AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಯುಭಾರ ಕುಸಿತ: 5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ

ಬಂಗಾಳ ಕೊಲ್ಲಿಯಲ್ಲಿ ವಾಯುಬಾರ ಕುಸಿತ ಹಿನ್ನೆಲೆ ಅಲರ್ಟ್ ಘೋಷಿಸಿದ್ದು, 5 ದಿನ ಸಮುದ್ರಕ್ಕೆ ಇಳಿಯದಂತೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ 40 ಕಿಮೀನಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಹವಾಮಾನ ಇಲಾಖೆ ಎಚ್ಚರಿಕೆ ಹಿನ್ನೆಲೆ ಜಿಲ್ಲಾಡಳಿತ ಸೂಚನೆ ನೀಡಿದೆ.

ವಾಯುಭಾರ ಕುಸಿತ: 5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ
ವಾಯುಭಾರ ಕುಸಿತ: 5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಗಂಗಾಧರ​ ಬ. ಸಾಬೋಜಿ

Updated on: May 19, 2024 | 3:48 PM

ಕಾರವಾರ, ಮೇ 19: ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕೆಗೆ (fishing) ನಿರ್ಬಂಧ ಹೇರಲಾಗಿದೆ. ಹೀಗಾಗಿ ಐದು ದಿನಗಳ ಕಾಲ ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಡಳಿತ (District Administration) ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ 40 ಕಿಮೀನಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮೀನುಗಾರರು ಹೇಳುವುದು ಏನು?

ಜಿಲ್ಲೆಯ ಬಂದರಿನಲ್ಲಿ ಬೋಟುಗಳು ಲಂಗುರು ಹಾಕುತ್ತಿವೆ. ಇನ್ನು ಈ ಕುರಿತಾಗಿ ಟಿವಿ9 ಜೊತೆಗೆ ಮೀನುಗಾರರು ಮಾತನಾಡಿದ್ದು, ಪ್ರತಿವರ್ಷ ಜೂನ್ ನಂತರ ಮೀನುಗಾರಿಕೆ ನಿಲ್ಲಿಸಲಾಗುತಿತ್ತು. ಈ ವರ್ಷ ಅವಧಿಗೂ ಮುನ್ನವೆ ಮೀನುಗಾರಿಕೆ ಸ್ಥಗಿತ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಳೆಗಾಗಿ ಪೂಜೆ ಸಲ್ಲಿಸಿದ 48 ದಿನದಲ್ಲಿ ಮಳೆ ಆಗಮನ; ಕೋರಿಕೆ ಈಡೇರಿಸಿದಕ್ಕೆ ಸಮುದ್ರ ದೇವನಿಗೆ ಬಾಗಿನ ಅರ್ಪಣೆ

ಡಿಸೆಂಬರ್​ದಿಂದ ಹೆಚ್ಚಾಗಿ ಮೀನುಗಳು ಸಿಕ್ಕಿರಲಿಲ್ಲ. ಆದರೆ ಕಳೆದ 15 ದಿನಗಳಿಂದ ಮೀನುಗಳು ಪ್ರಮಾಣ ಹೆಚ್ಚಾಗಿತ್ತು ಎಂಬ ಖುಷಿ ಇತ್ತು. ಆದರೆ ನಿನ್ನೆ ಹವಾಮಾನ ಇಲಾಖೆ ಮಾಹಿತಿ ನೀಡಿದ ಮೆರೆಗೆ ಇಂದು ಅನಿವಾರ್ಯವಾಗಿ ಸ್ಥಗಿತ ಮಾಡಿದ್ದೆವೆ. ಈ ವರ್ಷ ಹೆಚ್ಚಾಗಿ ಮತ್ಸ್ಯ ಕ್ಷಾಮ ಉಂಟಾದ ಹಿನ್ನೆಲೆ ಸಂಕಷ್ಟದಲ್ಲಿ ದಿನ ಕಳೆಯುವಂತಾಗಿದೆ ಎಂದು ಮೀನುಗಾರರು ಅಳಲು ತೊಡಿಕೊಂಡಿದ್ದಾರೆ.

ಇದನ್ನೂ ಓದಿ: ಬಿಸಿಲು-ಮಳೆ ಮಧ್ಯೆ ಕರ್ನಾಟಕದ ಕಾಶ್ಮೀರದತ್ತ ಪ್ರವಾಸಕ್ಕೆ ಮುಗಿಬಿದ್ದ ಜನ

ಮಳೆಯ ಸಿಂಚನ ಆರಂಭ ಆದ ಹಿನ್ನೆಲೆ ಬೆಂಗಳೂರು ನಗರವಾಸಿಗಳು ಕೊಂಚ್ ರಿಲಿಫ್ ಆಗಿದ್ದು ಸಮುದ್ರಕ್ಕೆ ವಿಶೇಷ ಬಾಗಿ ಅರ್ಪಣೆ ಮಾಡುವುದರ ಮೂಲಕ ವರುಣ ದೇವನಿಗೆ ಇತ್ತೀಚೆಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಉತ್ತರ ಕನ್ನಡ ಜಿಲ್ಲೆ ಕಾರವಾರ ಬಳಿಯ ಕಾಳಿ ನದಿ ಸಮುದ್ರಕ್ಕೆ ಸಂಗಮ ಆಗುವ ದಡದಲ್ಲಿ ವಿಶೇಷ ಪೂಜೆ ಸಲ್ಲಿಸಿ. ಸಮುದ್ರದ ಮಧ್ಯದಲ್ಲಿ ಧೋಣಿ ಮೂಲಕ ತೆರಳಿ ಹೋಮ್ ಹಾಕಿ ಮಳೆಗಾಗಿ ಪ್ರಾರ್ಥನೆ ಸಲ್ಲಿಸಲಾಗಿತ್ತು. ಪೂಜೆಯ ಫಲವಾಗಿ ಮುಂದಿನ 48 ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆ ಆರಂಭ ಆಗುತ್ತೆ ಅಂತಾ ಭವಿಷ್ಯ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ