AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮೇ 6ರಿಂದ ಮಳೆ, ಅಲ್ಲಿಯವರೆಗೆ ಒಣಹವೆ

ಕರ್ನಾಟಕದಲ್ಲಿ ಮುಂದಿನ ಐದು ದಿನಗಳ ಕಾಲ ಒಣಹವೆ ಮುಣದುವರೆಯಲಿದ್ದು ಮೇ 6 ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಕೂಡ ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮೇ 6ರಿಂದ ಮಳೆ, ಅಲ್ಲಿಯವರೆಗೆ ಒಣಹವೆ
Image Credit source: The Weather Channel
Follow us
ನಯನಾ ರಾಜೀವ್
|

Updated on: May 01, 2024 | 7:34 AM

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮೇ 6ರಿಂದ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲಿಯವರೆಗೆ ಉಷ್ಣ ಗಾಳಿ ಮುಂದುವರೆಯಲಿದೆ. ಕರಾವಳಿಯಲ್ಲಿ ಕೂಡ ತಾಪಮಾನ ಹೆಚ್ಚಿರಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ ತಾರಕಕ್ಕೇರಲಿದ್ದು ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

ಅಷ್ಟೇ ಅಲ್ಲದೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ತುಮಕೂರು,ವಿಜಯನಗರದಲ್ಲಿ ಉಷ್ಣಗಾಳಿ ಇರಲಿದೆ. ಮೇ 6 ರಿಂದ ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಲಬುರಗಿಯಲ್ಲಿ 42.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಎಚ್​ಎಎಲ್​ನಲ್ಲಿ 37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ38.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಉಷ್ಣ ಅಲೆಯ ನಡುವೆ ಕರ್ನಾಟಕದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಇಂದು ಕೂಡ ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹೊನ್ನಾವರದಲ್ಲಿ34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,29.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 39.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 42.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 42.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 40.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 42.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 30.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 40.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 40.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ