ಚಳಿಗಾಲ ಆರಂಭವಾಗಿದೆ. ಕರ್ನಾಟಕದ ವಿವಿಧಡೆ ಚಳಿ ಜೋರಾಗಿದೆ. ಡಿಸೆಂಬರ್ ಮತ್ತು ಜನವರಿ ಅಂತ್ಯದವರೆಗೆ ಚಳಿಯ ಅಬ್ಬರ ಜೋರಾಗುವ ಸಾಧ್ಯತೆ ಇದೆ. ವಾಡಿಕೆಗಿಂತ 2 ರಿಂದ 3 ಡಿಗ್ರಿಯಷ್ಟು ನಷ್ಟು ಉಷ್ಣಾಂಶ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು (ನ.22) ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಂಟಿಗ್ರೆಡ್ಗಿಂತ ಕಳೆಗೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ರಾಯಚೂರು, ಕಲಬುರಗಿ ಕೆಲವು ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿ ಕನಿಷ್ಠ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್ವರಗೂ ಇಳಿಕೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ಹೇಳಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಶುಕ್ರವಾರ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ, ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇನ್ನು, ಮಂಗಳೂರಿನಲ್ಲಿ ಗರಿಷ್ಠ 33, ಕನಿಷ್ಠ 24, ಶಿವಮೊಗ್ಗದಲ್ಲಿ ಗರಿಷ್ಠ 31 ಮತ್ತು ಕನಿಷ್ಠ 16, ಬೆಳಗಾವಿಯಲ್ಲಿ ಗರಿಷ್ಠ 29 ಮತ್ತು ಕನಿಷ್ಠ 16, ಮೈಸೂರಿನಲ್ಲಿ ಗರಿಷ್ಠ 29 ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ನಷ್ಟು ತಪಾಮಾನ ವರದಿಯಾಗಲಿದೆ.
ಕಳೆದ 24 ಗಂಟೆಯಲ್ಲಿ ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 35.5 ಡಿಗ್ರಿ ಸೆಲ್ಸಿಯಸ್ ಮತ್ತು ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ 12.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಯಚೂರು, ಗದಗ, ಬದಾಮಿ ಮತ್ತು ಬಾಗಲಕೋಟೆ, ಧಾರವಾಡ, ಕಲಬುರಗಿ, ಬೆಳಗಾವಿ ಮತ್ತು ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯಲ್ಲಿ 15 ಡಿಗ್ರಿ ಸೆಲ್ಸಿಯಸ್ಗಿಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಬೆಳಗಿನ ಜಾಔ ಮಂಜು ಅಥವಾ ಇಬ್ಬನಿ ಬಿದ್ದಿದೆ. ಇನ್ನು ನವೆಂಬರ್ 26 ಮತ್ತು 27 ರಂದು ದಕ್ಷಿಣ ಒಳನಾಡಿನ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ