ವಿಜಯೇಂದ್ರ ಸೇರಿ ಮೊದಲ ಬಾರಿ ಆಯ್ಕೆಯಾದ 27 ಶಾಸಕರಿಂದ ಸಿಎಂಗೆ ಪತ್ರ: 100 ಕೋಟಿ ರೂ. ಬಿಡುಗಡೆಗೆ ಮನವಿ

27 ಮಂದಿ ನೂತನ ಶಾಸಕರು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ 2 ವರ್ಷಗಳಿಗೆ 100 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಮಳೆಹಾನಿ, ಕೃಷಿಹಾನಿ, ಮೂಲಸೌಕರ್ಯಗಳ ಅಭಿವೃದ್ಧಿಗೆ ಈ ಅನುದಾನ ಅತ್ಯಗತ್ಯ ಎಂದು ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಜೆಡಿಎಸ್ ಶಾಸಕರೂ ಪತ್ರಕ್ಕೆ ಸಹಿ ಹಾಕಿದ್ದಾರೆ.

ವಿಜಯೇಂದ್ರ ಸೇರಿ ಮೊದಲ ಬಾರಿ ಆಯ್ಕೆಯಾದ 27 ಶಾಸಕರಿಂದ ಸಿಎಂಗೆ ಪತ್ರ: 100 ಕೋಟಿ ರೂ. ಬಿಡುಗಡೆಗೆ ಮನವಿ
ವಿಜಯೇಂದ್ರ ಸೇರಿ ಮೊದಲ ಬಾರಿ ಆಯ್ಕೆಯಾದ 27 ಶಾಸಕರಿಂದ ಸಿಎಂಗೆ ಪತ್ರ
Follow us
ಕಿರಣ್​ ಹನಿಯಡ್ಕ
| Updated By: Ganapathi Sharma

Updated on: Dec 17, 2024 | 2:41 PM

ಬೆಂಗಳೂರು, ಡಿಸೆಂಬರ್ 17: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಇದೇ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದ 27 ಮಂದಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದು, ವಿಶೇಷ ಅನುದಾನ ಬಿಡುಗಡೆಗೆ ಮನವಿ ಮಾಡಿದ್ದಾರೆ. ಅನುದಾನ ಕೊರತೆ ಹಿನ್ನೆಲೆ, ಮೊದಲ ಬಾರಿ ಗೆದ್ದವರಿಗೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಮನವಿ ಮಾಡಲಾಗಿದೆ. 2 ವರ್ಷಗಳಿಗೆ 100 ಕೋಟಿ ರೂ. ಅನುದಾನ ಬಿಡುಗಡೆಗೆ ಮಾಡುವಂತೆ ಶಾಸಕರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಉಡುಪಿ ಶಾಸಕ ಯಶ್​ಪಾಲ್ ಸುವರ್ಣ ಬರೆದ ಪತ್ರಕ್ಕೆ ಬಿವೈ ವಿಜಯೇಂದ್ರ ಸೇರಿ 27 ಶಾಸಕರು ಸಹಿ ಹಾಕಿದ್ದಾರೆ. ಜೆಡಿಎಸ್ ಪಕ್ಷದ ಶಾಸಕರೂ ಸಹಿ ಹಾಕಿದ್ದಾರೆ.

ಶಾಸಕರ ಪತ್ರದಲ್ಲೇನಿದೆ?

ಮೊದಲ ಬಾರಿಗೆ ನೂತನವಾಗಿ ಶಾಸಕರಾಗಿ ಆಯ್ಕೆಯಾಗಿ 1 ವರ್ಷ 7 ತಿಂಗಳುಗಳು ಪೂರ್ಣಗೊಳಿಸಿ, 5ನೇ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿದ್ದೇವೆ. ಕ್ಷೇತ್ರದ ಜನರಿಗೆ ನೂತನವಾಗಿ ಆಯ್ಕೆಯಾದ ನಮ್ಮೆಲ್ಲ ಶಾಸಕರ ಮೇಲೆ ಹೆಚ್ಚಿನ ನಿರೀಕ್ಷೆಯಿದೆ. ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಹಾಗೂ ನಿರ್ವಹಣೆ ಕೆಲಸಗಳಿಗೆ ಜನರಿಂದ ದಿನಂಪ್ರತಿ ಮನವಿಗಳನ್ನು ಸ್ವೀಕರಿಸುತ್ತಿದ್ದೇವೆ. ಜನರ ಸಮಸ್ಯೆಗಳನ್ನು ನಿವಾರಿಸಲು ಮತ್ತು ಕ್ಷೇತ್ರದಲ್ಲಿ ಹೊಸ ಅಗತ್ಯ ಯೋಜನೆಗಳನ್ನು ಪ್ರಾರಂಭಿಸಲು ಜನರು ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ನಾವು ಶಾಸಕರಾದಾಗಿನಿಂದಲೂ ಯಾವುದೇ ಗಮನಾರ್ಹ ಅನುದಾನ ಲಭಿಸದೆ ಜನರ ಆದ್ಯತೆಯ ಬೇಡಿಕೆಗಳಿಗೆ, ತುರ್ತು ಸಮಸ್ಯೆಗಳಿಗೆ, ಮೂಲಭೂತ ಸೌಕರ್ಯಗಳ ನಿರ್ವಹಣೆಗೆ ಹಾಗೂ ಅಭಿವೃದ್ಧಿಯ ಕಾಮಗಾರಿಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಪ್ರಗತಿಯಲ್ಲಿರುವ ಅನೇಕ ಕಾಮಗಾರಿಗಳು ನಿಧಾನಗತಿಯಲ್ಲಿವೆ ಅಥವಾ ಸ್ಥಗಿತಗೊಂಡಿದೆ ಎಂದು ಶಾಸಕರು ಸಿಎಂ ಬಳಿ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಹಾಲು ಉತ್ಪಾದಕರಿಗೆ 9 ತಿಂಗಳಿನಿಂದ ಬಿಡುಗಡೆಯಾಗಿಲ್ಲ ಪ್ರೋತ್ಸಾಹ ಧನ: ಖುದ್ದು ಸಚಿವರೇ ನೀಡಿದ್ರು ಮಾಹಿತಿ

ಪ್ರಥಮ ಬಾರಿ ಶಾಸಕರಾಗಿ ಆಯ್ಕೆಯಾದ ನಮ್ಮ ಕ್ಷೇತ್ರಕ್ಕೆ ಮಳೆಹಾನಿ, ಕೃಷಿಹಾನಿ, ಸಮುದ್ರ ಕೊರೆತ, ಆಸ್ಪತ್ರೆ, ಶಾಲಾ ಕಟ್ಟಡ, ರಸ್ತೆಗಳ ದುರಸ್ಥಿ-ನಿರ್ಮಾಣ, ಕಾಲುಸಂಕ ಹಾಗೂ ಮೋರಿಗಳ ದುರಸ್ಥಿ, ನಿಮಾಣ, ನದಿ ದಂಡೆ ಸಂರಕ್ಷಣೆ ಹಾಗೂ ವಿದ್ಯುತ್-ಬೀದಿ ದೀಪಗಳ ಸೌಕರ್ಯ ಇತ್ಯಾದಿ ಸಮಸ್ಯೆಗಳಿಗೆ ಸ್ಪಂದಿಸಲು 2023-24 ಮತ್ತು 2024-25ನೇ ಸಾಲಿಗೆ ತಲಾ 50.00 ಕೋಟಿ ರೂ.ನಂತೆ ಒಟ್ಟಾರೆ 100 ಕೋಟಿ ರೂ. ವಿಶೇಷ ಅನುದಾನ ಮಂಜೂರು ಮಾಡಿಸಿ, ಕ್ಷೇತ್ರ ಅಭಿವೃದ್ಧಿಗೆ ಸಹಕರಿಸಬೇಕಾಗಿ ಕೋರುತ್ತೇವೆ ಎಂದು ಶಾಸಕರು ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ