AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಸೇರಿದಂತೆ ಹಲವು ಶಿಫಾರಸು ಮಾಡಿದ ಎಸ್​ಇಪಿ

ರಾಜ್ಯ ಶಿಕ್ಷಣ ನೀತಿ ಆಯೋಗವು ತನ್ನ ಅಂತಿಮ ವರದಿಯಲ್ಲಿ ಶಾಲಾ ಶಿಕ್ಷಣ ಹಂತದಲ್ಲಿ 2+8+4 ಸೂತ್ರ, ಕನ್ನಡ ಮತ್ತು ಇಂಗ್ಲಿಷ್ ದ್ವಿಭಾಷಾ ನೀತಿ, ಮತ್ತು ವಲಸೆ ಮಕ್ಕಳಿಗಾಗಿ ವಸತಿ ಶಾಲೆಗಳ ಸ್ಥಾಪನೆಯಂತಹ ಪ್ರಮುಖ ಶಿಫಾರಸುಗಳನ್ನು ಮಾಡಿದೆ. ಉನ್ನತ ಶಿಕ್ಷಣದಲ್ಲಿ, GSDPಯ 4%ರಷ್ಟು ವೆಚ್ಚ ಹೆಚ್ಚಳ, ದ್ವಿಭಾಷಾ ಅಧ್ಯಯನ, ಮತ್ತು 5 ವರ್ಷಗಳ ಸಮಗ್ರ ಪದವಿ ಕಾರ್ಯಕ್ರಮಗಳನ್ನು ಪ್ರಸ್ತಾಪಿಸಲಾಗಿದೆ.

ಶಾಲಾ ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಸೇರಿದಂತೆ ಹಲವು ಶಿಫಾರಸು ಮಾಡಿದ ಎಸ್​ಇಪಿ
ಸರ್ಕಾರಕ್ಕೆ ವರದಿ ಸಲ್ಲಿಸಿದ ಎಸ್​ಇಪಿ
Vinay Kashappanavar
| Updated By: ವಿವೇಕ ಬಿರಾದಾರ|

Updated on:Aug 08, 2025 | 10:30 PM

Share

ಬೆಂಗಳೂರು, ಆಗಸ್ಟ್​ 08: ರಾಜ್ಯ ಶಿಕ್ಷಣ ನೀತಿ ಆಯೋಗವು (SEP) ಅಂತಿಮ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಶಾಲಾ ಶಿಕ್ಷಣದಲ್ಲಿ 2+8+4 ಸೂತ್ರ, ದ್ವಿಭಾಷಾ ನೀತಿ (ಕನ್ನಡ ಮತ್ತು ಇಂಗ್ಲಿಷ್​) ಸೇರಿದಂತೆ ಹಲವು ಶಿಫಾರಸುಗಳನ್ನು ಮಾಡಿದೆ. ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ಗೆ ಪರ್ಯಾಯವಾಗಿ ರಾಜ್ಯಕ್ಕೆ ಒಂದು ಶಿಕ್ಷಣ ನೀತಿಯನ್ನು ರೂಪಿಸಲು ರಾಜ್ಯ ಶಿಕ್ಷಣ ಆಯೋಗವನ್ನು ಸರ್ಕಾರ ರಚನೆ ಮಾಡಿತ್ತು. ಪ್ರೊ. ಸುಖದೇವ್​ ಥೋರಾಟ್​ ಅವರ ಅಧ್ಯಕ್ಷತೆಯ ರಾಜ್ಯ ಶಿಕ್ಷಣ ಆಯೋಗ ಅಂತಿಮ ವರದಿ ಸಲ್ಲಿಸಿದೆ.

ಶಾಲಾ ಹಂತದಲ್ಲಿ 2+8+4 ಸೂತ್ರ ಅಳವಡಿಸಲು ಆಯೋಗ ಶಿಫಾರಸು ಮಾಡಿದೆ (2 ವರ್ಷ ಪ್ರಾಥಮಿಕ-ಪೂರ್ವ, 8 ವರ್ಷ ಪ್ರಾಥಮಿಕ, 4 ವರ್ಷ ಮಧ್ಯಮಿಕ ಶಿಕ್ಷಣ). ವಲಸೆ ಹೋಗುವ ಮಕ್ಕಳಿಗಾಗಿ ವಸತಿ ಶಾಲೆಗಳನ್ನ ಸ್ಥಾಪಿಸಿ. ರಾಜ್ಯಾದ್ಯಂತ ಮಾಧ್ಯಮಿಕ ಶಿಕ್ಷಣವನ್ನ ಸಾರ್ವತ್ರೀಕರಣಗೊಳಿಸಿ. ಬಸ್ ಸೌಲಭ್ಯವಿಲ್ಲದ ಮಾರ್ಗಗಳಲ್ಲಿ ಹೊಸ ಶಾಲೆಗಳನ್ನು ಸ್ಥಾಪಿಸಿ. ಎಲ್ಲಾ ಬೋರ್ಡ್ ಶಾಲೆಗಳಲ್ಲಿ 5ನೇ ತರಗತಿವರೆಗೆ ಕನ್ನಡ/ ಮಾತೃಭಾಷೆಯನ್ನು ಬೋಧನಾ ಮಾಧ್ಯಮವಾಗಿ ಕಡ್ಡಾಯಗೊಳಿಸಿ. ದ್ವಿಭಾಷಾ ನೀತಿ ಅನುಷ್ಠಾನಗೊಳಸಿ (ಕನ್ನಡ/ಮಾತೃಭಾಷೆ + ಇಂಗ್ಲಿಷ್) ಎಂಬ ಶಿಫಾರಸುಗಳು ವರದಿಯಲ್ಲಿವೆ.

2 ವರ್ಷಗಳ ಪೂರ್ವ ಪ್ರಾಥಮಿಕ ಕಾರ್ಯಕ್ರಮಗಳನ್ನು ಪ್ರಾಥಮಿಕ ಶಾಲೆಗಳಲ್ಲಿ ಲಗತ್ತಿಸಿ. ವಿದ್ಯಾರ್ಥಿಗಳ ಸಂಖ್ಯೆಯ ಕೊರತೆಯಿಂದ ಮುಚ್ಚಲ್ಪಟ್ಟ ಪ್ರಾಥಮಿಕ ಶಾಲೆಗಳನ್ನು ಪುನಃ ಆರಂಭಿಸಿ. ಉಚಿತ ಹಾಗೂ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ(RTE) ಅಡಿಯಲ್ಲಿ 4-18 ವರ್ಷ ವಯಸ್ಸಿನವರಿಗೆ ವಿಸ್ತರಿಸುವುದು. ಸರ್ಕಾರಿ ಶಾಲಾ ಗುಣಮಟ್ಟವನ್ನ ಕೇಂದ್ರೀಯ ವಿದ್ಯಾಲಯಗಳಿಗೆ ಅನುಗುಣವಾಗಿ ಹೆಚ್ಚಿಸಿ. ಸರ್ಕಾರಿ ಶಾಲಾ ಅಭಿವೃದ್ಧಿ ಕೇಂದ್ರಗಳನ್ನು ಎಲ್ಲಾ ತಾಲೂಕುಗಳಲ್ಲಿ ಸ್ಥಾಪಿಸಿ. ಶಾಲಾ ಶಿಕ್ಷಣದಲ್ಲಿ ಸಮಗ್ರ, ನಿರಂತರ ಮೌಲ್ಯಮಾಪನ(CCSE) ಅಳವಡಿಸಿ ಎಂದು ಹೇಳಿದೆ.

ಇದನ್ನೂ ಓದಿ: ಕರ್ನಾಟಕದ ಐವರು ಮಹಿಳೆಯರಿಗೆ ಇಂಗ್ಲೆಂಡ್​​ನಲ್ಲಿ ಓದಲು 40 ಲಕ್ಷ ರೂ. ವಿದ್ಯಾರ್ಥಿವೇತನ

NCERT ಪಠ್ಯಕ್ರಮದ ಅನುಸರಣೆ ಕೊನೆಗೊಳಿಸಿ, ವಿಷಯಗಳನ್ನ ಸ್ಥಳೀಯಗೊಳಿಸಿ. ಗುತ್ತಿಗೆ ನೇಮಕಾತಿ ನಿಲ್ಲಿಸಿ. ಶಾಲೆಗಳ ದುರಸ್ತಿ ಕಾರ್ಯಗಳನ್ನು ತುರ್ತು ಕ್ರಮವಾಗಿ ಕೈಗೊಳ್ಳಿ. ಸಂಸ್ಕೃತಿ ಮತ್ತು ವೃತ್ತಿಪರ ಮಾದರಿಗಳನ್ನು ಅಳವಡಿಸಲು ನಾಟಕ, ಸಂಗೀತ, ಕ್ರೀಡೆಗಳಂತಹ ಚಟುವಟಿಕೆಗಳನ್ನು ಪ್ರೋತ್ಸಾಹಿಸಿ. ರಾಜ್ಯದ ಒಟ್ಟು ವೆಚ್ಚದಲ್ಲಿ ಶಿಕ್ಷಣದ ಖರ್ಚು ಪ್ರಮಾಣ ಶೇ 30ಕ್ಕೆ ಹೆಚ್ಚಿಸಿ. ಸಾಂವಿಧಾನಿಕ ಮೌಲ್ಯಗಳು ಶಿಕ್ಷಣವನ್ನು ಕಡ್ಡಾಯಗೊಳಿಸಿ ಎಂದು ಶಿಫಾರಸು ಮಾಡಿದೆ.

ಕಡಿಮೆ ಆದಾಯದ ಮುಸ್ಲಿಂ ವಿದ್ಯಾರ್ಥಿಗಳಿಗೆ ಸಂಪೂರ್ಣ ಆರ್ಥಿಕ ಬೆಂಬಲ ನೀಡಬೇಕು. ಕಡಿಮೆ ಶಿಕ್ಷಣ ಹೊಂದಿರುವ ಪೋಷಕರ ಮನೆಗಳಿಗೆ ಬೆಂಬಲ ನೀಡಬೇಕು. ಗ್ರಾಮೀಣ ಮುಸ್ಲಿಂ ಹೆಣ್ಣುಮಕ್ಕಳ ದಾಖಲಾತಿಯನ್ನು ಹೆಚ್ಚಿಸಲು ಪ್ರೋತ್ಸಾಹಿಸಬೇಕು. ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಬಾಲ್ಯವಿವಾಹ ತಡೆಹಿಡಿಯಲು ಪ್ರೋತ್ಸಾಹ ನೀಡಬೇಕು ಎಂದು ವರದಿಯಲ್ಲಿದೆ.

ಉನ್ನತ ಶಿಕ್ಷಣ ಇಲಾಖೆಗೆ ಪ್ರಮುಖ ಶಿಫಾರಸುಗಳು

  1. ಶಿಕ್ಷಣಕ್ಕೆ GSDPಯ 4% ಮತ್ತು 2034-35ರ ವೇಳೆಗೆ ಉನ್ನತ ಶಿಕ್ಷಣಕ್ಕೆ 1%ರಷ್ಟು ವೆಚ್ಚವನ್ನು ಹಂತ ಹಂತವಾಗಿ ಹೆಚ್ಚಿಸಿ.
  2. NEP 2020 ಪೂರ್ವದ ಪುನಃ ಪ್ರವೇಶ ನೀತಿಯನ್ನ ಮುಂದುವರಿಸಿ.
  3. ಯಾವುದೇ ರಾಜ್ಯ ವಿವಿಯಿಂದ ಸ್ನಾತ್ತಕೋತ್ತರ ಪ್ರವೇಶಕ್ಕೆ ಅವಕಾಶ ನೀಡಿ.
  4. ಅಫಿಲಿಯೇಷನ್ ನೀತಿ (50% ಸೀಟುಗಳನ್ನು ನಿಯಮಾವಳಿಗೆ ಮೀಸಲು)
  5. ಕನ್ನಡ/ಮಾತೃಭಾಷಾ/ಭಾರತೀಯ ಭಾಷೆ/ ವಿದೇಶಿ ಭಾಷೆ ಸೇರಿದಂತೆ ಎರಡನೇ ಭಾಷಾ ಕೋರ್ಸ್‌ನ್ನು ಕಡ್ಡಾಯಗೊಳಿಸಿ.
  6. 5 ವರ್ಷಗಳ ಸಮಗ್ರ ಪದವಿ-ಸ್ನಾತ್ತಕೋತ್ತರ ಕಾರ್ಯಕ್ರಮಗಳನ್ನ ನೀಡಿ.
  7. ದ್ವಿಭಾಷಾ ಬೋಧನೆಯನ್ನು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಹಂತ ಹಂತವಾಗಿ ದ್ವಿಭಾಷಾ ಅಧ್ಯಯನವನ್ನು ಪ್ರಾರಂಭಿಸಿ.
  8. ಪದವಿ ಪೂರ್ವ ಕಾರ್ಯಕ್ರಮಗಳಲ್ಲಿ ಸಮಗ್ರ ಲೈಗಿಂಕ ಶಿಕ್ಷಣವನ್ನ ಪರಿಚಯಿಸಿ.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:22 pm, Fri, 8 August 25

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!