AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜ.1ರಿಂದ 3 ದಿನ ಮಳೆ ಸಾಧ್ಯತೆ, ಚಳಿ ಮುಂದುವರಿಕೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನವರಿ 1 ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಮೈಕೊರೆವ ಚಳಿ ಮುಂದುವರೆದಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮಳೆImage Credit source: English Jagaran
ನಯನಾ ರಾಜೀವ್
|

Updated on: Dec 28, 2023 | 6:28 AM

Share

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನವರಿ 1 ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಮೈಕೊರೆವ ಚಳಿ ಮುಂದುವರೆದಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಒಣಹವೆ ಮುಂದುವರೆಯಲಿದೆ. ವಿಜಯಪುರದಲ್ಲಿ 10.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್​ ಹಾಗೂ ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್​ ಇದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಶೀತಗಾಳಿ, ಮತ್ತಷ್ಟು ಹೆಚ್ಚಲಿದೆ ಚಳಿ

ಎಚ್​ಎಎಲ್​ನಲ್ಲಿ 28.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ದರ್ಶನ್ ಕೇಸ್: ಪೊಲೀಸರ ತನಿಖೆ ಬಗ್ಗೆ ಅನುಮಾನ; ಗೃಹ ಸಚಿವರ ಸ್ಪಷನೆ ಇಲ್ಲಿದೆ

ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ 5 ಸಾವಿರ ರೂ. ದಂಡ ಫಿಕ್ಸ್!

ದೇವರು ಬಂದಂತೆ ನಟಿಸಿ ದಲಿತ ನವದಂಪತಿಯನ್ನು ದೇಗುಲದಿಂದ ಹೊರಗಟ್ಟಿದ ಅರ್ಚಕ

ಮುನಿರತ್ನಗೆ ಮಹತ್ವದ ಭರವಸೆ ನೀಡಿದ ಡಿಕೆ ಶಿವಕುಮಾರ್

ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ ದಂಡ: ಈ ರೂಲ್ಸ್ ಏಕೆ?

ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ

ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?

ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!

ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ

ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ