ಎಸ್​ಟಿ ನಿಗಮದ ಹಗರಣ: ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದ ನಾಗೇಂದ್ರ

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ರಾಜ್ಯ ಸರ್ಕಾರವನ್ನೇ ತಲ್ಲಣಗೊಳಿಸಿತ್ತು. ಕೋಟ್ಯಂತರ ರೂಪಾಯಿ ಹಗರಣದ ಕೇಸ್ ಸರ್ಕಾರ ಎಸ್​ಐಟಿಗೆ ನೀಡಿದೆ. ಇನ್ನು ಬಿಜೆಪಿ ಒತ್ತಾಯದಿಂದ ನಾಗೇಂದ್ರ ಮೇಲೆ ಒತ್ತಡ ಹೆಚ್ಚಾಗಿತ್ತು. ಹೀಗಾಗಿ ಇಂದು ರಾಜೀನಾಮೆ ನೀಡಿದ್ದಾರೆ. ನಾನು ಸಚಿವ ಸ್ಥಾನದಲ್ಲಿದ್ದರೆ ತನಿಖೆಗೆ ತೊಂದರೆಯಾಗಲಿದೆ. ಹೀಗಾಗಿ ರಾಜೀನಾಮೆ ನೀಡುರುವುದಾಗಿ ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ.

ಎಸ್​ಟಿ ನಿಗಮದ ಹಗರಣ: ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದ ನಾಗೇಂದ್ರ
ಎಸ್​ಟಿ ನಿಗಮದ ಹಗರಣ: ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದ ನಾಗೇಂದ್ರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jun 06, 2024 | 5:59 PM

ಬೆಂಗಳೂರು, ಜೂನ್​ 06: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ (Valmiki Development Corporation Scam) ಸಂಬಂಧಿಸಿದಂತೆ ನಾನು ಸಚಿವ ಸ್ಥಾನದಲ್ಲಿದ್ದರೆ ತನಿಖೆಗೆ ತೊಂದರೆಯಾಗಲಿದೆ. ಹೀಗಾಗಿ ನಿಷ್ಪಕ್ಷಪಾತವಾಗಿ ಪ್ರಕರಣದ ತನಿಖೆಯಾಗಲಿ ಎಂದು ರಾಜೀನಾಮೆ ನೀಡುರುವುದಾಗಿ ಸಚಿವ ಬಿ.ನಾಗೇಂದ್ರ (b Nagendra) ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ನಿರ್ದೋಷಿಯಾಗಿ ಬಂದ್ಮೇಲೆ ಸಿಎಂ ಸಿದ್ದರಾಮಯ್ಯ ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.

ಸರ್ಕಾರಕ್ಕೆ ಮತ್ತು ಪಕ್ಷದ ವರಿಷ್ಠರು, ಅಧ್ಯಕ್ಷರಿಗೆ ಮುಜುಗರ ಆಗಬಾರದು. ಈ ಕಾರಣಕ್ಕೆ ನನ್ನ ಸ್ವ ಇಚ್ಚೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಸಂಜೆ‌ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಭೇಟಿ ಮಾಡಿ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಸಚಿವ ನಾಗೇಂದ್ರ ರಾಜೀನಾಮೆ: ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ

ಪ್ರಕರಣದಲ್ಲಿ ಎಲ್ಲೂ ನನ್ನ ಹೆಸರು ಉಲ್ಲೇಖ ಮಾಡಿಲ್ಲ. ಬೇರೆಯವರ ಒತ್ತಡದಿಂದ ನಾನು ರಾಜೀನಾಮೆ ಕೊಡುತ್ತಿಲ್ಲ. ನಿನ್ನ ರಾಜೀನಾಮೆ ಅಗತ್ಯವಿಲ್ಲವೆಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದರೂ ನಾನು ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೆಳಿದ್ದಾರೆ.

ಎಸ್​ಐಟಿ ತನಿಖೆ ಕೂಡ ನಡೆಯುತ್ತಿದೆ. ಎಲ್ಲಾ ಆರೋಪಗಳು ನಿರಾಧಾರ. ಎಲ್ಲಾ ಆರೋಪಗಳಿಂದ ಮುಕ್ತನಾಗಿ ಬಂದ ಮೇಲೆ ಮಾತಾಡುತ್ತೇನೆ. ರಾಜಕೀಯ ಅಂದ ಮೇಲೆ ಊಹಾಪೋಹಗಳು ಸಹಜ. ತನಿಖೆಯಲ್ಲಿ ಸತ್ಯಾಂಶ ಬಂದ ಮೇಲೆ ಮತ್ತೆ ಬರುತ್ತೇನೆ. ಪೆನ್ ಡ್ರೈವ್ ಅಂದರೆ ಒಂದೇ ಪೆನ್ ಡ್ರೈವ್ ಬಗ್ಗೆ ರಾಜ್ಯದ ಜನರಿಗೆ ಗೊತ್ತು, ಬೇರೆ ಪೆನ್ ಡ್ರೈವ್ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ನಾಗೇಂದ್ರ ರಾಜೀನಾಮೆ: ಬಿಜೆಪಿಗೆ ಸಿಕ್ಕ ಜಯ, ಸಿಎಂ ರಾಜೀನಾಮೆಗೂ ಹೋರಾಟ ಎಂದ ರವಿ ಕುಮಾರ್

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ರಾಜ್ಯ ಸರ್ಕಾರವನ್ನೇ ತಲ್ಲಣಗೊಳಿಸಿತ್ತು. ಕೋಟ್ಯಂತರ ರೂಪಾಯಿ ಹಗರಣದ ಕೇಸ್ ಸರ್ಕಾರ ಎಸ್​ಐಟಿಗೆ ನೀಡಿದೆ. ಇನ್ನು ಬಿಜೆಪಿ ಒತ್ತಾಯದಿಂದ ನಾಗೇಂದ್ರ ಮೇಲೆ ಒತ್ತಡ ಹೆಚ್ಚಾಗಿತ್ತು. ಹೀಗಾಗಿ ಇಂದು ರಾಜೀನಾಮೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:42 pm, Thu, 6 June 24

ತಾಜಾ ಸುದ್ದಿ
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ