ಅಯೋಧ್ಯೆಗೆ ತೆರಳುವ ಕನ್ನಡಿಗರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ: ರಾಮನೂರಿನಲ್ಲಿ ತಲೆ ಎತ್ತಲಿದೆ ಕರ್ನಾಟಕ ಯಾತ್ರಿ ನಿವಾಸ
ಅಯೋಧ್ಯೆಗೆ ತೆರಳಬೇಕು ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರನ ದರ್ಶನ ಪಡೆಯಬೇಕು ಅಂತ ಅನೇಕ ಭಕ್ತರ ಆಸೆಯಾಗಿದೆ. ಹೀಗೆ ಕರ್ನಾಟಕದಿಂದ ಅಯೋಧ್ಯೆಗೆ ಹೋಗುವ ಭಕ್ತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಅದೇನು ಸಿಹಿ ಸುದ್ದಿ ಇಲ್ಲಿದೆ ಓದಿ...
ಬೆಂಗಳೂರು, ಜನವರಿ 10: ಅಯೋಧ್ಯೆಯಲ್ಲಿ ಭವ್ಯ ಶ್ರೀ ರಾಮಮಂದಿರ (Ram Mndir) ನಿರ್ಮಾಣವಾಗಿದೆ. ಜನವರಿ 22 ರಂದು ರಾಮಮಂದಿರ ಉದ್ಘಾಟನೆಯಾಗಲಿದೆ ಮತ್ತು ಅಂದೇ ರಾಮಲಲ್ಲಾ (ಬಾಲ ರಾಮನ) ಪ್ರಾಣ ಪ್ರತಿಷ್ಠಾಪನೆ ನೆರವೇರುತ್ತದೆ. ಈ ಸುಸಂದರ್ಭವನ್ನು ಕಣ್ತುಂಬಿಕೊಳ್ಳಲು ಅಸಂಖ್ಯ ಜನರು ಕಾದು ಕುಳಿತಿದ್ದಾರೆ. ಅಯೋಧ್ಯೆಗೆ (Ayodhya) ತೆರಳಬೇಕು ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರನ (Shri Ram) ದರ್ಶನ ಪಡೆಯಬೇಕು ಅಂತ ಅನೇಕ ಭಕ್ತರ ಆಸೆಯಾಗಿದೆ. ಹೀಗೆ ಕರ್ನಾಟಕದಿಂದ ಅಯೋಧ್ಯೆಗೆ ಹೋಗುವ ಭಕ್ತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಲು ಮುಂದಾಗಿದೆ.
ರಾಮನೂರು ಅಯೋಧ್ಯೆಯಲ್ಲಿ ಕನ್ನಡಿಗರಿಗಾಗಿ ಕರ್ನಾಟಕ ಯಾತ್ರಿ ನಿವಾಸ ತಲೆ ಎತ್ತಲಿದೆ. ಹೌದು ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಿಗಳು ಅಯೋಧ್ಯೆಗೆ ಆಗಮಿಸಲಿದ್ದು, ಇವರಿಗಾಗಿ ವಸತಿ, ಊಟದ ವ್ಯವಸ್ಥೆಗಾಗಿ ಅತಿಥಿ ಗೃಹ ನಿರ್ಮಾಣ ಮಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಕರ್ನಾಟಕ ಮುಜರಾಯಿ ಇಲಾಖೆ ಪತ್ರ ಬರೆದಿದೆ.
ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಯಂದು 30 ವರ್ಷಗಳ ಮೌನವ್ರತ ಅಂತ್ಯಗೊಳಿಸಿ ‘ರಾಮ’ ಎನ್ನಲಿದ್ದಾರೆ ಮೌನ ಮಾತಾ
ಕರ್ನಾಟಕದಿಂದ ಬರುವ ಭಕ್ತರಿಗೆ ಸರಯೂ ನದಿ ಸಮೀಪದಲ್ಲಿ ಅತಿಥಿ ಗೃಹ ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023ರ ಅಗಸ್ಟ್ ತಿಂಗಳಲ್ಲಿ ಉತ್ತರ ಪ್ರದೇಶ ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದಕ್ಕೂ ಮುನ್ನ 2020ರಲ್ಲಿ ಬಿಎಸ್ ಯಡಿಯೂರಪ್ಪ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದರು.
ರಾಜ್ಯದ ಮನವಿಗೆ ಉತ್ತರ ಪ್ರದೇಶ ಸರ್ಕಾರದ ಹೌಸಿಂಗ್ ಬೋರ್ಡ್ ಪ್ರತಿಕ್ರಿಯೆ ಪತ್ರ ಕಳುಹಿಸಿದೆ. ಅಯೋಧ್ಯೆಯಲ್ಲಿ ಕರ್ನಾಟಕ ಅತಿಥಿ ಗೃಹ ನಿರ್ಮಾಣಕ್ಕೆ ಬೇಕಾದ ಪೂರ್ವ ತಯಾರಿ ನಡೆಯುತ್ತಿದೆ. ಈ ಮೂಲಕ ರಾಜ್ಯದ ಪ್ರವಾಸಿಗರಿಗೆ ವಾಸ್ತವ ಹೂಡಲು ತೊಂದರೆ ಆಗದಂತೆ ಕ್ರಮ ವಹಿಸಲಾಗುವುದು. ಇನ್ನೊಂದು ವರ್ಷದಲ್ಲಿ ರಾಮಮಂದಿರದ ಬಳಿ ಅತಿಥಿ ಗೃಹ ತಲೆ ಎತ್ತಲಿದೆ. ರಾಜ್ಯದ ಭಕ್ತಾದಿಗಳ ಅನುಕೂಲಕ್ಕೆ ಸರಯೂ ನದಿ ಸಮೀಪದಲ್ಲಿ ಐದು ಎಕರೆ ಜಾಗದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಮುಜರಾಯಿ ಇಲಾಖೆ ಅತಿಥಿ ಗೃಹ ನಿರ್ಮಿಸುತ್ತಿದೆ ಅಂತ ತಿಳಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ