AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ದೇವಾಲಯಗಳ ಆದಾಯದಲ್ಲಿ ಭಾರೀ ಏರಿಕೆ: ದಕ್ಷಿಣ ಕನ್ನಡದ ಈ ದೇಗುಲ ಫಸ್ಟ್​

ಕರ್ನಾಟಕದ ದೇವಾಲಯಗಳು, ಅದರಲ್ಲೂ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ, 155 ಕೋಟಿ ರೂ. ಆದಾಯದೊಂದಿಗೆ ರಾಜ್ಯದ ಅತ್ಯಂತ ಶ್ರೀಮಂತ ದೇವಾಲಯವಾಗಿ ಹೊರಹೊಮ್ಮಿದೆ. ಭಕ್ತರ ಹೆಚ್ಚಳ ಹಾಗೂ ಉತ್ತಮ ಆಡಳಿತದಿಂದ ಆದಾಯ ವೃದ್ಧಿಸಿದ್ದು, ಕೊಲ್ಲೂರು ಮೂಕಾಂಬಿಕಾ, ಚಾಮುಂಡೇಶ್ವರಿ ದೇವಾಲಯಗಳು ನಂತರದ ಸ್ಥಾನಗಳಲ್ಲಿವೆ. ಈ ಬೆಳವಣಿಗೆಯು ಮುಂದಿನ ದಿನಗಳಲ್ಲಿ ದೇವಾಲಯಗಳ ಅಭಿವೃದ್ಧಿಗೆ ಹೂಡಿಕೆ ಮಾಡಲು ಸಹಾಯ ಮಾಡಲಿದೆ.

ಕರ್ನಾಟಕದ  ದೇವಾಲಯಗಳ ಆದಾಯದಲ್ಲಿ ಭಾರೀ ಏರಿಕೆ: ದಕ್ಷಿಣ ಕನ್ನಡದ ಈ ದೇಗುಲ ಫಸ್ಟ್​
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jan 02, 2026 | 5:17 PM

Share

ಮಂಗಳೂರು, ಡಿ.2: ಕರ್ನಾಟಕ ಎಲ್ಲದರಲ್ಲೂ ಶ್ರೀಮಂತಿಕೆಯನ್ನು ಪಡೆದುಕೊಂಡಿದೆ. ಸಂಸ್ಕೃತಿ, ಪರಂಪರೆ, ಆದಾಯದಲ್ಲೂ ಕೂಡ ಶ್ರೀಮಂತ ರಾಜ್ಯ, (Karnataka richest temples) ಇದೀಗ ದೇವಾಲಯದಲ್ಲೂ ಕೂಡ ಕರ್ನಾಟಕ ಶ್ರೀಮಂತಿಕೆಯನ್ನು ಪಡೆದುಕೊಂಡಿದೆ. ಶ್ರೀಮಂತ ದೇವಾಲಯಗಳ ಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ರಾಜ್ಯದ ಅತ್ಯಂತ ಶ್ರೀಮಂತ ದೇವಾಲಯವಾಗಿ ಹೊರಹೊಮ್ಮಿದೆ. ಹಣಕಾಸು ದತ್ತಾಂಶದ ಪ್ರಕಾರ ಈ ವರದಿಯನ್ನು ನೀಡಲಾಗಿದೆ.

ಇನ್ನು ಈ ವರದಿ ಪ್ರಕಾರ, ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆದಾಯ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ, 2024–25ರಲ್ಲಿ 155 ಕೋಟಿ ರೂ. ತಲುಪಿದೆ. 2023–24ರಲ್ಲಿ ದೇವಾಲಯದ ಆದಾಯ 146 ಕೋಟಿ ರೂ. ಮತ್ತು 2022–23ರಲ್ಲಿ 123 ಕೋಟಿ ರೂ. ಇತ್ತು. ಈ ಬೆಳವಣಿಗೆ ಕಾರಣ, ಹೆಚ್ಚು ಭಕ್ತ ಸಮೂಹ ಇಲ್ಲಿಗೆ ಬರುತ್ತಿರವುದು. ಹಾಗೂ ವಿಶೇಷ ಪೂಜೆಗಳನ್ನು ಮಾಡಿಸಿಕೊಳ್ಳುವುದು, ಜತೆಗೆ ಧಾರ್ಮಿಕ ಪ್ರವಾಸೋದ್ಯಮವಾಗಿ ಹೊಂದಿಕೊಂಡಿರುವುದು ಎಂದು ಹೇಳಲಾಗಿದೆ. ಇದರ ನಂತರದ ಸಾಲಿನಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಮತ್ತು ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಹೋಗುವವರಿಗೆ ಗುಡ್​​​ ನ್ಯೂಸ್​​ ನೀಡಿದ ಕೇಂದ್ರ, ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರಕ್ಕೆ ಸಿದ್ಧ

ಒಟ್ಟಾರೆಯಾಗಿ ರಾಜ್ಯದಲ್ಲಿ ದೇವಾಲಯದ ಆದಾಯಗಳು ಗಣನೀಯವಾಗಿ ಏರಿಕೆ ಕಂಡಿದೆ. ದತ್ತಿ ಇಲಾಖೆಯ ಪ್ರಕಾರ, ಕರ್ನಾಟಕವು 34,000 ಕ್ಕೂ ಹೆಚ್ಚು ದೇವಾಲಯಗಳನ್ನು ಹೊಂದಿದ್ದು, ಈ ಮೂರು ದೇವಾಲಯಗಳು ಇತರ ದೇವಾಲಯಕ್ಕಿಂತ ಹೆಚ್ಚಿನ ಆದಾಯವನ್ನು ಗಳಿಸಿದೆ. ಇನ್ನು ದೇವಾಲಯಗಳನ್ನು ಎ ವರ್ಗ ಹಾಗೂ ಬಿ ವರ್ಗ ಎಂದು ವಿಭಾಗ ಮಾಡಲಾಗಿದೆ. ಎ ವರ್ಗದಲ್ಲಿ ಒಟ್ಟು 205 ದೇವಾಲಯಗಳು ಬರುತ್ತದೆ. ಹಾಗೂ ಬಿ ವರ್ಗದಲ್ಲಿ 193 ದೇವಾಲಯಗಳು ಬರುತ್ತದೆ. ಆದಾಯ ಹಾಗೂ ಅಭಿವೃದ್ಧಿ ಆಧಾರದ ಮೇಲೆ ಇದನ್ನು ವರ್ಗೀಕರಣ ಮಾಡಲಾಗಿದೆ.

ಈ ಎ, ಬಿ ವರ್ಗೀಕರಣದಲ್ಲೂ 10 ಟಾಪ್​​ ದೇವಾಲಯಗಳನ್ನು ಗುರುತಿಸಲಾಗುವುದು. ಈ ಹತ್ತು ಟಾಪ್​​ ದೇವಾಲಯಗಳನ್ನು ಆದಾಯದ ಮಾನದಂಡದ ಆಧಾರದ ಮೇಲೆ ಮಾಡಲಾಗಿದೆ. ಅಧಿಕಾರಿಗಳ ಪ್ರಕಾರ, ಉತ್ತಮ ಆಡಳಿತ ವ್ಯವಸ್ಥೆ ಹಾಗೂ ಯಾತ್ರಿಕರ ಸಂಖ್ಯೆಯ ಹೆಚ್ಚಳವೇ ಈ ಆದಾಯ ವೃದ್ಧಿಗೆ ಪ್ರಮುಖ ಕಾರಣಗಳಾಗಿವೆ ಎನ್ನಲಾಗಿದೆ.ಮುಂದಿನ ದಿನಗಳಲ್ಲಿ ದೇವಾಲಯಗಳ ನಿರ್ವಹಣೆ, ಪಾರಂಪರಿಕ ಸಂರಕ್ಷಣೆ, ಯಾತ್ರಿಕರ ಸೌಲಭ್ಯಗಳ ಅಭಿವೃದ್ಧಿ ಹಾಗೂ ಸಮುದಾಯಮುಖಿ ಯೋಜನೆಗಳಿಗೆ ಹೆಚ್ಚಿನ ಹೂಡಿಕೆ ಸಾಧ್ಯವಾಗಲಿದೆ ಎಂದು ಹೇಳಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:16 pm, Fri, 2 January 26

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ