ಶಾಲಾ-ಕಾಲೇಜುಗಳು ಸೇರಿ ಶಿಕ್ಷಣ ಸಂಸ್ಥೆಗಳು ಇನ್ನು ಏಳುದಿನ ಬಂದ್ ಇರಲಿವೆ. ಸಿನಿಮಾ ಹಾಲ್, ಶಾಪಿಂಗ್ ಮಾಲ್, ಜಿಮ್, ಸ್ಪೋರ್ಟ್ಸ್ ಕಾಂಪ್ಲೆಕ್ಸ್, ಮನೋರಂಜನಾ ಪಾರ್ಕ್, ಸ್ವಿಮ್ಮಿಂಗ್ ಪೂಲ್, ಬಾರ್ & ಆಡಿಟೋರಿಯಂ, ಮಸೀದಿ, ಮಂದಿರ, ಚರ್ಚ್ಗಳನ್ನು ಬಂದ್ ಮಾಡಲು ಸರ್ಕಾರ ಸೂಚನೆ ನೀಡಿದೆ. ಇನ್ನು ದೇವಸ್ಥಾನಗಳಲ್ಲಿ ಅರ್ಚಕರು ಪೂಜೆ ಮಾಡಬಹುದಾಗಿದ್ದು, ಭಕ್ತರು ತೆರಳುವಂತಿಲ್ಲ. ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್ಗಳು ಓಪನ್ ಇರಲಿದ್ದು, ಕೊವಿಡ್ 19 ನಿಯಂತ್ರಣಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಬಸ್ಗಳಲ್ಲಿ ಶೇ.50ರಷ್ಟು ಮಾತ್ರ ಅವಕಾಶ ಇರಲಿದೆ.
ಒಳಾಂಗಣವಿರಲಿ, ಹೊರಾಂಗಣವಿರಲಿ ಮದುವೆಗೆ 50 ಜನರು, ಶವಸಂಸ್ಕಾರಕ್ಕೆ 20 ಜನರಿಗೆ ಮಾತ್ರ ಅವಕಾಶ. ಏಪ್ರಿಲ್ 23ರ ನಂತರ ಮಾರುಕಟ್ಟೆಗಳು ಸ್ಥಳಾಂತರಗೊಳ್ಳಲಿವೆ ಎಂದು ರವಿಕುಮಾರ್ ತಿಳಿಸಿದ್ದಾರೆ. ಹಾಗೇ ಅಗತ್ಯವಸ್ತುಗಳ ಪೂರೈಕೆ ಇರುತ್ತದೆ. ಪ್ರತಿ ವೀಕೆಂಡ್ನಲ್ಲಿ ಅಂದರೆ ಶನಿವಾರ-ಭಾನುವಾರ ಬೆಳಗ್ಗೆ 6ಗಂಟೆಯಿಂದ 10 ಗಂಟೆವರೆಗೆ ಮಾತ್ರ ಹಣ್ಣು, ತರಕಾರಿ, ಇತರ ವಸ್ತುಗಳು ಸಿಗಲಿವೆ.
ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್, ಎಂಆರ್ಪಿ ಸೆಂಟರ್ಗಳಲ್ಲಿ ಪಾರ್ಸೆಲ್ಗೆ ಅವಕಾಶವಿದ್ದು, ಕಟ್ಟಡ ನಿರ್ಮಾಣ ಕಾಮಗಾರಿಗೆ ಯಾವುದೇ ಅಡ್ಡಿಯಿಲ್ಲ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಇಷ್ಟು ದಿನ ರಾತ್ರಿ 10ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಲ್ಲಿತ್ತು.
ಲಾಕ್ಡೌನ್ ಬಗ್ಗೆ ಚರ್ಚೆಯಾಗಿತ್ತು ಇಂದು ರಾಜ್ಯಪಾಲರ ನೇತೃತ್ವದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಮುಖ್ಯಮಂತ್ರಿ ಸೇರಿ ಹಲವರು ಮತ್ತೊಮ್ಮೆ ಲಾಕ್ಡೌನ್ ಪರ ಒಲವು ತೋರಿಸಿದ್ದರು. ರಾಜ್ಯಪಾಲರೂ ಸಹ ಲಾಕ್ಡೌನ್ ಜಾರಿ ಮಾಡುವುದಾದರೆ ಮಾಡಿ ಎಂದು ಹೇಳಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪನವರೊಂದಿಗೆ ಚರ್ಚಿಸಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಆರ್.ಅಶೋಕ್ ತಿಳಿಸಿದ್ದರು. ಆದರೆ ಇಂದು ಸಂಜೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಲಾಕ್ಡೌನ್ನು ಕೊನೇ ಅಸ್ತ್ರವನ್ನಾಗಿ ಇಟ್ಟುಕೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದರು. ಕಂಟೈನ್ಮೆಂಟ್ ಜೋನ್ಗಳನ್ನಾಗಿ ವಿಂಗಡಿಸಿ ಕೊರೊನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ ಎಂದು ಹೇಳಿದ್ದರು. ಅದಾದ ಮೇಲೆ ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಘೋಷಣೆ ಮಾಡಿದೆ.
ಇದನ್ನೂ ಓದಿ: PM Modi Announcement: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ, ಲಾಕ್ಡೌನ್ ಎಂಬುದು ರಾಜ್ಯಗಳ ಕೊನೆ ಆಯ್ಕೆಯಾಗಲಿ: ಮೋದಿ
Published On - 9:43 pm, Tue, 20 April 21