AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗನವಾಡಿಯಲ್ಲಿ ಕೊಳೆತ ಮೊಟ್ಟೆ ಪೂರೈಕೆ ಆರೋಪ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?

ಬಿಜೆಪಿ ಸರಕಾರ ಕರಾವಳಿಗೆ ಕುಚ್ಚಲಕ್ಕಿ ನೀಡಬೇಕೆಂದು ಆಗ್ರಹಿಸಿದ ಬಗ್ಗೆ ಪ್ರತಿಯಿಸಿದ ಹೆಬ್ಬಾಳ್ಕರ್, ನಿರ್ದಿಷ್ಟವಾಗಿ ಕುಚ್ಚಲಕ್ಕಿಯನ್ನೇ ಕೊಡುತ್ತೇವೆ ಎಂದು ಹೇಳಲಾಗುವುದಿಲ್ಲ. ಅಕ್ಕಿ ಮತ್ತು ಆಹಾರ ಧಾನ್ಯವನ್ನು ನಾವು ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಅಂಗನವಾಡಿಯಲ್ಲಿ ಕೊಳೆತ ಮೊಟ್ಟೆ ಪೂರೈಕೆ ಆರೋಪ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?
ಲಕ್ಷ್ಮೀ ಹೆಬ್ಬಾಳ್ಕರ್
ಪ್ರಜ್ವಲ್ ಅಮೀನ್​, ಉಡುಪಿ
| Updated By: Ganapathi Sharma|

Updated on: Jul 08, 2023 | 7:02 PM

Share

ಉಡುಪಿ: ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಸರಬರಾಜು ಮಾಡಿರುವುದು ನನ್ನ ಗಮನಕ್ಕೂ ಬಂದಿದೆ, ಸುದ್ದಿ ವಾಹಿನಿಗಳವರೇ ನನ್ನ ಗಮನಕ್ಕೆ ತಂದಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕಾರ್ (Lakshmi Hebbalkar) ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ನಮ್ಮ ಇಲಾಖೆಯ ಮುಖ್ಯ ಉದ್ದೇಶ ಅಂಗನವಾಡಿಗೆ ಬರುವ ಮಕ್ಕಳ ಆರೋಗ್ಯ ಕಾಳಜಿ. ಅಂಗನವಾಡಿಗಳಿಗೆ ಬಡವರ ಮಕ್ಕಳೇ ಹೆಚ್ಚಾಗಿ ಬರುತ್ತಾರೆ, ಅಂತಹ ಕಡೆಗಳಲ್ಲಿ ಈ ಘಟನೆ ನಡೆದಿದೆ. ಇದರಿಂದ ನಮ್ಮ ಇಲಾಖೆಗೆ ಬಹಳಷ್ಟು ಮುಜುಗರ ಆಗಿದೆ. ಆದಷ್ಟು ಶೀಘ್ರದಲ್ಲಿ ವ್ಯವಸ್ಥೆಯನ್ನು ಬದಲಾವಣೆ ಮಾಡುವ ಚಿಂತನೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಎರಡು ಕಡೆ ಈ ರೀತಿಯಾದ ಕುರಿತು ವರದಿಯಾಗಿದೆ. ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇನೆ. ಹಾಗೆಂದು ಎಲ್ಲ ಕಡೆಯೂ ಅವ್ಯವಹಾರ ಆಗಿದೆ ಅಂತ ಹೇಳಲು ಬಯಸುವುದಿಲ್ಲ. ಕೆಲವೊಂದು ಕಡೆ ಆಹಾರಧಾನ್ಯ, ಮೊಟ್ಟೆ ಕಳಪೆ ನೀಡಿರುವ ಬಗ್ಗೆ ವರದಿಯಾಗಿದೆ. ಆ ಬಗ್ಗೆ ಕ್ರಮ ಕೈಗೊಳ್ಳುತ್ತೇನೆ ಎಂದು ಹೆಬ್ಬಾಳ್ಕರ್ ತಿಳಿಸಿದ್ದಾರೆ.

ರಾಜ್ಯ ಬಜೆಟ್ ವಿಚಾರದಲ್ಲಿ ಪ್ರತಿಪಕ್ಷಗಳ ಅಸಮಾಧಾನ, ಒಂದು ವರ್ಗಕ್ಕೆ ಮಾತ್ರ ಸೀಮಿತವಾಗಿ ಬಜೆಟ್ ಮಂಡನೆ ಮಾಡಲಾಗಿದೆ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷ ಜಾತ್ಯತೀತ ವಿಚಾರಧಾರೆಗಳನ್ನು ಇಟ್ಟುಕೊಂಡಿರುವ ಪಕ್ಷ. ಬಸವ, ಬುದ್ಧ ಅಂಬೇಡ್ಕರ್ ಅವರ ತತ್ವಗಳನ್ನ ಆದರ್ಶವಾಗಿಟ್ಟುಕೊಂಡು ಸರಕಾರ ನಡೆಸುತ್ತಿದ್ದೇವೆ. ನಮ್ಮದು ಜಾತ್ಯಾತೀತ ವಿಚಾರಧಾರೆ. ಹೀಗಾಗಿ ಪ್ರತಿಪಕ್ಷಗಳ ಆರೋಪಕ್ಕೆ ಹುರುಳಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Hassan News: ಅಂಗನವಾಡಿಯಲ್ಲಿ ಗರ್ಭಿಣಿಯರು, ಬಾಣಂತಿಯರಿಗೆ ಕೊಳೆತ ಮೊಟ್ಟೆಗಳ ಪೂರೈಕೆ ಆರೋಪ: ಕ್ರಮಕ್ಕೆ ಒತ್ತಾಯ

ಬಿಜೆಪಿ ಸರಕಾರ ಕರಾವಳಿಗೆ ಕುಚ್ಚಲಕ್ಕಿ ನೀಡಬೇಕೆಂದು ಆಗ್ರಹಿಸಿದ ಬಗ್ಗೆ ಪ್ರತಿಯಿಸಿ, ನಿರ್ದಿಷ್ಟವಾಗಿ ಕುಚ್ಚಲಕ್ಕಿಯನ್ನೇ ಕೊಡುತ್ತೇವೆ ಎಂದು ಹೇಳಲಾಗುವುದಿಲ್ಲ. ಅಕ್ಕಿ ಮತ್ತು ಆಹಾರ ಧಾನ್ಯವನ್ನು ನಾವು ನೀಡುತ್ತೇವೆ. ಐದು ಕೆಜಿ ಜೊತೆಗೆ ಇನ್ನೂ ಐದು ಕೆಜಿ ಸೇರಿಸಿ 10 ಕೆಜಿ ನೀಡುತ್ತೇವೆ. ಆಹಾರಧಾನ್ಯವನ್ನು ಅಷ್ಟೇ ನೀಡುತ್ತೇವೆ, ನಿರ್ದಿಷ್ಟವಾಗಿ ಇದನ್ನೇ ಕೊಡುತ್ತೇನೆ ಎಂದು ಹೇಳಲಾಗುವುದಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ