AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಏಕೈಕ ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಕಾಡುತ್ತಿದೆ ಸಿಬ್ಬಂದಿ ಕೊರತೆ

ರಾಜ್ಯದ ಏಕೈಕ ತೋಟಗಾರಿಕೆ ವಿಶ್ವವಿದ್ಯಾಲಯ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದು. ಹಾಗಾಗಿ ಇಲ್ಲಿಗೆ ನೂರಾರು ವಿದ್ಯಾರ್ಥಿಗಳು ಕನಸು ಕಟ್ಟಿಕೊಂಡು ವಿದ್ಯಾಭ್ಯಾಸಕ್ಕೆ ಬರುತ್ತಾರೆ. ಇಂತಹ ಪ್ರತಿಷ್ಠಿತ ವಿವಿ ಹಲವು ವರ್ಷಗಳಿಂದ ಒಂದು ಸಮಸ್ಯೆಯಿಂದ ಬಳಲುತ್ತಿದೆ. ಆದರೆ ಸರ್ಕಾರದ ಬೇಜವಾಬ್ದಾರಿತನದಿಂದ ಸಮಸ್ಯೆ ಇನ್ನೂ ಬಗೆಹರಿದಿಲ್ಲ.

ರಾಜ್ಯದ ಏಕೈಕ ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಕಾಡುತ್ತಿದೆ ಸಿಬ್ಬಂದಿ ಕೊರತೆ
ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯ
sandhya thejappa
|

Updated on:Apr 15, 2021 | 12:02 PM

Share

ಬಾಗಲಕೋಟೆ: ರಾಜ್ಯದ ಏಕೈಕ ತೋಟಗಾರಿಕೆ ವಿಶ್ವವಿದ್ಯಾಲಯ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದು. ಹಾಗಾಗಿ ಇಲ್ಲಿಗೆ ನೂರಾರು ವಿದ್ಯಾರ್ಥಿಗಳು ಕನಸು ಕಟ್ಟಿಕೊಂಡು ವಿದ್ಯಾಭ್ಯಾಸಕ್ಕೆ ಬರುತ್ತಾರೆ. ಇಂತಹ ಪ್ರತಿಷ್ಠಿತ ವಿವಿ ಹಲವು ವರ್ಷಗಳಿಂದ ಒಂದು ಸಮಸ್ಯೆಯಿಂದ ಬಳಲುತ್ತಿದೆ. ಆದರೆ ಸರ್ಕಾರದ ಬೇಜವಾಬ್ದಾರಿತನದಿಂದ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಸಮಸ್ಯೆ ಬಗೆಹರಿಸಬೇಕಾದ ಸರ್ಕಾರ ಕುಂಟು ನೆಪ ಹೇಳುತ್ತಾ ಸಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ದಟ್ಟವಾಗಿ ಪರಿಣಮಿಸಿದೆ.

2008 ರಲ್ಲಿ ಅಂದಿನ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಾಗಲಕೋಟೆಗೆ ತೋಟಗಾರಿಕೆ ವಿವಿಯನ್ನು ಕೊಡುಗೆ ಕೊಟ್ಟರು. ಅತ್ಯಂತ ಕಡಿಮೆ ಅವಧಿಯಲ್ಲೇ ವಿವಿ ಹೆಮ್ಮರವಾಗಿ ಬೆಳೆದು ನಿಂತಿದೆ. ಆದರೆ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕಾದ ಬೋಧಕ ಹಾಗೂ ಬೋಧಕೇತರ ಹುದ್ದೆಗಳು ಖಾಲಿಯಾಗಿ ದಶಕವೇ ಸಮೀಪಿಸುತ್ತಿದ್ದರೂ ಹುದ್ದೆ ಭರ್ತಿಗೆ ಅನುಮತಿ ಮಾತ್ರ ಸಿಗುತ್ತಿಲ್ಲ. ಶಿಕ್ಷಕ ಹಾಗೂ ಶಿಕ್ಷಕೇತರ ಸಮಸ್ಯೆ ವಿಶ್ವ ವಿದ್ಯಾಲಯದಲ್ಲಿ ಇದೆ. ಹೀಗಾಗಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಆಗುತ್ತಿಲ್ಲ. ಒಟ್ಟು 424 ಬೋಧಕ ಹುದ್ದೆಗಳಲ್ಲಿ 285 ಹುದ್ದೆಗಳನ್ನು ತುಂಬಲಾಗಿದೆ. ಇನ್ನುಳಿದ ಶೇ.35 ರಷ್ಟು 131 ಹುದ್ದೆಗಳು ಖಾಲಿ ಉಳಿದಿವೆ. ಬೋಧಕೇತರ ಸಿಬ್ಬಂದಿಗಳಲ್ಲಿ ಸರ್ಕಾರದಿಂದ 1,419 ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ 739 ಹುದ್ದೆಗಳನ್ನು ತುಂಬಲಾಗಿದ್ದು, ಇನ್ನೂ 680 ಹುದ್ದೆಗಳು ಖಾಲಿ ಇವೆ. ಇದನ್ನು ಖುದ್ದಾಗಿ ವಿವಿ ಕುಲಪತಿ ಡಾ.ಕೆ.ಎಂ.ಇಂದಿರೇಶ್ ಬಹಿರಂಗಪಡಿಸಿದ್ದು, ವಿವಿಗೆ ಸಿಬ್ಬಂದಿ ಬರ ಎದುರಾಗಿವುದು ಸ್ಪಷ್ಟವಾಗಿದೆ.

ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ವ್ಯಾಪ್ತಿಗೆ ರಾಜ್ಯದಲ್ಲಿ 23 ಜಿಲ್ಲೆಗಳು ಬರಲಿವೆ. ಇದರಲ್ಲಿ 9 ತೋಟಗಾರಿಕೆ ಮಹಾವಿದ್ಯಾಲಯ, 12 ಸಂಶೋಧನಾ ಕೇಂದ್ರ, 12 ವಿಸ್ತರಣಾ ಘಟಕಗಳು ಮತ್ತು 2,863 ವಿದ್ಯಾರ್ಥಿಗಳನ್ನು ಹೊಂದಿರುವ ಅತಿ ದೊಡ್ಡ ವಿಶ್ವವಿದ್ಯಾಲಯ ಇದಾಗಿದೆ. ಆದರೂ ಸರ್ಕಾರ ಮಾತ್ರ ಇಂಥಹ ಪ್ರತಿಷ್ಠಿತ ವಿಶ್ವವಿದ್ಯಾಲಯಕ್ಕೆ ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ಮಾತ್ರ ತುಂಬದಿರುವುದಕ್ಕೆ ಕಾರಣ ತಿಳಿಯುತ್ತಿಲ್ಲ. ತೋಟಗಾರಿಕೆ ನಿರ್ಮಾಣ ಆಗಿ 10 ವರ್ಷ ಕಳೆದಿದೆ. ಸಿಬ್ಬಂದಿ ಸಮಸ್ಯೆ ವಿವಿಯಲ್ಲಿ ಹೆಚ್ಚಾಗಿ ಕಾಡುತ್ತಿದೆ. ಸಿಬ್ಬಂದಿ ಇಲ್ಲದೇ ವಿದ್ಯಾರ್ಥಿಗಳು ಏನು ಮಾಡೋಕು ಸಾಧ್ಯವಿಲ್ಲ. ಸಿಬ್ಬಂದಿಗಳಿದ್ದರೆ ಕಲಿಯುವುದಕ್ಕೆ ಸಾಧ್ಯ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇರುವುದರಿಂದ ಶಿಕ್ಷಕರ ಕೊರತೆ ಅಧಿಕವಾಗಿ ಕಾಡುತ್ತಿದೆ. ಈ ಬಗ್ಗೆ ಕುಲಪತಿಗಳಲ್ಲೂ ಮನವಿ ಮಾಡಿದ್ದೇವೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ್ದಾರೆ ಎಂದು ವಿವಿಯ ತೃತಿಯ ವರ್ಷದ ವಿದ್ಯಾರ್ಥಿ ಮಲ್ಲಿಕಾರ್ಜುನ ಮೆನಣಸಗಿ ಹೇಳಿದರು.

ಇದನ್ನೂ ಓದಿ

ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವ; 14 ಚಿನ್ನದ ಪದಕಗಳಿಸಿ ಸಂಭ್ರಮಿಸಿದ ವಿದ್ಯಾರ್ಥಿ

ವಿಜಯಪುರ: ಕಳಪೆ ಗುಣಮಟ್ಟದ ರಸಗೊಬ್ಬರ ತಯಾರಿಕಾ ಘಟಕಗಳ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ ಜಿಲ್ಲಾ ಪಂಚಾಯತ್ ಅಧ್ಯಕ್ಷೆ

(Karnataka’s one and only horticulture university is facing lecturers crisis in Bagalkot)

Published On - 12:01 pm, Thu, 15 April 21

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಮತ್ತಷ್ಟು ಅವ್ಯವಸ್ಥೆ ಬಯಲು
ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಮತ್ತಷ್ಟು ಅವ್ಯವಸ್ಥೆ ಬಯಲು
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂಗೆ ಅರ್ಜಿ
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂಗೆ ಅರ್ಜಿ