AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡ ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಸೆಳೆಯಲು ಮೊಬೈಲ್ ವ್ಯಾನ್ ಕ್ಯಾಂಪೇನ್; ಏನಿದು ಹೊಸ ಉಪಕ್ರಮ?

ಬಡ ಮಕ್ಕಳನ್ನು ಅಂಗನವಾಡಿಗೆ ಸೆಳೆಯಲು ವಿನೂತನ ಅಭಿಯಾನ ಹಮ್ಮಿಕೊಂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

ಬಡ ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಸೆಳೆಯಲು ಮೊಬೈಲ್ ವ್ಯಾನ್ ಕ್ಯಾಂಪೇನ್; ಏನಿದು ಹೊಸ ಉಪಕ್ರಮ?
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Jun 23, 2023 | 6:56 PM

Share

ಬೆಂಗಳೂರು: ಚಿಂದಿ ಆಯುವ, ರದ್ದಿ ಹೆಕ್ಕುವ ಮತ್ತು ಬಡತನದ ಅಂಚಿನಲ್ಲಿರುವ ಕುಟುಂಬಗಳ ಮಕ್ಕಳಿಗೆ ಶಿಕ್ಷಣ ದೊರೆಯುವಂತೆ ಮಾಡಲು ಮತ್ತು ಅವರಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಮೂಡಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ (Women and Child Development Department) ವಿನೂತನ ಹೆಜ್ಜೆ ಇಟ್ಟಿರುವ ಬಗ್ಗೆ ವರದಿಯಾಗಿದೆ. ಮಕ್ಕಳಿಗೆ ಕಲಿಕೆಯ ಅಗತ್ಯತೆಯನ್ನು ಮನವರಿಕೆ ಮಾಡಿಕೊಡಲು ಮತ್ತು ಆರೋಗ್ಯಕರ ಜೀವನವನ್ನು ಉತ್ತೇಜಿಸಲು ಅವರನ್ನು ಅಂಗನವಾಡಿಗಳಿಗೆ ಸೇರಿಸುವಂತೆ ಪೋಷಕರ ಮನವೊಲಿಸಲು ‘ವಾಹನ ಆಧಾರಿತ ಸಂಚಾರಿ ಅಭಿಯಾನ (Mobile van campaign)’ವನ್ನು ಇಲಾಖೆ ಆರಂಭಿಸಿದೆ.

ಸುಮಾರು 20,000 ಮಂದಿಯಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮುಂದಿನ 10 ದಿನಗಳಲ್ಲಿ ಸಂಚಾರಿ ವಾಹನವು 5,000 ಮನೆಗಳಿಗೆ ತಲುಪಲಿದೆ. 25 ಅಂಗನವಾಡಿ ಕೇಂದ್ರಗಳು ಮತ್ತು 25 ಸರ್ಕಾರಿ ಶಾಲೆಗಳ ನಿಕಟ ಸಹಭಾಗಿತ್ವದಲ್ಲಿ ಅಭಿಯಾನ ಆರಂಭಿಸಲಾಗಿದೆ. 3 ರಿಂದ 6 ವರ್ಷ ವಯಸ್ಸಿನ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲಾಗುತ್ತದೆ ಎಂದು ಇಲಾಖೆ ನೀಡಿದ ಮಾಹಿತಿ ಆಧರಿಸಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಕಳೆದ ವರ್ಷದ ಉಪಕ್ರಮದ ಯಶಸ್ಸಿನ ಆಧಾರದಲ್ಲಿ ಈ ವರ್ಷವೂ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಸೂಕ್ತ ನಡವಳಿಕೆ, ಮುಟ್ಟಿನ ಆರೋಗ್ಯ ಮತ್ತು ನೈರ್ಮಲ್ಯ, ನೀರು ಹಾಗೂ ನೈರ್ಮಲ್ಯ ಮತ್ತಿತರ ಅಭ್ಯಾಸಗಳ ಬಗ್ಗೆ ಜನರಿಗೆ ತಿಳಿಸಲು ವಾಹನಗಳನ್ನು ಬಳಸಲಾಗಿತ್ತು. ಈ ಅಭಿಯಾನವು ಸಮುದಾಯದೊಂದಿಗೆ ತೊಡಗಿಸಿಕೊಳ್ಳಲು ಪರಿಣಾಮಕಾರಿ ಮಾಧ್ಯಮವೆಂದು ಸಾಬೀತಾಗಿದೆ ಎಂದು ವರದಿ ಉಲ್ಲೇಖಿಸಿದೆ.

‘ಸೇವ್ ದ ಚಿಲ್ಡ್ರನ್’ ಸಹಯೋಗದಲ್ಲಿ ಮತ್ತು ಸಾಮಾಜಿಕ ಉಪಕ್ರಮದ ಭಾಗವಾಗಿ ‘ಹೆಚ್​ ಆ್ಯಂಡ್ ಎಂ ಫೌಂಡೇಶನ್‌’ನಿಂದ ದೊರೆಯುವ ಧನಸಹಾಯವನ್ನು ಪಡೆದುಕೊಂಡು ಈ ಅಭಿಯಾನ ನಡೆಸಲಾಗುತ್ತದೆ. ಅಭಿಯಾನಕ್ಕೆ ಇಲಾಖೆಯ ಉಪನಿರ್ದೇಶಕ ಎಸ್ ಸಿದ್ಧರಾಮಣ್ಣ ಈಗಾಗಲೇ ಚಾಲನೆ ನೀಡಿದ್ದಾರೆ.

ಇದನ್ನೂ ಓದಿ: Tv9 Education Summit: ಎರಡನೇ ದಿನಕ್ಕೆ ಕಾಲಿಟ್ಟ ಎಜುಕೇಷನ್ ಎಕ್ಸ್ ಪೋಗೆ ಭರ್ಜರಿ ರೆಸ್ಪಾನ್ಸ್, ಇ ಬೈಕ್ ಗೆದ್ದ ಗಾನವಿ

30 ಕೊಳೆಗೇರಿ ಸಮುದಾಯಗಳಿಗೆ ಸಮಗ್ರ ಶಿಕ್ಷಣ, ಮಕ್ಕಳ ಸ್ನೇಹಿ ನೈರ್ಮಲ್ಯ ಸೌಲಭ್ಯಗಳು ಮತ್ತು ಸುರಕ್ಷಿತ ಕುಡಿಯುವ ನೀರನ್ನು ಒದಗಿಸುವ ಮೂಲಕ ಶೈಕ್ಷಣಿಕ ಅಂತರವನ್ನು ಕಡಿಮೆ ಮಾಡಲು ಅಭಿಯಾನವು ಪ್ರಯತ್ನಿಸುತ್ತದೆ ಎಂದು ಸೇವ್ ದಿ ಚಿಲ್ಡ್ರನ್​ನ ದಕ್ಷಿಣ ಭಾರತದ ಸಂವಹನ ಮತ್ತು ಪ್ರಚಾರ ವ್ಯವಸ್ಥಾಪಕ, ರೂಪಾಲಿ ಗೋಸ್ವಾಮಿ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಚಿಂದಿ ಆಯುವ ಸಮುದಾಯದ ಪ್ರತಿಯೊಂದು ಮಗುವನ್ನು ಹತ್ತಿರದ ಅಂಗನವಾಡಿ ಕೇಂದ್ರಗಳಿಗೆ ದಾಖಲಿಸುವುದು ನಮ್ಮ ಉದ್ದೇಶವಾಗಿದೆ. ನಾವು ಆಟಗಳನ್ನು ಆಧಾರಿತ ಕಲಿಕಾ ವಿಧಾನವನ್ನು ಒದಗಿಸುತ್ತೇವೆ, ದೃಶ್ಯ ಕಲಿಕೆಗೆ ಒತ್ತು ನೀಡುತ್ತೇವೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಸಂತೋಷದಾಯಕ ವಾತಾವರಣವನ್ನು ಸೃಷ್ಟಿಸಲು ತರಬೇತಿ ಕಾರ್ಯಕ್ರಮಗಳನ್ನು ನಡೆಸುತ್ತೇವೆ. ಈ ಅಂಗನವಾಡಿ ಕೇಂದ್ರಗಳು ಉಚಿತ ಮತ್ತು ಎಲ್ಲರಿಗೂ ಪ್ರವೇಶಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 pm, Fri, 23 June 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?