Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಎಸ್‌ ಪೂರ್ವಭಾವಿ ಪರೀಕ್ಷೆ: ಕೆಪಿಎಸ್​ಸಿ ವಿರುದ್ಧ ಕಿಡಕಾರಿದ ಹೆಚ್​ಡಿ ಕುಮಾರಸ್ವಾಮಿ

ಆಗಸ್ಟ್​ 25ರಂದು ನಿಗದಿಯಾಗಿದ್ದ ಕರ್ನಾಟಕ ಲೋಕಸೇವಾ ಆಯೋಗ ಪೂರ್ವಭಾವಿ ಪರೀಕ್ಷೆಯನ್ನು ಇತ್ತೀಚೆಗೆ ಮತ್ತೆ ಮುಂದೂಡಿಕೆ ಮಾಡಲಾಗಿತ್ತು. ಸದ್ಯ ಈ ವಿಚಾರವಾಗಿ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, KAS ಪೂರ್ವಭಾವಿ ಪರೀಕ್ಷೆ ನಡೆಸಲು ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಕೆಎಎಸ್‌ ಪೂರ್ವಭಾವಿ ಪರೀಕ್ಷೆ: ಕೆಪಿಎಸ್​ಸಿ ವಿರುದ್ಧ ಕಿಡಕಾರಿದ ಹೆಚ್​ಡಿ ಕುಮಾರಸ್ವಾಮಿ
ಕೆಎಎಸ್‌ ಪೂರ್ವಭಾವಿ ಪರೀಕ್ಷೆ: ಕೆಪಿಎಸ್​ಸಿ ವಿರುದ್ಧ ಕಿಡಕಾರಿದ ಹೆಚ್​ಡಿ ಕುಮಾರಸ್ವಾಮಿ
Follow us
ಗಂಗಾಧರ​ ಬ. ಸಾಬೋಜಿ
|

Updated on: Aug 15, 2024 | 3:37 PM

ಬೆಂಗಳೂರು, ಆಗಸ್ಟ್​ 15: ಕರ್ನಾಟಕ ಲೋಕಸೇವಾ ಆಯೋಗ (KPSC) ಈ ತಿಂಗಳ 27ರಂದು 2023-24ರ ಕೆಎಎಸ್​​ (KAS) ಪೂರ್ವಭಾವಿ ಪರೀಕ್ಷೆ ನಡೆಸಲು ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ವಿಕಲಚೇತನ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಿ ಮತ್ತೊಂದು ದಿನಾಂಕ ನಿಗದಿ ಮಾಡಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡುತ್ತಿದ್ದರೂ ಕೆಪಿಎಸ್​ಸಿ ಹಟಕ್ಕೆ ಬಿದ್ದಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ ಕೆಪಿಎಸ್​ಸಿಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು? ಅನೇಕ ಆಕಾಂಕ್ಷಿಗಳಿಗೆ ಪರೀಕ್ಷೆ ಬರೆಯಲಿಕ್ಕೇ ಸಾಧ್ಯವಾಗುತ್ತಿಲ್ಲ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ, ಅದರಲ್ಲೂ ಅಂಧ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವುದು ಬಹುದೊಡ್ಡ ಸಮಸ್ಯೆಯಾಗಿದೆ ಎಂದು ತಿಳಿಸಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​

ಕೆಲವರು ದುಡ್ಡು ಮಾಡಿಕೊಳ್ಳುವುದಕ್ಕೆ ಈ ಪರೀಕ್ಷೆಯನ್ನು ನಡೆಸುತ್ತಿರುವಂತೆ ಕಾಣುತ್ತಿದೆ. 4-5 ವರ್ಷಗಳಿಂದ ಕಷ್ಟಪಟ್ಟು ಓದಿರುವವರಿಗೆ ಅನ್ಯಾಯ ಮಾಡುವ ದುರಾಸೆ ಒಳ್ಳೆಯದಲ್ಲ. ಕಾಂಗ್ರೆಸ್​ ಸರಕಾರ ಹಾಗೂ ಕೆಪಿಎಸ್​ಸಿ ಕೂಡಲೇ ಪರೀಕ್ಷೆಯನ್ನು ಮುಂದೂಡಬೇಕು. ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಎಲ್ಲಾ ಆಕಾಂಕ್ಷಿಗಳಿಗೂ ಅನುಕೂಲ ಆಗುವ ದಿನಾಂಕ ನಿಗದಿಪಡಿಸಿ ಪರೀಕ್ಷೆ ನಡೆಸಲಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ: ಹೊಸ ದಿನಾಂಕ ನಿಗದಿಪಡಿಸಿದ ಕೆಪಿಎಸ್​​ಸಿ

ಆಗಸ್ಟ್​ 25ರಂದು ನಿಗದಿಯಾಗಿದ್ದ ಪೂರ್ವಭಾವಿ ಪರೀಕ್ಷೆಯನ್ನು ಇತ್ತೀಚೆಗೆ ಮತ್ತೆ ಮುಂದೂಡಿಕೆ ಮಾಡಲಾಗಿತ್ತು. ಆ.25ರಂದೇ ಬ್ಯಾಂಕಿಂಗ್‌ ಪರೀಕ್ಷೆ ನಿಗದಿಯಾಗಿದ್ದರಿಂದ ಕೆಎಎಸ್‌ ಅಭ್ಯರ್ಥಿಗಳಿಗೆ ಸಮಸ್ಯೆಯಾಗಿತ್ತು. ಹೀಗಾಗಿ ಕೆಪಿಎಸ್​ಸಿ ಪರೀಕ್ಷೆ ದಿನಾಂಕ ಮುಂದೂಡುವಂತೆ ಅಭ್ಯರ್ಥಿಗಳು ಮನವಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?