Karnataka Weather Update: ತಾಪಮಾನ ಇಳಿಕೆ, ಮೈನಡುಗಿಸುವ ಚಳಿ; ನಗರವಾರು ವಿವರ ಇಲ್ಲಿದೆ

ಕರ್ನಾಟಕದಲ್ಲಿ ಚಳಿಗಾಲ ಆರಂಭವಾಗಿದ್ದು, ರಾಜ್ಯದ ಹಲವು ಭಾಗಗಳಲ್ಲಿ ತಾಪಮಾನದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಂದಿನ ದಿನಗಳಲ್ಲಿ 2-3 ಡಿಗ್ರಿ ಸೆಲ್ಸಿಯಸ್ ತಾಪಮಾನ ಇಳಿಕೆಯಾಗುವುದಾಗಿ ಭವಿಷ್ಯ ನುಡಿದಿದೆ. ಬೆಂಗಳೂರು, ಬೆಳಗಾವಿ, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆಯಾಗುವ ಸಾಧ್ಯತೆಯಿದೆ. ನವೆಂಬರ್ 26 ಮತ್ತು 27 ರಂದು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯೂ ಇದೆ.

Karnataka Weather Update: ತಾಪಮಾನ ಇಳಿಕೆ, ಮೈನಡುಗಿಸುವ ಚಳಿ; ನಗರವಾರು ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Nov 22, 2024 | 7:48 AM

ಚಳಿಗಾಲ ಆರಂಭವಾಗಿದೆ. ಕರ್ನಾಟಕದ ವಿವಿಧಡೆ ಚಳಿ ಜೋರಾಗಿದೆ. ಡಿಸೆಂಬರ್​ ಮತ್ತು ಜನವರಿ ಅಂತ್ಯದವರೆಗೆ ಚಳಿಯ ಅಬ್ಬರ ಜೋರಾಗುವ ಸಾಧ್ಯತೆ ಇದೆ. ವಾಡಿಕೆಗಿಂತ 2 ರಿಂದ 3 ಡಿಗ್ರಿಯಷ್ಟು ​ನಷ್ಟು ಉಷ್ಣಾಂಶ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು (ನ.22) ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಂಟಿಗ್ರೆಡ್​ಗಿಂತ ಕಳೆಗೆ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್​, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ರಾಯಚೂರು, ಕಲಬುರಗಿ ಕೆಲವು ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿ ಕನಿಷ್ಠ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್​ವರಗೂ ಇಳಿಕೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ಹೇಳಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಶುಕ್ರವಾರ 28 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ, ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ. ಇನ್ನು, ಮಂಗಳೂರಿನಲ್ಲಿ ಗರಿಷ್ಠ 33, ಕನಿಷ್ಠ 24, ಶಿವಮೊಗ್ಗದಲ್ಲಿ ಗರಿಷ್ಠ 31 ಮತ್ತು ಕನಿಷ್ಠ 16, ಬೆಳಗಾವಿಯಲ್ಲಿ ಗರಿಷ್ಠ 29 ಮತ್ತು ಕನಿಷ್ಠ 16, ಮೈಸೂರಿನಲ್ಲಿ ಗರಿಷ್ಠ 29 ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್​ನಷ್ಟು ತಪಾಮಾನ ವರದಿಯಾಗಲಿದೆ.

ಕಳೆದ 24 ಗಂಟೆಯಲ್ಲಿ ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 35.5 ಡಿಗ್ರಿ ಸೆಲ್ಸಿಯಸ್​ ಮತ್ತು ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ 12.2 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ. ರಾಯಚೂರು, ಗದಗ, ಬದಾಮಿ ಮತ್ತು ಬಾಗಲಕೋಟೆ, ಧಾರವಾಡ, ಕಲಬುರಗಿ, ಬೆಳಗಾವಿ ಮತ್ತು ಬೆಂಗಳೂರು ಎಲೆಕ್ಟ್ರಾನಿಕ್​ ಸಿಟಿಯಲ್ಲಿ 15 ಡಿಗ್ರಿ ಸೆಲ್ಸಿಯಸ್​ಗಿಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಬೆಳಗಿನ ಜಾಔ ಮಂಜು ಅಥವಾ ಇಬ್ಬನಿ ಬಿದ್ದಿದೆ. ಇನ್ನು ನವೆಂಬರ್​ 26 ಮತ್ತು 27 ರಂದು ದಕ್ಷಿಣ ಒಳನಾಡಿನ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ