H3N2 Virus: ಕೊರೊನಾ ಬಳಿಕ ಮತ್ತೊಂದು ವೈರಸ್​, ಕರ್ನಾಟಕದಲ್ಲಿ ಹೆಚ್​​3ಎನ್​​2ಗೆ​​ ಮೊದಲ ಬಲಿ

TV9 Digital Desk

| Edited By: TV9 SEO

Updated on:Mar 15, 2023 | 2:20 PM

H​​3N​​2 Death In Karnataka: ಕೊರೊನಾ ಬಳಿಕ ರಾಜ್ಯದಲ್ಲಿ ಹೆಚ್ 3ಎನ್ 2 ವೈರಲ್​ ಆತಂಕ ಮೂಡಿಸಿದ್ದು, ಇದೀಗ ಸೋಂಕಿಗೆ ಕರ್ನಾಟಕದಲ್ಲಿ ಮೊದಲ ಸಾವು ಸಂಭವಿಸಿದೆ.

H3N2 Virus: ಕೊರೊನಾ ಬಳಿಕ ಮತ್ತೊಂದು ವೈರಸ್​, ಕರ್ನಾಟಕದಲ್ಲಿ ಹೆಚ್​​3ಎನ್​​2ಗೆ​​ ಮೊದಲ ಬಲಿ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕದಲ್ಲಿ ಹೆಚ್​​3ಎನ್​​2(H3N2 Influenza Virus) ವೈರಸ್​ಗೆ​​ ಮೊದಲ ಬಲಿಯಾಗಿದೆ. H​​3N​​2 ವೈರಸ್​ನಿಂದ ಬಳಲುತ್ತಿದ್ದ ಹಾಸನ(Hassan) ಮೂಲದ ವೃದ್ಧ ಮೃತಪಟ್ಟಿದ್ದಾರೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಟಿವಿ9ಗೆ ಖಚಿತಪಡಿಸಿದ್ದಾರೆ.  ಜ್ವರ, ಚಳಿ, ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದ 85 ವರ್ಷದ ವೃದ್ಧ ಮೃತಪಟ್ಟಿದ್ದಾರೆ.  ಈಗಾಗಲೇ ರಾಜ್ಯದ ಜಿಲ್ಲೆಗಳಲ್ಲಿ ಹೆಚ್3ಎನ್2 ವೈರಸ್ ಹೆಚ್ಚಾಗಿದೆ. ರಾಜ್ಯದಲ್ಲಿ ಸುಮಾರು 50ಕ್ಕೂ ಹೆಚ್ಚು ಕೇಸ್ ಗಳು ದಾಖಲಾಗಿದ್ದು, ಹಾಸನದಲ್ಲಿ ಆರು ಜನರಿಗೆ ಹೆಚ್3ಎನ್2 ವೈರಸ್ ತಗುಲಿರುವುರು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೊಮಾರ್ಬಿಡಿಟಿ ಮತ್ತು 60 ವರ್ಷ ಮೇಲ್ಪಾಟವರ ಮೇಲೆ ನಿಗಾ ಇಡಲು ಆರೋಗ್ಯ ಇಲಾಖೆ ಮುಂದಾಗಿದೆ. ಈ ಮೊದಲ ಸಾವಿನ ಬಗ್ಗೆ ಆಡಿಟ್ ಮಾಡಲು ಮುಂದಾಗಿದ್ದು, ಯಾರು ಸೆಲ್ಪ್ ಟ್ರಿಟ್ಮೆಂಟ್ ತೆಗೆದುಕೊಳ್ಳದೇ ವೈದ್ಯರನ್ನು ಸಂಪರ್ಕಿಸಲು ಆಯುಕ್ತ ರಂದೀಪ್ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: H3N2 Influenza Virus: ಎಚ್​3ಎನ್​2 ವೈರಸ್ ಸೋಂಕು, ವಿಸ್ತೃತ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ; ಇಲ್ಲಿದೆ ವಿವರ 

ಜ್ಚರ, ಗಂಟಲುನೋವು, ಕೆಮ್ಮಿನಿಂದ ಬಳಲುತ್ತಿದ್ದ ಹಾಸನ ಜಿಲ್ಲೆ ಆಲೂರು ಮೂಲದ ವೃದ್ದ ಮಾರ್ಚ್ 1 ರಂದು ಆಲೂರಿನಲ್ಲಿ ಮೃತಪಟ್ಟಿದ್ದಾರೆ. ಮುನ್ನೆಚ್ಚರಿಕೆ ಕ್ರಮಾವಾಗಿ ಮೃತ ವ್ಯಕ್ತಿಯ ಗ್ರಾಮದ ಸುತ್ತಮುತ್ತಲ‌ಹಳ್ಳಿಯಲ್ಲಿ ಅರೋಗ್ಯ ತಪಾಸಣೆ ಮಾಡಲಾಗುತ್ತಿದ್ದು, ಅನಾರೋಗ್ಯ ಪೀಡಿತ ಜನರನ್ನು ವೈದ್ಯರ ತಂಡ ತಪಾಸಣೆ ಮಾಡುತ್ತಿದೆ. ಎಲ್ಲರ ಅರೋಗ್ಯ ತಪಾಸಣೆ ನಡೆಸಿ ಪರೀಕ್ಷೆಗಾಗಿ ಗಂಟಲು ದೃವವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ ಎಂದು ಟಿವಿ9 ಗೆ ಡಿಎಚ್ ಓ ಡಾ.ಶಿವಸ್ವಾಮಿ ಮಾಹಿತಿ ನೀಡಿದ್ದಾರೆ.

ಕೊವಿಡ್ ಬಳಿಕ ಇನ್ಪಾಯಾನ್ಜಾ ವೈರಸ್ ಉಪತಳಿ ಆತಂಕ ಹೆಚ್ಚಿಸಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ H3N2 ವೈರಸ್ ಹೆಚ್ಚಾಗುತ್ತಿದ್ದು, ಹಾಸನ  ಜಿಲ್ಲೆಯಲ್ಲಿ ಮೊದಲ ಸಾವು ಸಂಭವಿಸಿದ್ದು, ಇದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ. ಇದರಿಂದ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದ ರಾಜ್ಯ ಸರ್ಕಾರ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ವಿಸ್ತೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಎಚ್3ಎನ್2 ವೈರಸ್​​ನಿಂದ ಹರಡಿರುವ ಸೋಂಕು ಕನಿಷ್ಠ 5ರಿಂದ 7 ದಿನಗಳ ವರೆಗೆ ಇರುತ್ತದೆ. ಗರ್ಭಿಣಿಯರು, ಮಕ್ಕಳು, ವೃದ್ಧರಿಗೆ ಬೇಗ ಸೋಂಕು ಹರಡುತ್ತದೆ. 15 ವರ್ಷದಿಂದ 65 ವರ್ಷದವರಿಗೂ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಈ ವಯೋಮಾನದವರು ಹಾಗೂ ಎಲ್ಲರೂ ಬಹಳ ಎಚ್ಚರಿಕೆ ವಹಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ 16 H3N2, 10 H1N1 ಪ್ರಕರಣ ಪತ್ತೆ

ರಾಜ್ಯದಲ್ಲಿ ಪತ್ತೆಯಾಗಿರುವ ಮೊದಲ H3N2 ವೈರಸ್ ಹಾಸನ ಮೂಲದ ವ್ಯಕ್ತಿ ಬಲಿಯಾಗಿದ್ದಾರೆ. ಈ ಬಗ್ಗೆ ಈಗಾಗಲೇ ಆರೋಗ್ಯ ಸಚಿವರು ಸಭೆ ನಡೆಸಿದ್ದು, ಆರೋಗ್ಯ ಸಿಬ್ಬಂದಿಗಳು ಎಚ್ಚರದಿಂದ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ. ರಾಜ್ಯದಲ್ಲಿ 26 ಇನ್ಫ್ಲುಯೆನ್ಸಾ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 10 H1N1, 16 H3N2 ಪ್ರಕರಣಗಳು ಧೃಡಪಟ್ಟಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ತಿಳಿಸಿದ್ದಾರೆ.

H3N2 ರೋಗಲಕ್ಷಣ ಮತ್ತು ಚಿಕಿತ್ಸೆ

ವೈದ್ಯರು ತಿಳಿಸಿರುವಂತೆ ಈ ವೈರಸ್ ಹೆಚ್ಚು ಅಪಾಯಕಾರಿಯಾಗಿದ್ದು, ಇದು ಸೋಂಕಿತ ಜನರೊಂದಿಗಿನ ಸಂಪರ್ಕದಿಂದ ಅತ್ಯಂತ ವೇಗವಾಗಿ ಹರಡುತ್ತದೆ. ಇದರಿಂದ ರಕ್ಷಣೆ ಪಡೆಯಲು ಕೋವಿಡ್ ಮಾದರಿಯ ಕ್ರಮಗಳನ್ನೇ ಅನುಸರಿಸಬೇಕು ಎಂದು ಸಲಹೆ ನೀಡುತ್ತಿದ್ದಾರೆ. ಈ ಕಾರಣಕ್ಕಾಗಿ ಕೈಗಳನ್ನು ತೊಳೆಯುವುದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸುವುದು, ಹೆಚ್ಚು ನೀರು ಕುಡಿಯುವುದು, ಜ್ವರಕ್ಕಾಗಿ ಪ್ಯಾರಾಸಿಟಮಾಲ್ ಮಾತ್ರೆ ತೆಗೆದುಕೊಳ್ಳುವುದು, ಹೀಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು ಎಂದು ಸಲಹೆ ನೀಡಿದ್ದಾರೆ..

H3N2 ವೈರಸ್​ ರೋಗಲಕ್ಷಣಗಳು ಸುಮಾರು 1 ವಾರದವರೆಗೆ ಇರುತ್ತದೆ. ತಜ್ಞರ ಪ್ರಕಾರ ವೈರಸ್ ಕೆಮ್ಮು, ಸೀನು ಹಾಗೂ ಸೋಂಕಿತ ವ್ಯಕ್ತಿಯೊಂದಿಗೆ ನಿಕಟ ಸಂಪರ್ಕದಲ್ಲಿ ಇರುವುದರಿಂದ ಹರಡುತ್ತದೆ. ಹೀಗಾಗಿ ಜ್ವರ ಇರುವ ವ್ಯಕ್ತಿಯಿಂದ ಅಂತರ ಕಾಪಾಡಿಕೊಳ್ಳುವುದು ಸುರಕ್ಷಿತ ಎನ್ನಲಾಗಿದೆ.

ವಿನಯಕುಮಾರ್ ಕಾಶಪ್ಪನವರ್, ಟಿವಿ9, ಬೆಂಗಳೂರು

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada