AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀವ್ರ ಸ್ವರೂಪ ಪಡೆದ ಕರ್ನಾಟಕ ಯೂತ್ ಕಾಂಗ್ರೆಸ್​ ಗಲಾಟೆ: ಅಧ್ಯಕ್ಷ ವಿರುದ್ಧ ಗಂಭೀರ ಆರೋಪ

ಕರ್ನಾಟಕ ಯುವ ಕಾಂಗ್ರೆಸ್​​​​​ನಲ್ಲಿ ರಾಜಕೀಯ ಬೆಳವಣಿಗೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಯೂತ್ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿದಂತೆ 15 ಪದಾಧಿಕಾರಿಗಳಿಗೆ ಕೊಕ್ ಕೊಟ್ಟ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಎರಡು ಗುಂಪುಗಳ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ.ಇದರ ಮಧ್ಯೆ ಅಮಾನತುಗೊಂಡಿರುವ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ತೀವ್ರ ಸ್ವರೂಪ ಪಡೆದ ಕರ್ನಾಟಕ ಯೂತ್ ಕಾಂಗ್ರೆಸ್​ ಗಲಾಟೆ: ಅಧ್ಯಕ್ಷ ವಿರುದ್ಧ ಗಂಭೀರ ಆರೋಪ
Manjunath Gowda And Deepika Reddy
ಅನಿಲ್​ ಕಲ್ಕೆರೆ
| Edited By: |

Updated on: May 18, 2026 | 3:44 PM

Share

ಬೆಂಗಳೂರು, (ಮೇ 18): ಕರ್ನಾಟಕ ಯುವ ಕಾಂಗ್ರೆಸ್​​​ನಲ್ಲಿ (Karnataka Youth Congress) ರಾಜಕೀಯ ಪ್ರಹಸನಗಳು ನಡೆಯುತ್ತಿವೆ. ಯೂತ್ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿದಂತೆ 15 ಪದಾಧಿಕಾರಿಗಳನ್ನ ವಜಾ ಮಾಡಿರುವುದು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದೀಗ ಪರಸ್ಪರ ಕೈ- ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಹೌದು…ಕೆಪಿಸಿಸಿ (KPCC) ಕಚೇರಿಯಲ್ಲಿಂದು ನೀಟ್​​​ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಪ್ರತಿಭಟನೆ ನಡೆಸಲು ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ (Manjunath Gowda) ಹಾಗೂ ಅಮಾನತುಗೊಂಡಿರುವ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಬೆಂಬಲಿಗರ ನಡುವೆ ತೀವ್ರ ವಾಗ್ವಾದ, ತಳ್ಳಾಟ-ನೂಕಾಟ ನಡೆದು ಕೊನೆಗೆ ಪರಿಸ್ಥಿತಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಇದರ ಮಧ್ಯೆ ದೀಪಿಕಾ ರೆಡ್ಡಿ (Deepika Reddy) ಅವರು ಪ್ರತಿಕ್ರಿಯಿಸಿದ್ದು, ಇದು ಶಿಸ್ತಿನ ಕ್ರಮವಲ್ಲ, ವೈಯಕ್ತಿಕ ಸೇಡು ಎಂದು ಅಧ್ಯಕ್ಷ ಎಚ್.ಎಸ್.ಮಂಜುನಾಥ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

  • ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಮಂಜುನಾಥ್ ವಿರುದ್ಧ ಗಂಭೀರ ಆರೋಪ.
  • ಪ್ರೆಸ್‌ನೋಟ್ ರಿಲೀಸ್ ಮಾಡಿದ ಆರೋಪಿಸಿದ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ
  • ಹುದ್ದೆ ತಡೆಹಿಡಿದಿದ್ದು ಕಾನೂನುಬಾಹಿರ ಹಾಗೂ ಪ್ರತೀಕಾರದ ಕ್ರಮ
  • ಇದು ಶಿಸ್ತಿನ ಕ್ರಮವಲ್ಲ, ವೈಯಕ್ತಿಕ ಸೇಡು ಎಂದು ಆರೋಪಿಸಿದ ದೀಪಿಕಾ ರೆಡ್ಡಿ

ಇದು ಶಿಸ್ತಿನ ಕ್ರಮವಲ್ಲ, ವೈಯಕ್ತಿಕ ಸೇಡು

ಕೆಪಿಸಿಸಿ ಕಚೇರಿಯಲ್ಲಿ ನಡೆದ ಗಲಾಟೆ ಬಳಿಕ ದೀಪಿಕಾ ರೆಡ್ಡಿ ಅವರು ಪ್ರೆಸ್‌ನೋಟ್ ರಿಲೀಸ್ ಮಾಡಿದ್ದು, ಹುದ್ದೆ ತಡೆಹಿಡಿದಿದ್ದು ಕಾನೂನುಬಾಹಿರ ಹಾಗೂ ಪ್ರತೀಕಾರದ ಕ್ರಮ. ಇದು ಶಿಸ್ತಿನ ಕ್ರಮವಲ್ಲ, ವೈಯಕ್ತಿಕ ಸೇಡು. ಸ್ತ್ರೀ ದ್ವೇಷದ ಪಿತೂರಿ ಮತ್ತು ಸೇಡಿನ ರಾಜಕೀಯಕ್ಕೆ ಮೌನವಾಗುವುದಿಲ್ಲ. ಕಾಂಗ್ರೆಸ್ ಪಕ್ಷ ಹಾಗೂ ಹೈಕಮಾಂಡ್ ಮೇಲಿನ ನಿಷ್ಠೆ ಅಚಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ನೋಡಿ: ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ: ಕಾರಣ ಇಲ್ಲಿದೆ

ಪಿತೂರಿ ಮತ್ತು ಮಾನಸಿಕ ಕಿರುಕುಳ

ಯುವ ಕಾಂಗ್ರೆಸ್ ಚುನಾವಣೆಯಲ್ಲಿ 2.95 ಲಕ್ಷ ಮತಗಳ ಪಡೆದಿದ್ದೇನೆ. ದೇಶದಲ್ಲೇ ಅತಿ ಹೆಚ್ಚು ಮತ ಪಡೆದ ಮಹಿಳಾ ಅಭ್ಯರ್ಥಿಗಳಲ್ಲಿ ನಾನು ಒಬ್ಬಳು. ಪುರುಷ ಪ್ರಾಬಲ್ಯದ ರಾಜಕೀಯದಲ್ಲಿ ಅವರ ವಿರುದ್ಧ ಹೋರಾಟ ನಡೆಸಿದ್ದೇನೆ. ಚುನಾವಣೆಯ ಬಳಿಕವೂ ಪಕ್ಷ ಸಂಘಟನೆಗಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದೇನೆ. ಎಚ್.ಎಸ್. ಮಂಜುನಾಥ್ ಅಭದ್ರತೆ ಮತ್ತು ಅಸೂಯೆಯಿಂದ ನಡೆದುಕೊಳ್ಳುತ್ತಿದ್ದಾರೆ. ಮಹಿಳಾ ನಾಯಕಿಯರನ್ನು ವ್ಯವಸ್ಥಿತವಾಗಿ ಗುರಿ ಮಾಡಲಾಗ್ತಿದೆ. ಮಂಜುನಾಥ್ ಗೌಡ ನೇತೃತ್ವದ ಯುವ ಕಾಂಗ್ರೆಸ್ ಮಹಿಳೆಯರಿಗೆ ಅಸುರಕ್ಷಿತ ವಾತಾವರಣ ನಿರ್ಮಿಸಲಾಗಿದೆ. ಚುನಾವಣೆಯ ಬಳಿಕ ರಾಜಕೀಯ ಪಿತೂರಿ ಮತ್ತು ಮಾನಸಿಕ ಕಿರುಕುಳ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಸಾರ್ವಜನಿಕ ಬೆಂಬಲ ಹೊಂದಿರುವ ಮಹಿಳಾ ನಾಯಕರನ್ನು ಬೆದರಿಸಲು ಅಧಿಕಾರ ದುರುಪಯೋಗ ಮಾಡಿಕೊಳ್ತಿದ್ದಾರೆ. ಈ ಕ್ರಮಗಳು ನನ್ನನ್ನು ಬೆದರಿಸಲಾರವು. ಜನಾದೇಶವನ್ನು ಯಾವುದೇ ಆದೇಶ ಅಳಿಸಲಾರದು. ಈ ವಿಚಾರವನ್ನ ರಾಷ್ಟ್ರೀಯ ನಾಯಕರ ಮುಂದೆ ತೆಗೆದುಕೊಂಡು ಹೋಗುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ದಿಢೀರ್ 15 ಪದಾಧಿಕಾರಿಗಳ ವಜಾ: ಹೈಕಮಾಂಡ್​​ನ ಈ ದಿಟ್ಟ ಕ್ರಮಕ್ಕೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಂಚಲನ

ನನಗೆ 8 ಜಿಲ್ಲೆಗಳನ್ನ ಕೊಟ್ಟಿದ್ದಾರೆ. ಹೆದರದೆ ಕೆಲಸ ಮಾಡಿದ್ದೇನೆ. ನಾನು ಮಾಡಿದ ಕೆಲಸದ ಬಗ್ಗೆ ದಾಖಲೆ ಇದೆ. ರಾಹುಲ್ ಗಾಂಧಿ ಹೇಳಿದ ಹಾಗೆ ಚುನಾವಣೆಯಲ್ಲಿ‌ ಕೆಲಸ ಮಾಡಿದ್ದೇವೆ. ನನ್ನ ಬಿಟ್ಟು ಎಲ್ಲಾ ಪದಾಧಿಕಾರಿಗಳಿಗೆ ತೊಂದರೆ ಕೊಟ್ರು. ಹೊಡೆದು ಆಳುವ ನೀತಿಯನ್ನ ಮಂಜುನಾಥ್ ಮಾಡಿದ್ದಾರೆ. ಸಭೆಯಿಂದ ನಮ್ಮ‌ ಪದಾಧಿಕಾರಿ ಎದ್ದು ಹೊರಡಲು ಪ್ರಯತ್ನ ಮಾಡಿದ್ರು. ಎಲ್ಲರನ್ನೂ ಜೊತೆ ತೆಗೆದುಕೊಂಡು ಹೋಗುವುದು ರಾಹುಲ್ ಗಾಂಧಿ ಐಡಿಯಾಲಜಿ. ನಮ್ಮ ಸಮಸ್ಯೆಯನ್ನ ಡಿಸಿಎಂ, ಸಿಎಂ ಕರೆಸಿ ಬಗೆಹರಿಸುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅನಿಲ್​ ಕಲ್ಕೆರೆ
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ