KAS ಅಧಿಕಾರಿ ಈಗ ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಉತ್ತರಾಧಿಕಾರಿ: ಪಟ್ಟಾಭಿಷೇಕ ಮುಹೂರ್ತ ಫಿಕ್ಸ್

ವಿಶ್ವ ಒಕ್ಕಲಿಗರ ಮಹಾಸಂಸ್ಥಾನಕ್ಕೆ ಹಿರಿಯ ಕೆಎಎಸ್ ಅಧಿಕಾರಿ ಡಾ ಎಚ್​ಎಲ್ ನಾಗರಾಜ್ ಅವರನ್ನು ನೂತನ ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ಡಿಸೆಂಬರ್ 14 ಮತ್ತು 15 ರಂದು ಬೆಂಗಳೂರಿನಲ್ಲಿ ಪಟ್ಟಾಭಿಷೇಕ ಕಾರ್ಯಕ್ರಮ ನಡೆಯಲಿದೆ. ಚಂದ್ರಶೇಖರ ಸ್ವಾಮೀಜಿ ಅವರು ಉತ್ತರಾಧಿಕಾರಿಗೆ ಪಟ್ಟಾಭಿಷೇಕ ನೆರವೇರಿಸಲಿದ್ದಾರೆ. ಪ್ರಮುಖ ಧಾರ್ಮಿಕ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

KAS ಅಧಿಕಾರಿ ಈಗ ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಉತ್ತರಾಧಿಕಾರಿ: ಪಟ್ಟಾಭಿಷೇಕ ಮುಹೂರ್ತ ಫಿಕ್ಸ್
KAS ಅಧಿಕಾರಿ ಈಗ ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಉತ್ತರಾಧಿಕಾರಿ: ಪಟ್ಟಾಭಿಷೇಕ ಮುಹೂರ್ತ ಫಿಕ್ಸ್
Follow us
Prajwal Kumar NY
| Updated By: ಗಂಗಾಧರ​ ಬ. ಸಾಬೋಜಿ

Updated on:Dec 13, 2024 | 4:51 PM

ಬೆಂಗಳೂರು, ಡಿಸೆಂಬರ್​ 13: ವಿಶ್ವ ಒಕ್ಕಲಿಗರ ಮಹಾಸಂಸ್ಥಾನಕ್ಕೆ (Vishwa Okkaliga Mahasamsthan) ನೂತನ ಉತ್ತರಾಧಿಕಾರಿಯಾಗಿ ಹಿರಿಯ ಕೆಎಎಸ್ ಅಧಿಕಾರಿ ಡಾ.ಹೆಚ್​.ಎಲ್​.ನಾಗರಾಜ್ ನೇಮಕಗೊಂಡಿದ್ದಾರೆ. ಕೆಂಗೇರಿ ಬಳಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನಮಠದಲ್ಲಿ ಡಿಸೆಂಬರ್​ 14, 15ರಂದು ಪಟ್ಟಾಭಿಷೇಕ ಕಾರ್ಯಕ್ರಮ ನಡೆಯಲಿದೆ. ಪ್ರಸ್ತುತ ಪೀಠಾಧಿಪತಿಯಾಗಿರುವ ಚಂದ್ರಶೇಖರ ಸ್ವಾಮೀಜಿಗೆ 81 ವಯಸ್ಸು ಆಗಿದೆ. ಹೀಗಾಗಿ ಮಠದ ಟ್ರಸ್ಟಿಗಳು, ಸ್ವಾಮೀಜಿ ತೀರ್ಮಾನದಂತೆ ಪಟ್ಟಾಭಿಷೇಕ ಮಾಡಲಾಗುತ್ತಿದೆ.

ಜನದನಿ ಬಳಗದ ಅಧ್ಯಕ್ಷ ಲಂಕೇಶ್​ ಮಂಗಲ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಡಿ.14 ಸಂಜೆ 6 ಗಂಟೆಯಿಂದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಚಂದ್ರಶೇಖರನಾಥ ಸ್ವಾಮೀಜಿ ಅವರು ಉತ್ತರಾಧಿಕಾರಿಗೆ ನೆರವೇರಿಸಲಿದ್ದಾರೆ. ಗಂಗೆಪೂಜೆ, ಶಿವಪಾರ್ವತಿಯರ ಪೂಜೆ, ಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ, ನಾಂದಿ ಸಮಾರಾಧನೆ, ರಕ್ಷಾ ಬಂಧನ, ಪೋಷಕರಿಂದ ರಕ್ತ ಸಂಬಂಧದ ತ್ಯಾಗ ಮತ್ತು ಸಮಾಜಕ್ಕೆ ಉತ್ತರಾಧಿಕಾರಿಯ ಸಮರ್ಪಣೆ ಇತ್ಯಾದಿ ಕಾರ್ಯಗಳು ನಡೆಯಲಿವೆ.

ಇದನ್ನೂ ಓದಿ: ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ವಾಪಸ್ ಪಡೆಯಬೇಕು: ಡಿಕೆ ಸುರೇಶ್ ಆಗ್ರಹ

ಇನ್ನು ಡಿ. 15ರ ಬೆಳಿಗ್ಗೆ 6 ಗಂಟೆಯಿಂದ ಪಟ್ಟಾಭಿಷೇಕ ನಡೆಯಲಿದ್ದು, ಗೂಳೂರು ಮಹಾ ಸಂಸ್ಥಾನಮಠಥದ ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ತರಳಬಾಲು ಜಗದ್ಗುರು ಶಾಖಾಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ಮತ್ತು ಬೇಲಿಮಠ ಸಂಸ್ಥಾನದ ಶಿವಾನುಭ ಚರಮೂರ್ತಿ ಶಿವರುದ್ರ ಮಹಾಸ್ವಾಮೀಜಿಗಳು ಭಾಗಿಯಾಗಲಿದ್ದಾರೆ.

ಇತ್ತೀಚೆಗೆ ವಿಶ್ವ ಒಕ್ಕಲಿಗರ ಮಹಾಸಂಸ್ಥಾನಕ್ಕೆ ನೂತನ ಉತ್ತರಾಧಿಕಾರಿಯಾಗಿ ಹಿರಿಯ ಕೆಎಎಸ್ ಅಧಿಕಾರಿ ಡಾ.ಹೆಚ್​.ಎಲ್​.ನಾಗರಾಜ್ ಅವರನ್ನು ನೇಮಕ ಮಾಡಲಾಗಿತ್ತು. ಆ ಮೂಲಕ ಅವರು ಆಧ್ಯಾತ್ಮಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆಎಎಸ್ ಅಧಿಕಾರಿಯೊಬ್ಬರು ಸನ್ಯಾಸತ್ವ ಸ್ವೀಕರಿಸಲು ನಿರ್ಧರಿಸಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು.

ಡಾ.ಹೆಚ್​.ಎಲ್​.ನಾಗರಾಜ್ ಅವರು ಸರಿಸುಮಾರು 13 ವರ್ಷಗಳ ಹಿಂದೆ ಅಂದರೆ ತಹಶೀಲ್ದಾರ್ ಆಗಿದ್ದ ವೇಳೆಯಲ್ಲಿ ಅವರು ದೀಕ್ಷೆ ಪಡೆದುಕೊಂಡಿದ್ದರು. ಆದರೆ ಕುಟುಂಬಸ್ಥರು ಮತ್ತು ಜನರ ಒತ್ತಾಯದಿಂದ ಸನ್ಯಾಸತ್ವ ತೊರೆದಿದ್ದರು.

ಇದನ್ನೂ ಓದಿ: ಮುಸ್ಲಿಮರಿಗೆ ಮತದಾನದ ಹಕ್ಕು ರದ್ದುಪಡಿಸಿ ಎಂದಿದ್ದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್​ಐಆರ್

ಜುಲೈ 2011 ರಲ್ಲಿ ಮತ್ತೆ ನಾಗರಾಜ್​ ಅವರು ಮಠದಲ್ಲಿ ಧಾರ್ಮಿಕ ಪ್ರತಿಜ್ಞೆ ಸ್ವೀಕರಿಸಿದ್ದು, ನಿಶ್ಚಲಾನಂದನಾಥ ಸ್ವಾಮೀಜಿ ಎಂಬ ಹೆಸರನ್ನು ಪಡೆದರು. ದೀಕ್ಷಾ ಸ್ವೀಕರಿಸಿದ 15 ದಿನಗಳಲ್ಲಿ ಅವರು ತಮ್ಮ ಸರ್ಕಾರಿ ಕರ್ತವ್ಯಗಳನ್ನು ಪುನರಾರಂಭಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:34 pm, Fri, 13 December 24

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ