AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weekend Lockdown: ವೀಕೆಂಡ್​ ಲಾಕ್​ಡೌನ್- ಏನಿರುತ್ತೆ ಮತ್ತು ಏನಿರಲ್ಲ, ಯಾರೆಲ್ಲ ಆಚೆ ಬರಬಹುದು, ಆಸ್ಪತ್ರೆಗಳಿಗೆ ಹೋಗಬಹುದಾ? ಇಲ್ಲಿದೆ ಮಾಹಿತಿ

ಅಗತ್ಯ ಸೇವೆಗಳಿಗೆ ಸಂಬಂಧಿಸಿದ ಉದ್ಯೋಗಿಗಳು, 24x7 ಕೆಲಸ ಮಾಡುವ ಕಾರ್ಖಾನೆ ಮತ್ತು ಸಂಸ್ಥೆಗಳ ನೌಕರರು ವಾರಾಂತ್ಯದ ಕರ್ಫ್ಯೂನಲ್ಲೂ ಕೆಲಸಕ್ಕೆ ಹೋಗಬಹುದಾಗಿದೆ. ಅದರೆ ಕೆಲಸಕ್ಕೆ ಹೋಗುವಾಗ ಅವರು ತಾವು ಕೆಲಸ ಮಾಡುವ ಸಂಸ್ಥೆಯ ಗುರುತಿನ ಕಾರ್ಡ್​ ಅನ್ನು ತಮ್ಮೊಂದಿಗೆ ಇಟ್ಟುಕೊಂಡಿರಬೇಕು.

Karnataka Weekend Lockdown: ವೀಕೆಂಡ್​ ಲಾಕ್​ಡೌನ್- ಏನಿರುತ್ತೆ ಮತ್ತು ಏನಿರಲ್ಲ, ಯಾರೆಲ್ಲ ಆಚೆ ಬರಬಹುದು, ಆಸ್ಪತ್ರೆಗಳಿಗೆ ಹೋಗಬಹುದಾ? ಇಲ್ಲಿದೆ ಮಾಹಿತಿ
ಲಾಕ್​ಡೌನ್ (ಸಂಗ್ರಹ ಚಿತ್ರ)
ಅರುಣ್​ ಕುಮಾರ್​ ಬೆಳ್ಳಿ
|

Updated on:Apr 23, 2021 | 5:11 PM

Share

ಬೆಂಗಳೂರು: ಕರ್ನಾಟಕದಲ್ಲಿ ಅಂಕೆಮೀರಿ ಹಬ್ಬುತ್ತಿರುವ ಕೊವಿಡ್-19 ಪಿಡುಗನ್ನು ಹತೋಟಿಗೆ ತರಲು ರಾಜ್ಯ ಸರ್ಕಾರ ರಾಜ್ಯವಿಡೀ ರಾತ್ರಿ ಕರ್ಫ್ಯೂ ವಿಧಿಸುವ ಜೊತೆಗೆ ಕೆಲವು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು ಅವುಗಳೊಂದಿಗೆ ವಾರಾಂತ್ಯದ ಕರ್ಫ್ಯೂ ಸಹ ಹೇರಿದೆ. ಹೊಸ ಲಾಕ್​ಡೌನ್​ಗೆ ಸಂಬಂಧಿಸಿದ ನಿಯಮಾವಳಿಗಳು ಏಪ್ರಿಲ್ 21ರಿಂದ ಜಾರಿಗೆ ಬಂದಿದ್ದು, ಮೇ 4ರವರೆಗೆ ಅಸ್ತಿತ್ವದಲ್ಲಿರುತ್ತವೆ. ಕೇವಲ ತುರ್ತು ಸಂದರ್ಭ ಮತ್ತು ಅಗತ್ಯ ವಸ್ತುಗಳ ಖರೀದಿಗೆ ಹೊರತುಪಡಿಸಿ ಬೇರೆ ಯಾವ ಕಾರಣಕ್ಕೂ ಜನ ಮನೆಬಿಟ್ಟು ಆಚೆ ಬಾರದಂತೆ ಸರ್ಕಾರ ಆಗ್ರಹಿಸಿದೆ. ಸರ್ಕಾರ ವಿಧಿಸಿರುವ ವಾರಾಂತ್ಯದ ಲಾಕ್​ಡೌನ್ ಇಂದಿನಿಂದ ಅಂದರೆ ಶುಕ್ರವಾರದಿಂದ ಜಾರಿಗೆ ಬಂದಿದ್ದು, ಉಳಿದ ದಿನಗಳಲ್ಲಿ ರಾತ್ರಿ ಕರ್ಪ್ಯೂಗೆ ಸಂಬಂಧಿಸಿದ ಎಲ್ಲ ನಿಯಮಗಳು ಅನ್ವಯವಾಗುತ್ತವೆ.

ಹಾಗಾದರೆ, ಈ ವೀಕೆಂಡ್ ಕರ್ಪ್ಯೂ ಯಾರಿಗೆಲ್ಲ ಅನ್ವಯವಾಗುತ್ತದೆ, ಯಾರು ಮನೆಬಿಟ್ಟು ಆಚೆ ಬರಬಹುದು ಎನ್ನುವುದನ್ನು ತಿಳಿಯುವುದು ಅತ್ಯವಶ್ಯಕವಾಗಿದೆ.

ಅಗತ್ಯ ಸೇವೆಗಳ ಇಲಾಖೆಗಳಲ್ಲಿರುವ ಸರ್ಕಾರಿ ನೌಕರರು ಕೆಲಸಕ್ಕೆ ಹೋಗಬಹುದೇ? ಹೌದು, ಖಂಡಿತವಾಗಿ ಅವರು ಹೋಗಬಹುದು. ಅಗತ್ಯ ಸೇವೆಗಳಿಗೆ ಸಂಬಂಧಿಸಿದ ಉದ್ಯೋಗಿಗಳು, 24×7 ಕೆಲಸ ಮಾಡುವ ಕಾರ್ಖಾನೆ ಮತ್ತು ಸಂಸ್ಥೆಗಳ ನೌಕರರು ವಾರಾಂತ್ಯದ ಕರ್ಫ್ಯೂನಲ್ಲೂ ಕೆಲಸಕ್ಕೆ ಹೋಗಬಹುದಾಗಿದೆ. ಅದರೆ ಕೆಲಸಕ್ಕೆ ಹೋಗುವಾಗ ಅವರು ತಾವು ಕೆಲಸ ಮಾಡುವ ಸಂಸ್ಥೆಯ ಗುರುತಿನ ಕಾರ್ಡ್​ ಅನ್ನು ತಮ್ಮೊಂದಿಗೆ ಇಟ್ಟುಕೊಂಡಿರಬೇಕು.

Guidelines

ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳ ಪ್ರತಿ

ವಾರಾಂತ್ಯದ ಲಾಕ್​ಡೌನ್​ನಲ್ಲಿ ಯಾರೆಲ್ಲ ಮನೆಯಿಂದ ಆಚೆ ಬರಬಹುದು? ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿಯ ಪ್ರಕಾರ ಕೇವಲ ಟೆಲಿಕಾಮ್/ಇಂಟರ್ನೆಟ್ ಸೇವೆ ಒದಗಿಸುವ ಉದ್ಯೋಗಿಗಳು ಮಾತ್ರ ತಮ್ಮ ಗುರುತಿನ ಚೀಟಿಯೊಂದಿಗೆ ಆಚೆ ಬರಬಹುದು. ಐಟಿ/ ಐಟಿಇಎಸ್ ಸಂಸ್ಥೆಗಳ ಅಗತ್ಯ ಸೇವೆಗಳ ವಿಭಾಗಗಳಲ್ಲಿ ಕೆಲಸ ಮಾಡುವವರು ಕಚೇರಿಗಳಿಗೆ ಹೋಗಿ ಕೆಲಸ ಮಾಡಬಹುದು ಆದರೆ ಉಳಿದವರು ತಮ್ಮ ಮನೆಗಳಿಂದಲೇ ಕೆಲಸ (ವರ್ಕ್​ ಫ್ರಂ ಹೋಮ್) ಮಾಡಬೇಕು. ಹಾಗೆಯೇ, ಲಸಿಕೆ ಹಾಕಿಸಿಕೊಳ್ಳಲು ಅರ್ಹರಿರುವ ಜನ ತಮ್ಮ ಗುರುತಿನ ಚೀಟಿಗಳೊಂದಿಗೆ ಮನೆಯಿಂದ ಆಚೆ ಬಂದು ಲಸಿಕಾ ಕೇಂದ್ರಗಳಿಗೆ ಹೋಗಬಹುದು.

ಅಸ್ವಸ್ಥರು ಆಸ್ಪತ್ರೆಗಳಿಗೆ ಹೋಗಬಹುದೇ? ಹೌದು. ಅಸ್ವಸ್ಥರು ಮತ್ತು ಪ್ರಯಾಣಿಸಲೇಬೇಕಾದ ಅನಿವಾರ್ಯತೆ ಇರುವವರು ವಾರಾಂತ್ಯದ ಲಾಕ್​ಡೌನ್​ನಲ್ಲಿ ಆಚೆ ಬರಬಹುದೆಂದು ಸರ್ಕಾರ ಸ್ಪಷ್ಟಪಡಿಸಿದೆ. ಹಾಗೆಯೇ, ವೈದ್ಯಕೀಯ ನೆರವಿನ ಅಗತ್ಯವಿರುವವರು ಸಹ ಮನೆಯಿಂದ ಆಚೆ ಬರಬಹುದು.

ಕಿರಾಣಾ ಅಂಗಡಿಗಳು ತೆರೆದಿರುತ್ತವೆಯೇ, ಹಾಲಿನ ಸರಬರಾಜು ಹೇಗೆ? ಸರ್ಕಾರ ಜಾರಿಗೊಳಿಸಿರುವ ನಿಯಮಾವಳಿಗಳ ಪ್ರಕಾರ, ನಿಮ್ಮ ನೆರೆಹೊರೆಯ ಅಂಗಡಿಗಳು, ಹಾಲಿನ ಪಾರ್ಲರ್​ಗಳು ಶನಿವಾರ ಮತ್ತು ರವಿವಾರಗಳಂದು ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ತೆರೆದಿರುತ್ತವೆ. ಆದರೆ, ಅಗತ್ಯ ವಸ್ತುಗಳ ಆನ್​ಲೈನ್ ಸೇವೆ ಲಾಕ್​ಡೌನ್​ದುದ್ದಕ್ಕೂ ಜಾರಿಯಲ್ಲಿರುತ್ತದೆ.

ವೀಕೆಂಡ್ ಕರ್ಫ್ಯೂ ವೇಳೆ ಬಿಎಂಟಿಸಿ ಬಸ್ ಓಡಾಟ ಇರಲ್ಲ ಟಿವಿ9 ಜೊತೆ ಮಾತಾಡಿರುವ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ ಶಿಖಾ ಅವರು, ವೀಕೆಂಡ್ ಕರ್ಫ್ಯೂ ವೇಳೆ ಬಿಎಂಟಿಸಿ ಬಸ್​ಗಳ ಸಂಚಾರ ಇರೋದಿಲ್ಲ ಅಂತ ತಿಳಿಸಿದ್ದಾರೆ.

ಮೆಟ್ರೋ ಪ್ರಯಾಣಿಕರಿಗೆ ಮುಖ್ಯವಾದ ಮಾಹಿತಿ ವಾರಾಂತ್ಯ ಕರ್ಪ್ಯೂ ಹಿನ್ನಲೆಯಲ್ಲಿ ಶನಿವಾರ ಮತ್ತು ಭಾನುವಾರ ಮೆಟ್ರೋ ಸಂಚಾರ ರದ್ದು ಮಾಡಲಾಗಿದೆ. ಆದರೆ, ಸೋಮವಾರದಿಂದ ಶುಕ್ರವಾರದವರೆಗೆ ಮೆಟ್ರೋ ಸೇವೆ ಎಂದಿನಂತೆ ಬೆಳಗ್ಗೆ 7 ಗಂಟೆಗ ಆರಂಭವಾಗಲಿದೆ ಎಂದು ಬಿಎಮ್​ಆರ್​ಸಿಎಲ್ ತನ್ನ ಪ್ರಕಟಣೆಯೊಂದರಲ್ಲಿ ತಿಳಿಸಿದೆ.

ರಾಜ್ಯದಾದ್ಯಂತ ರಾತ್ರಿ 9 ಗಂಟೆಯಿಂದ ಬೆಳಗಿನ 6 ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿಯಿರುತ್ತದೆ ಎಂದು ಮಾರ್ಗಸೂಚಿಯಲ್ಲಿ ಹೇಳಿರುವ ಸರ್ಕಾರವು, ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವೆರೆಗೆ ಇರುತ್ತದೆ ಎಂದು ತಿಳಿಸಿದೆ.

(Karnataka Weekend Lockdown: What all is available and who can step out of the house? Details are here)

ಇದನ್ನೂ ಓದಿ: Karnataka Lockdown News: ಲಾಕ್​ಡೌನ್​ ಹೇರುವ ಪರಿಸ್ಥಿತಿ ತರಬೇಡಿ.. ಕೊರೊನಾ ಬಗ್ಗೆ ನಿರ್ಲಕ್ಷ್ಯ ಬೇಡ, ಲಸಿಕೆ ತೆಗೆದುಕೊಳ್ಳಿ : ಪ್ರತಾಪ್​ ಸಿಂಹ ಮನವಿ

Published On - 4:58 pm, Fri, 23 April 21

ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ