AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monkey disease: ಉತ್ತರ ಕನ್ನಡ ಜಿಲ್ಲೆಯಲ್ಲಿ ಶತಕ ದಾಟಿದ ಮಂಗನ ಕಾಯಿಲೆ ಪ್ರಕರಣಗಳು

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ಶತಕ ದಾಟಿದೆ. ಜಿಲ್ಲೆಯಲ್ಲಿ ಈವರೆಗೆ 108 ಜನರಲ್ಲಿ ಕೆಎಫ್​​ಡಿ ಪತ್ತೆ ಆಗಿದೆ. ಸಿದ್ದಾಪುರ ಒಂದೇ ತಾಲೂಕಿನಲ್ಲಿ ಮಂಗನಕಾಯಿಲೆ 100ಕ್ಕೇರಿದೆ. ಮಂಗನ ಕಾಯಿಲೆ ಪ್ರಕರಣ ತಡೆಗಟ್ಟುವಲ್ಲಿ ಜಿಲ್ಲಾಡಳಿತ ವಿಫಲವಾಗಿದ್ದು, ಮಂಗನಕಾಯಿಲೆ ಸಾವಿನ ಸಂಖ್ಯೆ 9ಕ್ಕೆ ಏರಿಕೆ ಆಗಿದೆ. ಹೀಗಾಗಿ ಕಾಡಂಚಿನ ಗ್ರಾಮಗಳಲ್ಲಿ ಹೆಚ್ಚಿದ ಆತಂಕ ಶುರುವಾಗಿದೆ.

Monkey disease: ಉತ್ತರ ಕನ್ನಡ ಜಿಲ್ಲೆಯಲ್ಲಿ ಶತಕ ದಾಟಿದ ಮಂಗನ ಕಾಯಿಲೆ ಪ್ರಕರಣಗಳು
ಉತ್ತರ ಕನ್ನಡ ಜಿಲ್ಲೆಯಲ್ಲಿ ಶತಕ ದಾಟಿದ ಮಂಗನ ಕಾಯಿಲೆ ಪ್ರಕರಣಗಳು
ಸೂರಜ್​, ಮಹಾವೀರ್​ ಉತ್ತರೆ
| Updated By: ಗಂಗಾಧರ​ ಬ. ಸಾಬೋಜಿ|

Updated on:May 22, 2024 | 10:17 PM

Share

ಕಾರವಾರ, ಮೇ 22: ಬರ ಬಿಸಿಲಿನಲ್ಲಿ ಸದ್ದಿಲ್ಲದೆ ಮಂಗನ ಕಾಯಿಲೆ (Monkey disease) ಪಸರಿಸುತ್ತಿದ್ದು, ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 108 ಜನರಲ್ಲಿ ಕೆಎಫ್​​ಡಿ ಪತ್ತೆ ಆಗಿದೆ. ಆ ಮೂಲಕ ಮಂಗನ ಕಾಯಿಲೆ ಪ್ರಕರಣದಲ್ಲಿ ಜಿಲ್ಲೆಯು ಶತಕ ದಾಟಿದೆ. ಸಿದ್ದಾಪುರ ಒಂದೇ ತಾಲೂಕಿನಲ್ಲಿ ಮಂಗನಕಾಯಿಲೆ 100 ಕ್ಕೇರಿದೆ. 11 ವರ್ಷದ ಬಾಲಕನಲ್ಲಿ ಕೂಡ ಮಂಗನಕಾಯಿಲೆ ಪತ್ತೆ ಆಗಿದೆ. ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರದ ಕೆಎಫ್​ಡಿ ಹೆಮಟೆ ಮನೆಯಲ್ಲಿ ಪತ್ತೆಯಾಗಿದೆ.

ಕೊರ್ಲಕೈ ಒಂದೇ ಗ್ರಾಮದಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆ ಆಗಿದ್ದು, ಮಂಗನ ಕಾಯಿಲೆ ಪ್ರಕರಣ ತಡೆಗಟ್ಟಲು ಜಿಲ್ಲಾಡಳಿತ ವಿಫಲವಾಗಿದೆ. ಇನ್ನು ಮಂಗನಕಾಯಿಲೆಯಿಂದಾಗಿ ಸಾವಿನ ಸಂಖ್ಯೆ 9ಕ್ಕೆ ಏರಿದೆ. ಹೀಗಾಗಿ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಹೆಚ್ಚಿದೆ.

ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ಮಂಗನ ಕಾಯಿಲೆಗೆ ಕಾರ್ಮಿಕ ಮಹಿಳೆ ಬಲಿ, ಸೌದೆ ತರಲು ಎಸ್ಟೇಟಿಗೆ ಹೋಗಿದ್ದೇ ತಪಾಯ್ತಾ?

ಈ ವರ್ಷದ ಪ್ರಾರಂಭದಲ್ಲೇ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಮಂಗನಕಾಯಿಲೆ ಖಾತೆ ತೆರೆದಿತ್ತು. ಕಾಯಿಲೆಗೆ ಈ ಹಿಂದೆ ನೀಡಲಾಗುತಿದ್ದ ಲಸಿಕೆಯನ್ನು ಪರಿಣಾಮಕಾರಿ ಅಲ್ಲ ಹಾಗೂ ಗುಣಮಟ್ಟದ ಕಾರಣ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (CDSCO) ಹಿಂಪಡೆದಿತ್ತು. ಹೀಗಾಗಿ ಮಂಗನಕಾಯಿಲೆ ಗೆ ಲಸಿಕೆ ಸಹ ಇಲ್ಲ.ಹೀಗಾಗಿ ಜಿಲ್ಲಾ ಆರೋಗ್ಯ ಇಲಾಖೆ ಸೊಳ್ಳೆ, ಉಣಗು, ತಿಗಣೆಗಳು ಕಚ್ಚದಂತೆ ತಡೆಯುವ ಡಿ.ಎಮ್.ಪಿ ಆಯಲ್ ನನ್ನು ಮಾತ್ರ ಜನರಿಗೆ ನೀಡುತ್ತಿದ್ದು ಎರಡು ವರ್ಷದಿಂದ ಲಸಿಕೆ ಬಂದ್ ಮಾಡಿತ್ತು.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 2ನೇ ಬಲಿ, ಹೆಚ್ಚಾದ ಆತಂಕ

ಹೀಗಾಗಿ ಜನರಲ್ಲಿ ಸಹ ಲಸಿಕೆ ಇಲ್ಲದ ಕಾರಣ ಸೊಂಕಿನ ಪ್ರಮಾಣ ಸಹ ಗಣನೀಯ ಏರಿಕೆ ಕಂಡಿದೆ. ಇನ್ನು ಈ ಹಿಂದೆ ಸರ್ಕಾರ ಮಂಗನಕಾಯಿಲೆಯಿಂದ ಮೃತರಾದ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿತ್ತು. ಇದರಂತೆ ಶಿವಮೊಗ್ಗ ಜಿಲ್ಲೆಯ ಮೃತರ ಕುಟುಂಬಕ್ಕೆ ಪರಿಹಾರ ನೀಡಿತ್ತು. ಆದರೆ ಉತ್ತರ ಕನ್ನಡ ಜಿಲ್ಲೆಯ ಮೃತರ ಕುಟುಂಬಕ್ಕೆ ಪರಿಹಾರ ಈವರೆಗೂ ಬಿಡುಗಡೆಯಾಗಿಲ್ಲ. ಇನ್ನು ವೈದ್ಯಕೀಯ ಮೂಲಭೂತ ವ್ಯವಸ್ಥೆ ಸಹ ಅಷ್ಟಕಷ್ಟೆ ಆಗಿದ್ದು ಸ್ಥಳೀಯ ಜನರು ಆರೋಗ್ಯ ಇಲಾಖೆ ವಿರುದ್ಧ ಕಿಡಿಕಾರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:59 pm, Wed, 22 May 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!