ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನವರಿ 1 ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಮೈಕೊರೆವ ಚಳಿ ಮುಂದುವರೆದಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಒಣಹವೆ ಮುಂದುವರೆಯಲಿದೆ. ವಿಜಯಪುರದಲ್ಲಿ 10.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.
ಬೆಂಗಳೂರಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್ ಇದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಶೀತಗಾಳಿ, ಮತ್ತಷ್ಟು ಹೆಚ್ಚಲಿದೆ ಚಳಿ
ಎಚ್ಎಎಲ್ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ