AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karwar Court Jobs 2026: SSLC ಪಾಸಾದವರಿಗೆ ಉದ್ಯೋಗವಕಾಶ; ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ 78 ಹುದ್ದೆಗಳಿಗೆ ಭರ್ಜರಿ ನೇಮಕಾತಿ!

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯವು ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಜವಾನ (65) ಮತ್ತು ಆದೇಶ ಜಾರಿಕಾರ (13) ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಒಟ್ಟು 78 ಸರ್ಕಾರಿ ಹುದ್ದೆಗಳಿದ್ದು, ಉತ್ತಮ ವೇತನ ದೊರೆಯಲಿದೆ. ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 16ರೊಳಗೆ ಅರ್ಜಿ ಸಲ್ಲಿಸಿ ಕಾರವಾರದಲ್ಲಿ ಸರ್ಕಾರಿ ಕೆಲಸ ಪಡೆಯಬಹುದು. ಅರ್ಜಿ ಸಲ್ಲಿಸಲು ಬಯಸುವವರು ನ್ಯಾಯಾಲಯದ ಅಧಿಕೃತ ವೆಬ್‌ಸೈಟ್​​ಗೆ ಭೇಟಿ ನೀಡಿ.

Karwar Court Jobs 2026: SSLC ಪಾಸಾದವರಿಗೆ ಉದ್ಯೋಗವಕಾಶ; ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ 78 ಹುದ್ದೆಗಳಿಗೆ ಭರ್ಜರಿ ನೇಮಕಾತಿ!
SSLC ಪಾಸಾದವರಿಗೆ ಸಿಹಿ ಸುದ್ದಿ
ಅಕ್ಷತಾ ವರ್ಕಾಡಿ
|

Updated on:Aug 13, 2026 | 11:58 AM

Share

ಕಾರವಾರ: ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವ ಎಸ್‌ಎಸ್‌ಎಲ್‌ಸಿ (SSLC) ಪಾಸಾದ ಯುವಕ-ಯುವತಿಯರಿಗೆ ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯವು ಉತ್ತಮ ಅವಕಾಶವೊಂದನ್ನು ತಂದಿದೆ. ಕಾರವಾರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವ್ಯಾಪ್ತಿಯಲ್ಲಿ ಖಾಲಿ ಇರುವ ಜವಾನ (Peon) ಹಾಗೂ ಆದೇಶ ಜಾರಿಕಾರ (Process Server) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ ಮತ್ತು ಲಭ್ಯವಿರುವ ಖಾಲಿ ಜಾಗಗಳು:

ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 78 ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇದರಲ್ಲಿ ಜವಾನ (Peon) ಹುದ್ದೆಗೆ 65 ಸ್ಥಾನಗಳು ಹಾಗೂ ಆದೇಶ ಜಾರಿಕಾರ (Process Server) ಹುದ್ದೆಗೆ 13 ಸ್ಥಾನಗಳನ್ನು ಕಾಯ್ದಿರಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಉತ್ತರ ಕನ್ನಡ ಜಿಲ್ಲೆಯ ನ್ಯಾಯಾಲಯ ಘಟಕಗಳಲ್ಲಿ ಸೇವೆ ಸಲ್ಲಿಸಲು ಅವಕಾಶ ಪಡೆಯಬಹುದು.

ಶೈಕ್ಷಣಿಕ ಅರ್ಹತೆ ಮತ್ತು ವಿಶೇಷ ಷರತ್ತುಗಳು:

ಈ ಎರಡೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಿರಬೇಕು. ಜವಾನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಬರುವುದು ಕಡ್ಡಾಯವಾಗಿದೆ. ಅದೇ ರೀತಿ ಆದೇಶ ಜಾರಿಕಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಲ್ಲಿ ಭಾರಿ ಅಥವಾ ಹಗುರ ವಾಹನ ಚಾಲನಾ ಪರವಾನಗಿ (HMV / LMV Driving License) ಹೊಂದಿರುವವರಿಗೆ ಆಯ್ಕೆ ಪ್ರಕ್ರಿಯೆಯಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ.

ಆಕರ್ಷಕ ವೇತನ ಶ್ರೇಣಿ ಮತ್ತು ಭತ್ಯೆಗಳು:

ನ್ಯಾಯಾಂಗ ಇಲಾಖೆಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಾವಳಿಗಳಂತೆ ಆಕರ್ಷಕ ಮಾಸಿಕ ವೇತನ ದೊರೆಯಲಿದೆ. ಜವಾನ ಹುದ್ದೆಗೆ ಆಯ್ಕೆಯಾಗುವ ನೌಕರರಿಗೆ ಆರಂಭಿಕವಾಗಿ ಮಾಸಿಕ 27,000 ರಿಂದ 46,675 ರೂ. ವರೆಗೆ ವೇತನ ದೊರೆಯಲಿದೆ. ಇನ್ನು ಆದೇಶ ಜಾರಿಕಾರ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹27,300 ರಿಂದ ಗರಿಷ್ಠ ₹61,300 ರವರೆಗೆ ವೇತನ ಶ್ರೇಣಿ ನಿಗದಿಯಾಗಿದೆ.

ಇದನ್ನೂ ಓದಿ: ಬೆಂಗಳೂರು ದಕ್ಷಿಣ ಜಿಲ್ಲೆ;102 ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ ವಿವರಗಳು:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಸರ್ಕಾರಿ ನಿಯಮಾವಳಿಗಳ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಇರಲಿದ್ದು, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 40 ವರ್ಷ, ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 43 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 45 ವರ್ಷಗಳವರೆಗೆ ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು ಮತ್ತು ಲಿಂಕ್:

ಈ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆಗಸ್ಟ್ 17 ರಿಂದ ಅಧಿಕೃತವಾಗಿ ಪ್ರಾರಂಭಗೊಳ್ಳಲಿದೆ. ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 16 ರವರೆಗೆ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ uttarakannada.dcourts.gov.in ಅಥವಾ ನೇರ ಅರ್ಜಿ ಲಿಂಕ್ uttarakannada.dcourts.gov.in/online-recruitment/ ಗೆ ಭೇಟಿ ನೀಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:58 am, Thu, 13 August 26

Follow Us