ಅಬಕಾರಿ ಅಧಿಕಾರಿಗಳ ಲಂಚಕ್ಕೆ ಬೇಸತ್ತ ಮಾಲೀಕರು, ರಾಜ್ಯಾದ್ಯಂತ ಈ ದಿನ ಮದ್ಯ ಮಾರಾಟ ಬಂದ್​ಗೆ ನಿರ್ಧಾರ

ಕರ್ನಾಟಕದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಮೂರು ಪಕ್ಷಗಳಿಂದ ಪ್ರಚಾರ ಜೋರಾಗಿದೆ. ಇದರ ಮಧ್ಯ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಒಂದಲ್ಲ ಒಂದು ಆರೋಪಗಳು ಬರುತ್ತಲೇ ಇವೆ. ವಕ್ಫ್​ ಆಸ್ತಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಬೆಳಗಾವಿಯಲ್ಲಿ ಎಸ್​ಡಿಎ ನೌಕರ ಆತ್ಮಹತ್ಯೆ ಪ್ರಕರಣ ಸಂಚಲನ ಮೂಡಿಸಿದೆ. ಇದರ ನಡುವೆ ಇದೀಗ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಹೀಗಾಗಿ ಬಾರ್ ಮಾಲೀಕರು, ಕರ್ನಾಟಕದಾದ್ಯಂತ ಒಂದು ದಿನ ಮದ್ಯ ಮಾರಾಟ ಬಂದ್​ ಮಾಡಲು ಮುಂದಾಗಿದ್ದಾರೆ.

ಅಬಕಾರಿ ಅಧಿಕಾರಿಗಳ ಲಂಚಕ್ಕೆ ಬೇಸತ್ತ ಮಾಲೀಕರು, ರಾಜ್ಯಾದ್ಯಂತ ಈ ದಿನ ಮದ್ಯ ಮಾರಾಟ ಬಂದ್​ಗೆ ನಿರ್ಧಾರ
Follow us
ರಮೇಶ್ ಬಿ. ಜವಳಗೇರಾ
|

Updated on:Nov 05, 2024 | 4:34 PM

ಬೆಂಗಳೂರು, (ನವೆಂಬರ್ 05): ಬೆಂಗಳೂರು: ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ವ್ಯಾಪಾರಿಗಳಿಂದ ಮಾಸಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕರ್ನಾಟಕ ವೈನ್ ಮರ್ಚೆಂಟ್ ಅಸೋಸಿಯೇಷನ್ ​​ಆರೋಪಿಸಿದ್ದು, ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ನ.20ರಂದು ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ಮುಂದಾಗಿದೆ.

ಹೌದು.. ಲಂಚ, ಅಕ್ರಮ ಲೈಸೆನ್ಸ್​ ನವೀಕರಣ ಸೇರಿದಂತೆ ಅಬಕಾರಿ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಇದನ್ನು ವಿರೋಧಿಸಿ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್​ ಕರ್ನಾಟಕ, ನವೆಂಬರ್ 20ರಂದು ರಾಜ್ಯಾದ್ಯಂತ ಮದ್ಯದಂಗಡಿ ಬಂದ್​ ಮಾಡಲು ತೀರ್ಮಾನಿಸಿದೆ.

ಇದನ್ನೂ ಓದಿ: SDA ರುದ್ರಣ್ಣ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್​: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ಕಾರಣ ಎಂದು ಮೆಸೇಜ್

ವರ್ಗಾವಣೆ, ಪ್ರಮೋಷನ್​ಗೆ ಅಧಿಕಾರಿಗಳು ಲಕ್ಷ ಲಕ್ಷ ,ಕೋಟಿ ಕೋಟಿ ಲಂಚ ನೀಡಿದ್ದಾರೆ. ಹೀಗಾಗಿ ಅಧಿಕಾರಿಗಳು ಸನ್ನದುದಾರರಿಂದ ಮನಸೋ ಇಚ್ಚೆ ಲಂಚ ಪಡೆಯುತ್ತಿರುವ ಆರೋಪ ಕೇಳಿಬಂದಿದೆ. ಅಧಿಕಾರಿಗಳ ಲಂಚವತಾರದಿಂದ ಅಂತರಾಜ್ಯ ಮದ್ಯ, ನಕಲಿ ಮದ್ಯ ಹೆಚ್ಚಳವಾಗಿದೆ. ಅಬಕಾರಿ ಇಲಾಖೆಗೆ ಮಂತ್ರಿ ಬೇಕಾಗಿಲ್ಲ. ಹಣಕಾಸು ಸಚಿವರಿಗೆ ಅಬಕಾರಿ ಇಲಾಖೆ ಜವಾಬ್ದಾರಿಗೆ ವಹಿಸುಕೊಳ್ಳುವಂತೆ ಒತ್ತಾಯಿಸುತ್ತಿದೆ. ಅಲ್ಲದೇ ರಾಜ್ಯದ ಅಬಕಾರಿ ಇಲಾಖೆ ಭ್ರಷ್ಟಾಚಾರ ಖಂಡಿಸಿ ಮುಷ್ಕರ ನಡೆಸಲು ಮದ್ಯದಂಗಡಿ ಮಾಲೀಕರು ನಿರ್ಧರಿಸಿದ್ದು, ನವೆಂಬರ್20 ರಾಜ್ಯವ್ಯಾಪ್ತಿ ಮದ್ಯ ಮಾರಾಟ ಬಂದ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಮದ್ಯದಂಗಡಿಯವರು ಬೇಸತ್ತು ರಾಜಭವನ ಮೆಟ್ಟಿಲೇರಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಎಂದು ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್​ಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಹಣಕಾಸು ಇಲಾಖೆ ಜೊತೆ ಅಬಕಾರಿ ಇಲಾಖೆ ಸೇರಿಸುವಂತೆ ಬೇಡಿಕೆ

ಈ ಬಗ್ಗೆ ಕರ್ನಾಟಕ ರಾಜ್ಯ ಮದ್ಯ ಮಾರಾಟಗಾರರ ಸಂಘದ ಉಪಾಧ್ಯಕ್ಷ ಕರುಣಾಕರ ಹೆಗ್ಡೆ ಮಾತನಾಡಿ, ನವೆಂಬರ್ 20 ರೊಳಗೆ ಸಿಎಂ ನಮ್ಮ ಬೇಡಿಕೆ ಕೇಳದಿದ್ರೆ ನಾವು ರಾಜ್ಯದ ಎಲ್ಲಾ ಮದ್ಯ ಮಾರಾಟಗಾರರು ಅಂಗಡಿ ಬಂದ್ ಮಾಡುತ್ತೇವೆ. ನಾವು ಈಗಾಗಲೇ ಅಬಕಾರಿ ಸಚಿವರನ್ನ ಬದಲಿಸಿ, ಹಣಕಾಸು ಇಲಾಖೆ ಜೊತೆ ಅಬಕಾರಿ ಇಲಾಖೆ ಸೇರಿಸಿ ಎಂದು ಮನವಿ ಮಾಡಿದ್ದೇವೆ. ಹಣಕಾಸು ಇಲಾಖೆ ಸಿಎಂ ಹತ್ತಿರ ಇದ್ದರೆ ಅವರೇ ನೋಡಿಕೊಳ್ಳಲ್ಲಿ. ಹಣ ವಸೂಲಿಗಾಗಿ ಸಚಿವರು ಇರೋದಾದ್ರೆ ನಮಗೆ ಅಬಕಾರಿ ಸಚಿವರ ಅವಶ್ಯಕತೆ ಇಲ್ಲ ಎನ್ನುವುದು ನಮ್ಮ ಬೇಡಿಕೆ. ಅಧಿಕಾರಿಗಳು ನೇರವಾಗಿ ಹೇಳ್ತಿದ್ದಾರೆ ನಾವು ಇಷ್ಟು ಕೋಟಿ ಕೊಟ್ಟು ಬಂದಿದ್ದೀವಿ ನಮಗೆ ಇಂತಿಷ್ಟು ಬೇಕು ದುಡ್ಡಿಲ್ಲ ಅಂದರೆ ಆಗೋದಿಲ್ಲ ಅಂತಾರೇ ಎಂದು ಗಂಭೀರ ಆರೋಪ ಮಾಡಿದರು.

ಅಬಕಾರಿ ಸಚಿವರಿಗೆ ದುಡ್ಡು ಕೊಟ್ಟು ಬಂದಿದ್ದಾರೆ ಅನ್ನೋದು ನಮ್ಮ ನೇರವಾದ ದೂರು. ಪ್ರತಿ ತಿಂಗಳು ಪ್ರತಿಯೊಂದು ಅಂಗಡಿಯಿಂದ ಇಂತಿಷ್ಟು ಹಣ ಕೊಡಬೇಕು ಎಂದು ಫಿಕ್ಸ್ ಮಾಡಿದ್ದಾರೆ. ಈ ಹಿಂದೆ ಅಬಕಾರಿ ಡಿಸಿ ಒಂದು ಕೋಟಿ ರುಪಾಯಿ ಕೊಟ್ಟು ಬಂದ್ರೆ, ಇವತ್ತು ನಾಲ್ಕರಿಂದ ಐದು ಕೋಟಿ ರುಪಾಯಿ ನಡೆಯುತ್ತಿದೆ, ಈ ಐದು ಕೋಟಿ ರುಪಾಯಿ ಕೊಟ್ಟ ಅಬಕಾರಿ ಡಿಸಿ, ಹತ್ತರಿಂದ,ಹದಿನೈದು ಕೋಟಿ ರುಪಾಯಿ ಗಳಿಸುತ್ತಿದ್ದಾರೆ. ಆ ಹಣವನ್ನು ಗಳಿಸಲು ಮದ್ಯ ಮಾರಾಟಗಾರರ ಹತ್ತಿರ ಬರ್ತಾರೆ, ಅವರ ಕೆಳಗಿನ ಅಧಿಕಾರಿಗಳಿಗೆ ಒತ್ತಡ ಹಾಕುತ್ತಾರೆ. ಆ ಕೆಲ ಹಂತದ ಅಧಿಕಾರಿಗಳು ಮದ್ಯ ಮಾರಾಟಗಾರರ ಮೇಲೆ ಬೀಳುತ್ತಿದ್ದಾರೆ ಎಂದರು.

ವಿಪಕ್ಷ ನಾಯಕ ಹೇಳಿದ್ದೇನು?

ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿದ್ದು, ಅಬಕಾರಿ ಇಲಾಖೆಯಲ್ಲೂ ಸಾವಿರಾರು ಕೋಟಿ ಲಂಚ ಪಡೆದಿದ್ದಾರೆ. ರಾಜ್ಯಪಾಲರಿಗೆ ಮದ್ಯ ಮಾರಾಟ ಸಂಘ ಬರೆದಿರುವ ಪತ್ರ ಇದಕ್ಕೆ ಸಾಕ್ಷಿ. ಕೇವಲ ಅಬಕಾರಿ ಇಲಾಖೆಯಲ್ಲ, ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ನಡೆದಿದೆ. ರಾಜ್ಯದ ಜನರು ಈ ಕೆಟ್ಟ ಕಾಂಗ್ರೆಸ್ ಸರ್ಕಾರಕ್ಕೆ ಬುದ್ಧಿ ಕಲಿಸಬೇಕಿದೆ ಎಂದು ವಾಗ್ದಾಳಿ ನಡೆಸಿದರು.

ಅಬಕಾರಿ ಸಚಿವರ ಸ್ಪಷ್ಟನೆ ಏನು?

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಏನು ಭ್ರಷ್ಟಾಚಾರ ಆಗಿದೆ ಎಂದು ನನಗೆ ಗೊತ್ತಿಲ್ಲ. ಅಬಕಾರಿ ಇಲಾಖೆಯಲ್ಲಿ ಯಾವ ಭ್ರಷ್ಟಾಚಾರ ಆಗಿದೆ? ಆರೋಪ ಮಾಡಿದ್ದೆಲ್ಲವೂ ನಿಜನಾ? ನಮ್ಮ ಇಲಾಖೆಯಲ್ಲಿ ಯಾರು ಕಿರುಕುಳ ನೀಡಿದ್ದಾರೆಂದು ಹೇಳಲಿ. ಲಂಚ ಪಡೆದ ಅಧಿಖಾರಿಗಳ ಪಟ್ಟಿಯನ್ನು ನನಗೆ ಕೊಡಲಿ ಎಂದು ಹೇಳಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:22 pm, Tue, 5 November 24

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ
ಸಚಿವೆಯನ್ನು ಮಾತಾಡಿಸಲು ಆಸ್ಪತ್ರೆಗೆ ಭೇಟಿ ನೀಡದಂತೆ ಜನರಿಗೆ ವೈದ್ಯರ ಮನವಿ