ಕಾರವಾರದಲ್ಲಿ ಕೈಗಾರಿಕೆಗಳ ಸ್ಥಾಪನೆ ವಿಚಾರ, ರೈತರ ಬೇಡಿಕೆ ಪರಿಗಣಿಸಿದ ಜಿಲ್ಲಾಡಳಿತ; ಎಕರೆ ಜಮೀನಿಗೆ ಸಿಗಲಿದೆ 50 ಲಕ್ಷ ಪರಿಹಾರ

ಕಾರವಾರದಲ್ಲಿ ಕೈಗಾರಿಕೆಗಳಿಲ್ಲದ ಕಾರಣ ಉದ್ಯೋಗ ಇಲ್ಲದೇ ಯುವಕರು ಕೆಲಸಕ್ಕಾಗಿ ಗೋವಾದತ್ತ ಪಯಣ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಸರ್ಕಾರ ಗಡಿ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಜ್ಜೆ ಇಟ್ಟಿದೆ.

ಕಾರವಾರದಲ್ಲಿ ಕೈಗಾರಿಕೆಗಳ ಸ್ಥಾಪನೆ ವಿಚಾರ, ರೈತರ ಬೇಡಿಕೆ ಪರಿಗಣಿಸಿದ ಜಿಲ್ಲಾಡಳಿತ; ಎಕರೆ ಜಮೀನಿಗೆ ಸಿಗಲಿದೆ 50 ಲಕ್ಷ ಪರಿಹಾರ
ಕಾರವಾರ ಗಡಿ ಭಾಗದಲ್ಲಿ ಕೈಗಾರಿಕೆಗಳ ಸ್ಥಾಪನೆ: ರೈತರೊಂದಿಗಿನ ಸಭೆ ಫಲಪ್ರದ; ರೈತರ ಜಮೀನಿಗೆ ಸಿಗಲಿದೆ 50 ಲಕ್ಷ ಪರಿಹಾರ
Follow us
TV9 Web
| Updated By: Rakesh Nayak Manchi

Updated on:Nov 21, 2022 | 3:16 PM

ಕಾರವಾರ: ರಾಜ್ಯದ ಗಡಿ ಜಿಲ್ಲೆಯಾದ ಉತ್ತರ ಕನ್ನಡದ ಕಾರವಾರದಲ್ಲಿ ಕೈಗಾರಿಕೆಗಳೇ ಇಲ್ಲದ ಹಿನ್ನೆಲೆ ನಿರುದ್ಯೋಗ ಸಮಸ್ಯೆ ದೊಡ್ಡ ಸಮಸ್ಯೆಯಾಗಿ ಕಾಡುತ್ತಿತ್ತು. ಪರಿಣಾಮವಾಗಿ ಯುವಕರು ಕೆಲಸಕ್ಕಾಗಿ ಪ್ರತಿನಿತ್ಯ ಗೋವಾಕ್ಕೆ ಪಯಣ ಮಾಡುತ್ತಿದ್ದರು. ಹೀಗಾಗಿ ಕಾರವಾರದಲ್ಲಿ ಕೈಗಾರಿಕೆಗಳನ್ನ ಪ್ರಾರಂಭಿಸಿ ಎನ್ನುವ ಕೂಗು ಹಿಂದಿನಿಂದ ಕೇಳಿ ಬಂದಿತ್ತು. ಇನ್ನು ಕಾರವಾರ ಕೈಗಾರಿಕೆ ಅಭಿವೃದ್ಧಿ ಮಂಡಳಿ ಕಾರವಾರ ತಾಲೂಕಿನ ಮುಡಗೇರಿ ಗ್ರಾಮದಲ್ಲಿ ಕೈಗಾರಿಕೆಗಳನ್ನ ಸ್ಥಾಪಿಸಲು 1997ರಲ್ಲಿಯೇ ರೈತರ ಜಮೀನನ್ನ ವಶಕ್ಕೆ ಪಡೆದಿತ್ತು. ಆದರೆ ಸೂಕ್ತ ಪರಿಹಾರ ಕೊಡದ ಕಾರಣ ಇನ್ನೂ ಕೈಗಾರಿಕೆಗಳನ್ನ ಪ್ರಾರಂಭ ಮಾಡಲು ಆಗಿರಲಿಲ್ಲ. ಸದ್ಯ ಕೈಗಾರಿಕೆ ಪ್ರಾರಂಭಕ್ಕೆ ಹೆಜ್ಜೆ ಇಟ್ಟಿರುವ ಜಿಲ್ಲಾಡಳಿತ ರೈತರ ಸಭೆಯನ್ನ ನಡೆಸಿ ಭೂಮಿಗೆ ಸೂಕ್ತ ಪರಿಹಾರ ಕೊಡುವ ಸಂಬಂಧ ಚರ್ಚೆ ನಡೆಸಿದೆ. ರೈತರ ಬೇಡಿಕೆಯಂತೆ ಎಕರೆ ಜಮೀನಿಗೆ 50 ಲಕ್ಷ ಪರಿಹಾರ ಕೊಡಲು ಸಭೆಯಲ್ಲಿ ನಿರ್ಧರಿಸಿ ಸರ್ಕಾರ ಪ್ರಸ್ತಾವನೆಯನ್ನ ಸಹ ಕಳಿಸಿದ್ದು, ಒಂದೊಮ್ಮೆ ಸರ್ಕಾರ ಒಪ್ಪಿಗೆ ಸೂಚಿಸಿದರೆ ಸುಮಾರು 73 ಎಕರೆ ಪ್ರದೇಶದಲ್ಲಿ ನೌಕಾನೆಲೆಗೆ ಸಂಭಂದಿಸಿದ ಕೈಗಾರಿಕೆಗಳು ಕಾರವಾರದಲ್ಲಿ ಪ್ರಾರಂಭವಾಗಲಿದೆ.

“ಜನರಿಗೆ ಸೂಕ್ತ ಪರಿಹಾರ ನೀಡದ ಹೊರತು ಕಾರವಾರ ತಾಲೂಕಿನ ಮೂಡಿಗೆರೆ ಗ್ರಾಮದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಕೆಲಸ ಕಾರ್ಯಗಳನ್ನು ಆರಂಭಿಸಲು ಸಾಧ್ಯವಿಲ್ಲ. ಹೀಗಾಗಿ 73 ಎಕರೆಗೆ ದರ ನಿಗದಿ ಸಭೆಯನ್ನು ಮಾಡಿ ಜನರ ಬೇಡಿಕೆಯನ್ನು ಪರಿಗಣನೆಗೆ ತೆಗೆದುಕೊಂಡು 50 ಲಕ್ಷ ದರ ನಿಗದಿ ಮಾಡಲಾಗಿದೆ.” -ಪ್ರಭುಲಿಂಗ ಕವಲಿಕಟ್ಟಿ, ಜಿಲ್ಲಾಧಿಕಾರಿ, ಉತ್ತರ ಕನ್ನಡ

ಇದನ್ನೂ ಓದಿ: ಅದ್ದೂರಿಯಾಗಿ ನಡೆದ ದಹಿಂಕಾಲ ಉತ್ಸವ, ಸಹಸ್ರಾರು ಭಕ್ತರ ಮಧ್ಯ ಪಲಕ್ಕಿ ಮೇಲೆ ಬಂದ ಶ್ರೀ ವೆಂಕಟರಮಣ

ಕಳೆದ 20 ವರ್ಷಗಳ ಹಿಂದೆ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ರೈತರಿಂದ ಜಮೀನು ಪಡೆಯುವಾಗ ಗುಂಟೆಗೆ 8833 ರೂಪಾಯಿ ಹಣ ಕೊಡುವುದಾಗಿ ಹೇಳಿತ್ತು. ಆದರೆ ಇದಕ್ಕೆ ರೈತರು ಒಪ್ಪಿಗೆ ನೀಡಿರಲಿಲ್ಲ. ಆದರೂ ಸಹ ಜಮೀನನ್ನ ತಮ್ಮ ಹೆಸರಿಗೆ ಬರೆಸಿಕೊಂಡಿದ್ದು, ಪಹಣಿ ಪತ್ರದಲ್ಲೂ ಕೈಗಾರಿಕಾ ಅಭಿವೃದ್ಧಿ ಮಂಡಳಿಯ ಹೆಸರಿಗೆ ಜಮೀನುಗಳು ಮಾರ್ಪಟ್ಟಿತ್ತು. ಪರಿಹಾರದ ಹಣದ ಬಗ್ಗೆ ಗೊಂದಲವಾದ ಹಿನ್ನಲೆ ಈ ಹಿಂದೆ ಎರಡು ಬಾರಿ ಜಿಲ್ಲಾಡಳಿತ ರೈತರೊಂದಿಗೆ ಸಭೆ ನಡೆಸಿದ್ದರೂ ಸಹ ಯಾವುದೇ ಹೊಂದಾಣಿಕೆಯಾಗಿಲ್ಲ. ಇದೀಗ ಜಿಲ್ಲಾಡಳಿತದೊಂದಿಗೆ ಅಂತಿಮ ಹಂತದ ಮಾತುಕತೆಯನ್ನ ನಡೆಸಿದ ರೈತರಿಗೆ ಎಕರೆಗೆ 50 ಲಕ್ಷ ಪರಿಹಾರ ಕೊಡಲು ಸಮ್ಮತಿ ನೀಡಿದ್ದು, ಇದಕ್ಕೆ ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ.

ಸದ್ಯ ಒಂದೆರಡು ತಿಂಗಳಿನಲ್ಲಿಯೇ ಪರಿಹಾರ ಹಣದ ಬಗ್ಗೆ ನಿರ್ಧಾರ ತೆಗೆದುಕೊಂಡು ಇಲಾಖೆಯ ಅಧಿಕಾರಿಗಳೂ ಸ್ಥಳಕ್ಕೆ ಬಂದು ವಶಪಡಿಸಿಕೊಂಡ ಭೂಮಿಗೆ ಪರಿಹಾರ ಕೊಡಲಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ಎಲ್ಲವೂ ಅಂದುಕೊಂಡಂತೆ ಆದರೆ ಕಾರವಾರದ ಜನರು ಬಹುವರ್ಷದ ಬೇಡಿಕೆಯಾಗಿದ್ದ ಕೈಗಾರಿಕೆಗಳು ಶೀಘ್ರದಲ್ಲಿ ಗಡಿ ಭಾಗದಲ್ಲಿ ಪ್ರಾರಂಭವಾಗಲಿದ್ದು ಇದು ಸ್ಥಳೀಯರಿಗೆ ಹೆಚ್ಚು ಉದ್ಯೋಗ ನೀಡುವಂತಾಗಲಿ ಎನ್ನುವುದು ಎಲ್ಲರ ಅಭಿಪ್ರಾಯವಾಗಿದೆ.

ವರದಿ: ವಿನಾಯಕ ಬಡಿಗೇರ, ಟಿವಿ9 ಕಾರವಾರ

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:13 pm, Mon, 21 November 22

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ