ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ಬಸ್ ಪಲ್ಟಿ; ಮಹಿಳೆ ಸಾವು, ಎಂಟು ಮಂದಿಗೆ ಗಂಭೀರ ಗಾಯ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ಬಸ್ ಲಾರಿಗೆ ಡಿಕ್ಕಿಯಾಗಿ ಚಾಲಕನಿಗೆ ಗಂಭೀರ ಗಾಯಗಳಾದ ಘಟನೆ ಅರಬೈಲ್ ಘಟ್ಟದ ಬಳಿ ನಡೆದಿದ್ದು, ಘಟನೆಯಲ್ಲಿ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕಾರವಾರ: ಶಾಲಾ ಬಸ್ ಪಲ್ಟಿಯಾಗಿ 60 ವರ್ಷದ ಮಹಿಳೆ ಸಾವುನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆ ಅರಬೈಲ್ ಘಟ್ಟದ ಬಳಿ ನಡೆದಿದೆ. ಘಟನೆಯಲ್ಲಿ ಶಾಲಾ ಬಸ್ ಚಾಲಕ ಸೇರಿದಂತೆ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಉಳಿದ 7 ಮಂದಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹುಬ್ಬಳ್ಳಿಯಿಂದ ಅಂಕೋಲಾ ಮಾರ್ಗವಾಗಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಸಿಬ್ಬಂದಿಗೆ ರಜೆ ಹಿನ್ನೆಲೆ ಪ್ರವಾಸ ಕೈಗೊಳ್ಳಲಾಗಿತ್ತು. ಅದರಂತೆ ಹುಬ್ಬಳಿಯಿಂದ ಅಂಕೋಲಾ ಮಾರ್ಗವಾಗಿ ಪ್ರವಾಸಕ್ಕೆ ತೆರಳುತ್ತಿದ್ದ ರಾಣಿಬೆನ್ನೂರಿನ ಪರಿಣಿತಿ ವಿದ್ಯಾ ಮಂದಿರಕ್ಕೆ ಸೇರಿದ್ದ ಬಸ್, ರಾಣೆಬೆನ್ನೂರು ಸಿದ್ಧಾರೂಢ ನಗರದಿಂದ ಶಿರಸಿಯತ್ತ ಬರುತ್ತಿದ್ದಾಗ ಬನವಾಸಿಯ ಬುಗುಡಿಕೊಪ್ಪದಲ್ಲಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಶಿರಸಿ- ಹಾವೇರಿ ರಾಷ್ಟ್ರೀಯ ಹೆದ್ದಾರಿ 766ಇ ಯಲ್ಲಿ ಈ ದುರ್ಘಟನೆ ನಡೆದಿದೆ.
ದುರ್ಘಟನೆಯಲ್ಲಿ ಕಸ್ತೂರಮ್ಮ ಎಂಬ 60 ವರ್ಷ ಪ್ರಾಯದ ಮಹಿಳೆ ಸಾವನ್ನಪ್ಪಿದ್ದು, ಚಾಲಕ ಸೇರಿದಂತೆ 8 ಮಂದಿಗೆ ಗಂಭೀರ ಗಾಯಗಳಾಗಿದ್ದು, ಉಳಿದ 7 ಮಂದಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆಯಲ್ಲಿ ಚಾಲಕನಿಗೆ ಗಂಭೀರ ಸ್ವರೂಪವಾದ ಗಾಯಗಳಾಗಿವೆ.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:59 am, Fri, 11 November 22