ದೇಶದ ಸರಾಸರಿ ಜಿಎಸ್‌ಡಿಪಿಗಿಂತ ಏರುಗತಿಯಲ್ಲಿ ಕರ್ನಾಟಕದ ಆರ್ಥಿಕ ಪ್ರಗತಿ

ಕರ್ನಾಟಕದ ತಲಾ ಜಿಎಸ್‌ಡಿಪಿ ದೇಶದಲ್ಲೇ ಅತ್ಯಧಿಕವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗ್ಯಾರಂಟಿ ಸೇರಿದಂತೆ ರಾಜ್ಯ ಸರ್ಕಾರದ ಹಲವು ಜನಪರ ಯೋಜನೆಗಳು ಅಭಿವೃದ್ಧಿಯ ಫಲ ಎಲ್ಲಾ ವರ್ಗಗಳಿಗೂ ತಲುಪುವುದನ್ನು ಖಾತ್ರಿಪಡಿಸಿದೆ. ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಪ್ರಗತಿಯನ್ನು ಒಂದುಗೂಡಿಸುವ ಕರ್ನಾಟಕದ ಆರ್ಥಿಕ ಮಾದರಿಯ ಯಶಸ್ಸನ್ನು ಇದು ತೋರಿಸುತ್ತದೆ ಎಂದಿದ್ದಾರೆ. 

ದೇಶದ ಸರಾಸರಿ ಜಿಎಸ್‌ಡಿಪಿಗಿಂತ ಏರುಗತಿಯಲ್ಲಿ ಕರ್ನಾಟಕದ ಆರ್ಥಿಕ ಪ್ರಗತಿ
ದೇಶದ ಸರಾಸರಿ ಜಿಎಸ್‌ಡಿಪಿಗಿಂತ ಏರುಗತಿಯಲ್ಲಿ ಕರ್ನಾಟಕದ ಆರ್ಥಿಕ ಪ್ರಗತಿ

Updated on: Oct 21, 2024 | 3:16 PM

ಬೆಂಗಳೂರು, ಅಕ್ಟೋಬರ್ 21: ಕರ್ನಾಟಕ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, 2023-24ನೇ ಹಣಕಾಸು ಸಾಲಿನಲ್ಲಿ ಶೇ.10.2ರಷ್ಟು ಜಿಎಸ್‌ಡಿಪಿ ಪ್ರಗತಿ ಸಾಧಿಸಿದೆ. ಇದು ಗ್ಯಾರಂಟಿ ಯೋಜನೆಗಳು ಹಾಗೂ ಸರ್ಕಾರದ ಆರ್ಥಿಕ ನಿರ್ವಹಣೆಯ ಫಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.

ದೇಶದ ಸರಾಸರಿ ಜಿಎಸ್‌ಡಿಪಿ ಶೇ.8.2 ಆಗಿದೆ

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಈ ಅವಧಿಯಲ್ಲಿ ದೇಶದ ಸರಾಸರಿ ಜಿಎಸ್‌ಡಿಪಿ ಶೇ.8.2 ಆಗಿದೆ. ಕಳೆದ ಬಾರಿ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ, ಜಾಗತಿಕವಾಗಿ ಐಟಿ ಮಾರುಕಟ್ಟೆ ಹಿನ್ನಡೆ ಅನುಭವಿಸಿದ್ದರೂ, ಕರ್ನಾಟಕ ಉತ್ತಮ ಆರ್ಥಿಕ ಪ್ರಗತಿ ಸಾಧಿಸಿದೆ ಎಂದಿದ್ದಾರೆ.

ಇದನ್ನೂ ಓದಿ: ಕರುನಾಡ ಹೆಮ್ಮೆ; ಭಾರತದ ಮೊದಲ ಬುಲೆಟ್ ಟ್ರೈನು ನಿರ್ಮಾಣ ಬೆಂಗಳೂರಿನಲ್ಲಿ; ಬೆಮೆಲ್ ಸಂಸ್ಥೆಗೆ ಗುತ್ತಿಗೆ

ನ್ಯಾಷನಲ್‌ ಸ್ಟಾಟಿಸ್ಟಿಕಲ್‌ ಎಸ್ಟಿಮೇಟ್‌ (ಎನ್‌ಎಸ್‌ಸಿ) ಆರಂಭದಲ್ಲಿ ಶೇ. 4ರಷ್ಟು ಕರ್ನಾಟಕದ ಜಿಎಸ್‌ಡಿಪಿ ಅಭಿವೃದ್ಧಿ ದರವನ್ನು ಅಂದಾಜಿಸಿತ್ತು. ಆದರೆ ಹಣಕಾಸು ವರ್ಷದ ಅಂತ್ಯಕ್ಕೆ ರಾಜ್ಯದ ಅಭಿವೃದ್ದಿ ದರ ಶೇ.13.1 ರಷ್ಟಾಗಿದ್ದು, ಎನ್‌ಎಸ್‌ಸಿ ಕರ್ನಾಟಕದ ಪ್ರಗತಿಯನ್ನು ತಪ್ಪಾಗಿ ಅಂದಾಜಿಸಿರುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಆರ್ಥಿಕತೆಯಲ್ಲಿ ಸ್ಥಿರ

ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕೃಷಿ ವಲಯದ ಅಭಿವೃದ್ದಿ ಉದ್ದೇಶಿತ ಪ್ರಮಾಣದಲ್ಲಿ ಸಾಧ್ಯವಾಗಿರುವುದಿಲ್ಲ. ಕರ್ನಾಟಕದ ಜಿಎಸ್‌ವಿಎ (Gross State Value Added) ಅಂದರೆ ಒಟ್ಟು ಆರ್ಥಿಕತೆಯಲ್ಲಿ ಐಟಿ ಮತ್ತು ಹಾರ್ಡ್‌ವೇರ್‌ ವಲಯದ ಪಾಲು ಶೇ.28ರಷ್ಟಿದ್ದು, ಜಾಗತಿಕ ಆರ್ಥಿಕ ಹಿಂಜರಿತದಿಂದಾಗಿ ಈ ವಲಯ ಜಾಗತಿಕವಾಗಿ ಹಿನ್ನಡೆ ಅನುಭವಿಸಿದೆ. ಭಾರತದ ಐಟಿ ವಲಯ 2022ರ ಹಣಕಾಸು ಸಾಲಿನಲ್ಲಿ ಶೇ.15.5 ರಷ್ಟು ಪ್ರಗತಿ ಕಂಡದ್ದು, 2023ರ ಅವಧಿಯಲ್ಲಿ ಶೇ.8ಕ್ಕೆ ಕುಸಿತ ಅನುಭವಿಸಿದೆ. ಆದರೆ ಉತ್ತಮ ಆಡಳಿತ ಮತ್ತು ಬಹುವಲಯಗಳ ಅಭಿವೃದ್ಧಿಯಿಂದಾಗಿ ಕರ್ನಾಟಕ ರಾಜ್ಯದ ಆರ್ಥಿಕತೆ ಸ್ಥಿರವಾಗಿರುವುದು ಕಂಡು ಬಂದಿದೆ.

2024-25ನೇ ಹಣಕಾಸು ಸಾಲಿಗೆ ಎನ್‌ಎಸ್ಸಿ ಕರ್ನಾಟಕ ರಾಜ್ಯಕ್ಕೆ ಶೇ.9.4 ಜಿಎಸ್‌ಡಿಪಿ ಪ್ರಗತಿಯನ್ನು ಅಂದಾಜಿಸಿದ್ದು, ಇದು ರಾಷ್ಟ್ರೀಯ ಸರಾಸರಿ ಶೇ.10.5ಕ್ಕಿಂತ ಸ್ವಲ್ಪ ಕಡಿಮೆಯಾಗಿದೆ. ಆದರೆ ಹಣಕಾಸು ಸಚಿವಾಲಯ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಗಮನದಲ್ಲಿಟ್ಟಿಕೊಂಡು ಈ ಅವಧಿಯಲ್ಲಿ ಕರ್ನಾಟಕದ ಜಿಎಸ್‌ಡಿಪಿ ದರವನ್ನು ಶೇ.14ರಷ್ಟು ಅಂದಾಜಿಸಲಾಗಿದೆ. 2024ರ ಸೆಪ್ಟಂಬರ್‌ ಅವಧಿಯಲ್ಲಿ ಕರ್ನಾಟಕ ವರ್ಷದಿಂದ ವರ್ಷಕ್ಕೆ ಜಿಎಸ್‌ಟಿ ಸಂಗ್ರಹದಲ್ಲಿ ಶೇ.10ರಷ್ಟು ಹಾಗೂ ಮುದ್ರಾಂಕ ಶುಲ್ಕ ಸಂಗ್ರಹದಲ್ಲಿ ಶೇ.24ರಷ್ಟು ಹೆಚ್ಚಳ ದಾಖಲಿಸಿದ್ದು, ಉತ್ತಮ ಆರ್ಥಿಕತೆಯನ್ನು ತೋರಿಸುತ್ತಿದೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​ 

ಕರ್ನಾಟಕದ ತಲಾ ಜಿಎಸ್‌ಡಿಪಿ ದೇಶದಲ್ಲೇ ಅತ್ಯಧಿಕವಾಗಿದೆ. ಗ್ಯಾರಂಟಿ ಸೇರಿದಂತೆ ರಾಜ್ಯ ಸರ್ಕಾರದ ಹಲವು ಜನಪರ ಯೋಜನೆಗಳು ಅಭಿವೃದ್ಧಿಯ ಫಲ ಎಲ್ಲಾ ವರ್ಗಗಳಿಗೂ ತಲುಪುವುದನ್ನು ಖಾತ್ರಿಪಡಿಸಿದೆ. ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಪ್ರಗತಿಯನ್ನು ಒಂದುಗೂಡಿಸುವ ಕರ್ನಾಟಕದ ಆರ್ಥಿಕ ಮಾದರಿಯ ಯಶಸ್ಸನ್ನು ಇದು ತೋರಿಸುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಅಭಿವೃದ್ಧಿ ಯೋಜನೆಗಳಿಗೆ ಹಣ ಸಿಗ್ತಿಲ್ಲ: ಹೈಕಮಾಂಡ್ ಮುಂದೆ ಗ್ಯಾರಂಟಿ ಯೋಜನೆ ಪರಿಷ್ಕರಣೆಗೆ ಸಚಿವರ ಡಿಮ್ಯಾಂಡ್

ಐಟಿ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವ ಸಾಮರ್ಥ್ಯವನ್ನು ಹೊಂದಿರುವುದು ದೇಶದ ಡಿಜಿಟಲ್‌ ಮತ್ತು ಆರ್ಥಿಕ ರಂಗದಲ್ಲಿ ಪ್ರಮುಖ ಪಾತ್ರ ವಹಿಸಲು ಕಾರಣವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವರದಿ: ಈರಣ್ಣ ಬಸವ 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:55 pm, Mon, 21 October 24

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us