AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ: ಗಂಡ ಹೆಂಡತಿ ಜಗಳಕ್ಕೆ ಮೊಸಳೆಗೆ ತುತ್ತಾದ ಮಗು

ನಿನ್ನೆ ರಾತ್ರಿ ಗಂಡ ರವಿಕುಮಾರ್ ಜೊತೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿದ್ದ ಸಾವಿತ್ರಿ, ಕೋಪದಲ್ಲಿ ಮಗುವನ್ನ ಮೊಸಳೆಗಳಿದ್ದ ನಾಲೆಗೆ ಎಸೆದು ನಂತರ ಪಶ್ಚಾತಾಪದಿಂದಾಗಿ ಘಟನೆ ಬಗ್ಗೆ ಬಾಯಿ ಬಿಟ್ಟಿದ್ದಾರೆ. ಮೊಸಳೆ ಬಾಯಲ್ಲಿ 6 ವರ್ಷದ ಮಗು ವಿನೋದ್​​ ಸಾವಿಗೀಡಾಗಿದೆ. ಸದ್ಯ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದು, ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಕಾರವಾರ: ಗಂಡ ಹೆಂಡತಿ ಜಗಳಕ್ಕೆ ಮೊಸಳೆಗೆ ತುತ್ತಾದ ಮಗು
ಕಾರವಾರ: ಗಂಡ ಹೆಂಡತಿ ಜಗಳಕ್ಕೆ ಮೊಸಳೆಗೆ ತುತ್ತಾದ ಮಗು
ವಿನಾಯಕ ಬಡಿಗೇರ್​
| Edited By: |

Updated on: May 05, 2024 | 11:55 AM

Share

ಕಾರವಾರ, ಮೇ 05: ‘ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು’ ಎಂಬ ಮಾತು ನಾವು ನೀವು ಕೇಳೇ ಇರ್ತೀವಿ. ಆದರೆ ಇಲ್ಲೊಂದು ಪ್ರಕರಣದಲ್ಲಿ ಮಾತ್ರ ಆ ಕೂಸು ಅಮಾನವೀಯ ಮತ್ತು ಆಘಾತಕಾರಿಯಾಗಿ ಮೃತಪಟ್ಟಿದೆ. ಗಂಡನೊಂದಿಗಿನ (husband) ಜಗಳದಿಂದ ಸಿಟ್ಟಿಗೆದ್ದ ಹೆಂಡತಿ (wife) ತಾನು ಹೆತ್ತ ಮಗುವನ್ನು ರಾತ್ರೊ ರಾತ್ರಿ ಮೊಸಳೆಗಳಿದ್ದ ನಾಲೆಗೆ ಎಸೆದಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ. ಸಾವಿತ್ರಿ ಎಂಬ ಮಹಿಳೆ ದುಷ್ಕೃತ್ಯವೆಸಗಿದ್ದಾರೆ.

ನಿನ್ನೆ ರಾತ್ರಿ ಗಂಡ ರವಿಕುಮಾರ್ ಜೊತೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿದ್ದ ಸಾವಿತ್ರಿ, ಕೋಪದಲ್ಲಿ ಮಗುವನ್ನ ಮೊಸಳೆಗಳಿದ್ದ ನಾಲೆಗೆ ಎಸೆದು ನಂತರ ಪಶ್ಚಾತಾಪದಿಂದಾಗಿ ಘಟನೆ ಬಗ್ಗೆ ಬಾಯಿ ಬಿಟ್ಟಿದ್ದಾರೆ. ಮೊಸಳೆ ಬಾಯಲ್ಲಿ 6 ವರ್ಷದ ಮಗು ವಿನೋದ್​​ ಸಾವಿಗೀಡಾಗಿದೆ. ನಿನ್ನೆ ರಾತ್ರಿಯಿಂದ ಶವವನ್ನು ತೆಗೆಯಲು ಮುಳುಗು ತಜ್ಞರಿಂದ ಶೋಧ ಕಾರ್ಯ ಮುಂದುವರೆದಿದ್ದು, ಕೊನೆಗೂ ಮಗುವಿನ ಮೃತದೇಹ ಸಿಕ್ಕಿದೆ. ಮಗುವಿನ ಬಲಗೈಯನ್ನು ಮೊಸಳೆ ಕಚ್ಚಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಮಾತು ಬಾರದ ಮಗು: ಜಗಳಕ್ಕೆ ಇದೇ ನೆಪವಾಯ್ತಾ?

ಮೃತ 6 ವರ್ಷದ ವಿನೋದ್​​ ಮಾತು ಬಾರದ ಮಗು. ಇದನ್ನೇ ನೆಪಮಾಡಿಕೊಂಡಿದ್ದ ಗಂಡ ಕುಡಿದು ಹೆಂಡತಿ ಜತೆ ಜಗಳವಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಅಂತಾ ಗಂಡ ರವಿಕುಮಾರ್ ಬೈಯ್ಯುತ್ತಿದ್ದ. ಹೀಗಾಗಿ ಗಂಡನ ಜತೆ ಗಲಾಟೆಯ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋದ ತಾಯಿ ಸಾವಿತ್ರಿ ನಾಲೆಗೆ ಎಸೆದಿದ್ದಾರೆ.

ಇದನ್ನೂ ಓದಿ: ಹಾವೇರಿ: ಮಗ ಪ್ರಿಯತಮೆಯೊಂದಿಗೆ ಓಡಿಹೋಗಿದ್ದಕ್ಕೆ ಮಹಿಳೆಯ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ

ಇಂದು ಬೆಳಗ್ಗೆ ಕಾರ್ಯಾಚರಣೆ ವೇಳೆ ಮಗುವಿನ ಜತೆ ಮೊಸಳೆ ಆಗಾಗ ಕಾಣಿಸಿಕೊಳ್ಳುತ್ತಿತ್ತು. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು ಮತ್ತು ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದ್ದು, ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹವನ್ನು ಮುಳುಗು ತಜ್ಞರು ಬಿಡಿಸಿಕೊಂಡು ಬಂದಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ಬಾಲಕಿಗೆ ಲೈಂಗಿಕ ದೌರ್ಜನ್ಯ, ಪೊಲೀಸರ ಮೇಲೆಯೇ ತಿರುಗಿಬಿದ್ದ ಆರೋಪಿಗೆ ಗುಂಡೇಟು

ಸದ್ಯ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದು, ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ