ಯುವನಿಧಿಗೆ ಈವರಗೆ 32 ಸಾವಿರ ಅರ್ಜಿ ಸಲ್ಲಿಕೆ: ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ಹೆಚ್ಚು

ರಾಜ್ಯ ಸರ್ಕಾರದ ಐದನೇ ಗ್ಯಾರೆಂಟಿಯಾಗಿರುವ ಯುವನಿಧಿಗೆ ಅರ್ಜಿಸಲ್ಲಿಕೆ ಪ್ರಾರಂಭವಾಗಿ ಸುಮಾರು 10 ದಿನಗಳು ಕಳೆದಿವೆ. ಈ 10 ದಿನಗಳಲ್ಲಿ ಇಲ್ಲಿಯವರೆಗೆ ಒಟ್ಟು 32,184 ಪದವೀಧರರು ಅರ್ಜಿ ಸಲ್ಲಿಸಿದ್ದಾರೆ. ಅಂದರೆ ಶೇ 6 ಪ್ರತಿಶತದಷ್ಟು ಅರ್ಹ ಫಲಾನುಭವಿಗಳು ಮಾತ್ರ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಯುವನಿಧಿಗೆ ಈವರಗೆ 32 ಸಾವಿರ ಅರ್ಜಿ ಸಲ್ಲಿಕೆ: ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ಹೆಚ್ಚು
ಯುವನಿಧಿ
Follow us
ವಿವೇಕ ಬಿರಾದಾರ
|

Updated on: Jan 05, 2024 | 8:53 AM

ಬೆಂಗಳೂರು, ಜನವರಿ 05: ರಾಜ್ಯ ಸರ್ಕಾರದ (Karnataka Government) ಐದನೇ ಗ್ಯಾರೆಂಟಿಯಾಗಿರುವ ಯುವನಿಧಿಗೆ (Yuva nidhi) ಅರ್ಜಿಸಲ್ಲಿಕೆ ಪ್ರಾರಂಭವಾಗಿ ಸುಮಾರು 10 ದಿನಗಳು ಕಳೆದಿವೆ. ಈ 10 ದಿನಗಳಲ್ಲಿ ಇಲ್ಲಿಯವರೆಗೆ ಒಟ್ಟು 32,184 ಪದವೀಧರರು ಅರ್ಜಿ ಸಲ್ಲಿಸಿದ್ದಾರೆ. ಕೇವಲ 32,000 ಅರ್ಜಿಗಳು ಸಲ್ಲಿಕೆಯಾಗಿವೆ. ಅಂದರೆ ಶೇ 6 ಪ್ರತಿಶತದಷ್ಟು ಅರ್ಹ ಫಲಾನುಭವಿಗಳು ಮಾತ್ರ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಈ ಯೋಜನೆ ಅಡಿಯಲ್ಲಿ 2023 ರಲ್ಲಿ ಪದವಿ ಮತ್ತು ಡಿಪ್ಲೊಮಾ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ (Students) ಎರಡು ವರ್ಷಗಳ ಅವಧಿಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಂಚಿಕೊಂಡಿರುವ ಅಂಕಿಅಂಶಗಳ ಪ್ರಕಾರ, ಬೆಳಗಾವಿ ಮತ್ತು ಬೆಂಗಳೂರು ನಗರ ಜಿಲ್ಲೆಗಳು ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿವೆ. ಬೆಳಗಾವಿಯಲ್ಲಿ 3,900 ಅರ್ಜಿಗಳು ಸಲ್ಲಿಕೆಯಾಗಿದ್ದು, ಬೆಂಗಳೂರು ನಗರದಲ್ಲಿ 2,853 ಅರ್ಜಿಗಳು ಸಲ್ಲಿಕೆಯಾಗಿವೆ.

ಮೂರನೇ ಅತಿ ಹೆಚ್ಚು ಅರ್ಜಿ ಸಲ್ಲಿಕೆ ಬಾಗಲಕೋಟೆ 1,943, ನಂತರದ ಸ್ಥಾನದಲ್ಲಿ ವಿಜಯಪುರ 1,741 ಮತ್ತು ರಾಯಚೂರು 1,714 ಜಿಲ್ಲೆಗಳಿವೆ. ಉಡುಪಿ 236, ಕೊಡಗು 120, ಚಾಮರಾಜನಗರ 237 ಮತ್ತು ರಾಮನಗರ ಜಿಲ್ಲೆಯಲ್ಲಿ 329 ಅರ್ಜಿಗಳು ಸಲ್ಲಿಕೆಯಾಗಿವೆ.

ಇದನ್ನೂ ಓದಿ: Yuvanidhi Application: ಯುವನಿಧಿ ಸ್ಕೀಂಗೆ ಅರ್ಜಿ ಹಾಕುವುದು ಎಲ್ಲಿ, ಹೇಗೆ?

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಅರ್ಜಿ ಸಲ್ಲಿಕೆಯಲ್ಲಿ ಬೆಂಗಳೂರು ಮತ್ತು ಬೆಳಗಾವಿ ಅಗ್ರಸ್ಥಾನದಲ್ಲಿವೆ. ಈ ಎರಡೂ ಜಿಲ್ಲೆಗಳು ಹೆಚ್ಚು ಕಾಲೇಜುಗಳನ್ನು ಹೊಂದಿವೆ ಅಂದರೆ ಹೆಚ್ಚು ಪದವೀಧರರು ಈ ಜಿಲ್ಲೆಗಳಲ್ಲಿದ್ದಾರೆ.

2022-2023ರ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದ ಸುಮಾರು 5.3 ಲಕ್ಷ ಯುವಕರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಆದರೆ, ಉದ್ಯೋಗ ಹೊಂದಿರುವವರು ಮತ್ತು ಉನ್ನತ ಶಿಕ್ಷಣ ಪಡೆಯುತ್ತಿರುವವರು ಅರ್ಹರಲ್ಲ. ಈ ಆರ್ಥಿಕ ವರ್ಷಕ್ಕೆ ಒಟ್ಟು 250 ಕೋಟಿ ರೂ.ಗಳನ್ನು ಮೀಸಲಿಡಲಾಗಿದ್ದು, ಮುಂದಿನ ವರ್ಷ ಈ ಯೋಜನೆಗೆ 1,250 ಕೋಟಿ ರೂ. ಮತ್ತು ನಂತರದ ವರ್ಷ 2,500 ಕೋಟಿ ರೂ. ಮೀಸಲಿಡಲಾಗುತ್ತದೆ. ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಜನವರಿ 12ರಂದು ಶಿವಮೊಗ್ಗದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಭತ್ಯೆ ಜಮಾ ಮಾಡಲಾಗುವುದು.

ಯೋಜನೆಯಡಿ ನಿರುದ್ಯೋಗ ಸಹಾಯಧನವನ್ನು ಪದವಿ ಪಡೆದವರಿಗೆ ಮಾಸಿಕ 3,000 ರೂ. ಮತ್ತು ಡಿಪ್ಲೊಮಾ ಪಡೆದವರಿಗೆ 1,500 ರೂ. ನೀಡಲಾಗುತ್ತದೆ. ವಿದ್ಯಾರ್ಥಿಗಳ ಫಲಿತಾಂಶಗಳ ಘೋಷಣೆಯ 180 ದಿನಗಳ ನಂತರ ನಿರುದ್ಯೋಗಿಯಾಗಿ ಉಳಿಯುವ ಅಭ್ಯರ್ಥಿಗಳು ಭತ್ಯೆಗೆ ಅರ್ಹರಾಗಿರುತ್ತಾರೆ. ಫಲಿತಾಂಶಗಳನ್ನು ಪ್ರಕಟಿಸಿದ ದಿನಾಂಕದಿಂದ ಎರಡು ವರ್ಷಗಳ ಅವಧಿಗೆ ಅಥವಾ ಫಲಾನುಭವಿಯು ಉದ್ಯೋಗಿ/ಸ್ವಯಂ ಉದ್ಯೋಗಿಯಾಗುವವರೆಗೆ, ಭತ್ಯೆ ನೀಡಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು