Karnataka Rains: ಚಂಡಮಾರುತ ಭೀತಿ, ಮುಂದಿನ 3 ದಿನಗಳಲ್ಲಿ ಕರ್ನಾಟಕದ 19ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆ
ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳಲ್ಲಿ ಮಳೆ ಮತ್ತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳದ ದಕ್ಷಿಣ ಕರಾವಳಿ ಹಾಗೂ ಶ್ರೀಲಂಕಾದಿಂದ ದೂರದಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಸೃಷ್ಟಿಯಾಗಿದೆ. ಹೀಗಾಗಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
ಕೇರಳದ ದಕ್ಷಿಣ ಕರಾವಳಿ ಹಾಗೂ ಶ್ರೀಲಂಕಾದಿಂದ ದೂರದಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಸೃಷ್ಟಿಯಾಗಿದೆ. ಹೀಗಾಗಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
ನವೆಂಬರ್ 9ರ ಬಳಿಕ ಕರ್ನಾಟಕದ 19ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಕಾರ್ಕಳ, ಶಿರಾಲಿ, ಧರ್ಮಸ್ಥಳ, ಕೊಟ್ಟಿಗೆಹಾರ, ಭಾಗಮಂಡಲ, ಉಪ್ಪಿನಂಗಡಿ, ಪುತ್ತೂರು, ಉಡುಪಿ, ಮಾಣಿ, ಸೋಮವಾರಪೇಟೆ, ಪೊನ್ನಂಪೇಟೆ, ಶೃಂಗೇರಿಯಲ್ಲಿ ಮಳೆಯಾಗಿದೆ. ಕಾರವಾರದಲ್ಲಿ 14.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 14.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: ಕರ್ನಾಟಕದಾದ್ಯಂತ ನವೆಂಬರ್ 9ರ ಬಳಿಕ ಮತ್ತೆ ಹೆಚ್ಚಾಗಲಿದೆ ಮಳೆ
ಬೆಂಗಳೂರಿನ ಎಚ್ಎಎಲ್ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೀದರ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ