Exams 2021: ಪದವಿ ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ ವಿತರಣೆ ಪೂರ್ಣಗೊಳ್ಳುವ ಮುನ್ನವೇ ಪರೀಕ್ಷಾ ದಿನಾಂಕ ಪ್ರಕಟಿಸಿದ ವಿಶ್ವವಿದ್ಯಾಲಯಗಳು

| Updated By: guruganesh bhat

Updated on: Jun 27, 2021 | 3:10 PM

ಜುಲೈ19ರಿಂದ ವಿಜಯನಗರ ಕೃಷ್ಣದೇವರಾಯ ವಿವಿಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆ, ಜುಲೈ 20 ರಿಂದ ಕರ್ನಾಟಕ ಅಕ್ಕಮಹಾದೇವಿ ಮಹಿಳಾ ವಿವಿ ಪರೀಕ್ಷೆ, ಆಗಸ್ಟ್ 2ರಿಂದ ಕರ್ನಾಟಕ ವಿವಿ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ವಿಶ್ವವಿದ್ಯಾಲಯಗಳು ತಿಳಿಸಿವೆ.

Exams 2021: ಪದವಿ ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ ವಿತರಣೆ ಪೂರ್ಣಗೊಳ್ಳುವ ಮುನ್ನವೇ ಪರೀಕ್ಷಾ ದಿನಾಂಕ ಪ್ರಕಟಿಸಿದ ವಿಶ್ವವಿದ್ಯಾಲಯಗಳು
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ ವಿತರಣೆ ಪೂರ್ಣಗೊಳ್ಳುವ ಮುಂಚೆಯೇ ರಾಜ್ಯದ 10ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಲಾಗಿದೆ. ಸರ್ಕಾರ ಪರೀಕ್ಷೆ ನಡೆಸುವ ಬಗ್ಗೆ ಈವರೆಗೂ ನಿರ್ದೇಶನ ನೀಡಿಲ್ಲವಾದರೂ ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಲಾಗಿದೆ. ಗುಲ್ಬರ್ಗಾ ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ಜುಲೈ 15ರಿಂದ ಪರೀಕ್ಷೆ ಆರಂಭಿಸಲಾಗಿವುದು ಎಂದು ವಿವಿ ಪ್ರಕಟಿಸಿದೆ. ಜುಲೈ19ರಿಂದ ವಿಜಯನಗರ ಕೃಷ್ಣದೇವರಾಯ ವಿವಿಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆ, ಜುಲೈ 20 ರಿಂದ ಕರ್ನಾಟಕ ಅಕ್ಕಮಹಾದೇವಿ ಮಹಿಳಾ ವಿವಿ ಪರೀಕ್ಷೆ, ಆಗಸ್ಟ್ 2ರಿಂದ ಕರ್ನಾಟಕ ವಿವಿ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ವಿಶ್ವವಿದ್ಯಾಲಯಗಳು ತಿಳಿಸಿವೆ.

ಪದವಿ ಕಾಲೇಜು ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿ, ಸಹಾಯಕ ಸಿಬ್ಬಂದಿಗೆ ಲಸಿಕೆ ನೀಡುವುದಕ್ಕೆ ನಿರ್ಧಾರವಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ಸಮನ್ವಯದೊಂದಿಗೆ ಹಾಗೂ ಕೇಂದ್ರದ ಮಾರ್ಗಸೂಚಿಯಂತೆ ಈ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಡಿಸಿಎಂ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಟ್ವೀಟ್ ಮಾಡಿದ್ದರು. ಕಾಲೇಜು ಆರಂಭಕ್ಕೂ ಮುನ್ನ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು. ಕೊವಿಡ್ ಲಸಿಕೆ ನೀಡಿದ ಬಳಿಕವಷ್ಟೇ ಕಾಲೇಜು ಆರಂಭವಾಗುತ್ತದೆ. ಜುಲೈ ತಿಂಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ವ್ಯಾಕ್ಸಿನ್ ನೀಡಲಾಗುವುದು ಎಂದು ಡಿಸಿಎಂ ಹೇಳಿದ್ದರು.

ಕೊರೊನಾ ಮೂರನೇ ಅಲೆ ಅಪ್ಪಳಿಸುವ ಹಿನ್ನೆಲೆ ಜುಲೈ ತಿಂಗಳೊಳಗೆ ಸಂಪೂರ್ಣವಾಗಿ 18 ವರ್ಷನವರಿಗೆ ವ್ಯಾಕ್ಸಿನ್ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮತ್ತು ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ತಿಳಿಸಿದ್ದು, ಕಾಲೇಜು ಹಂತದಲ್ಲೇ ಎಲ್ಲರಿಗೂ ವ್ಯಾಕ್ಸಿನ್ ನೀಡಲು ಸರ್ಕಾರ ಮುಂದಾಗಿದೆ.

ಶೈಕ್ಷಣಿಕ ಚಟುವಟಿಕೆಗಳು ನಿಂತಿಲ್ಲ
ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆಗಳು ನಿಂತಿಲ್ಲ. ಆನ್​ಲೈನ್​ನಲ್ಲಿ ಚಟುವಟಿಕೆಗಳು ಮುಂದುವರಿದಿದೆ ಎಂದು ಅಶ್ವತ್ಥ್ ನಾರಾಯಣ ತಿಳಿಸಿದ್ದರು. ವಿದ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂದಿಗೆ ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭಕ್ಕೆ ಅವಕಾಶ ನೀಡಲಾಗುವುದು. ಒಂದು ಡೋಸ್ ಲಸಿಕೆ ಪಡೆದ ಬಳಿಕ ಕಾಲೇಜು ಆರಂಭಿಸಲಾಗುತ್ತದೆ. ಅಲ್ಲಿಯವರೆಗೂ ಕಾಲೇಜಿಗೆ ಬರುವುದು ಕಡ್ಡಾಯ ಮಾಡಿಲ್ಲ. ಒಂದು ಡೋಸ್ ಲಸಿಕೆ ಬಳಿಕ ಕಾಲೇಜಿಗೆ ಬರಬಹುದು. ಇಮ್ಯೂನಿಟಿ ಪವರ್ ಹೆಚ್ಚುತ್ತದೆ. ಎರಡನೇ ಡೋಸ್ ನಂತರ ಕೊಡಬಹುದು ಎಂದು ತಿಳಿಸಿದ್ದರು.

ಇದನ್ನೂ ಓದಿ: 

ಕೊವಿಡ್ ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭ; ಡಾ.ಸಿ.ಎನ್.ಅಶ್ವತ್ಥ್ ನಾರಾಯಣ

ಕೊವಿಡ್ ಲಸಿಕೆಯನ್ನು ಗರ್ಭಿಣಿಯರಿಗೆ ನೀಡಬೇಕು, ಅದು ಅವರಿಗೆ ಉಪಯುಕ್ತ: ಐಸಿಎಂಆರ್

( Karnatakas 10 universities announce exam date before covid Vaccine distributed to students)