ಕೆಎಎಸ್‌ ಪೂರ್ವಭಾವಿ ಪರೀಕ್ಷೆ: ಕೆಪಿಎಸ್​ಸಿ ವಿರುದ್ಧ ಕಿಡಕಾರಿದ ಹೆಚ್​ಡಿ ಕುಮಾರಸ್ವಾಮಿ

ಆಗಸ್ಟ್​ 25ರಂದು ನಿಗದಿಯಾಗಿದ್ದ ಕರ್ನಾಟಕ ಲೋಕಸೇವಾ ಆಯೋಗ ಪೂರ್ವಭಾವಿ ಪರೀಕ್ಷೆಯನ್ನು ಇತ್ತೀಚೆಗೆ ಮತ್ತೆ ಮುಂದೂಡಿಕೆ ಮಾಡಲಾಗಿತ್ತು. ಸದ್ಯ ಈ ವಿಚಾರವಾಗಿ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, KAS ಪೂರ್ವಭಾವಿ ಪರೀಕ್ಷೆ ನಡೆಸಲು ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಕೆಎಎಸ್‌ ಪೂರ್ವಭಾವಿ ಪರೀಕ್ಷೆ: ಕೆಪಿಎಸ್​ಸಿ ವಿರುದ್ಧ ಕಿಡಕಾರಿದ ಹೆಚ್​ಡಿ ಕುಮಾರಸ್ವಾಮಿ
ಕೆಎಎಸ್‌ ಪೂರ್ವಭಾವಿ ಪರೀಕ್ಷೆ: ಕೆಪಿಎಸ್​ಸಿ ವಿರುದ್ಧ ಕಿಡಕಾರಿದ ಹೆಚ್​ಡಿ ಕುಮಾರಸ್ವಾಮಿ

Updated on: Aug 15, 2024 | 3:37 PM

ಬೆಂಗಳೂರು, ಆಗಸ್ಟ್​ 15: ಕರ್ನಾಟಕ ಲೋಕಸೇವಾ ಆಯೋಗ (KPSC) ಈ ತಿಂಗಳ 27ರಂದು 2023-24ರ ಕೆಎಎಸ್​​ (KAS) ಪೂರ್ವಭಾವಿ ಪರೀಕ್ಷೆ ನಡೆಸಲು ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy)
ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ವಿಕಲಚೇತನ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಿ ಮತ್ತೊಂದು ದಿನಾಂಕ ನಿಗದಿ ಮಾಡಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡುತ್ತಿದ್ದರೂ ಕೆಪಿಎಸ್​ಸಿ ಹಟಕ್ಕೆ ಬಿದ್ದಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ ಕೆಪಿಎಸ್​ಸಿಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು? ಅನೇಕ ಆಕಾಂಕ್ಷಿಗಳಿಗೆ ಪರೀಕ್ಷೆ ಬರೆಯಲಿಕ್ಕೇ ಸಾಧ್ಯವಾಗುತ್ತಿಲ್ಲ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ, ಅದರಲ್ಲೂ ಅಂಧ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವುದು ಬಹುದೊಡ್ಡ ಸಮಸ್ಯೆಯಾಗಿದೆ ಎಂದು ತಿಳಿಸಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​

ಕೆಲವರು ದುಡ್ಡು ಮಾಡಿಕೊಳ್ಳುವುದಕ್ಕೆ ಈ ಪರೀಕ್ಷೆಯನ್ನು ನಡೆಸುತ್ತಿರುವಂತೆ ಕಾಣುತ್ತಿದೆ. 4-5 ವರ್ಷಗಳಿಂದ ಕಷ್ಟಪಟ್ಟು ಓದಿರುವವರಿಗೆ ಅನ್ಯಾಯ ಮಾಡುವ ದುರಾಸೆ ಒಳ್ಳೆಯದಲ್ಲ. ಕಾಂಗ್ರೆಸ್​ ಸರಕಾರ ಹಾಗೂ ಕೆಪಿಎಸ್​ಸಿ ಕೂಡಲೇ ಪರೀಕ್ಷೆಯನ್ನು ಮುಂದೂಡಬೇಕು. ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಎಲ್ಲಾ ಆಕಾಂಕ್ಷಿಗಳಿಗೂ ಅನುಕೂಲ ಆಗುವ ದಿನಾಂಕ ನಿಗದಿಪಡಿಸಿ ಪರೀಕ್ಷೆ ನಡೆಸಲಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ: ಹೊಸ ದಿನಾಂಕ ನಿಗದಿಪಡಿಸಿದ ಕೆಪಿಎಸ್​​ಸಿ

ಆಗಸ್ಟ್​ 25ರಂದು ನಿಗದಿಯಾಗಿದ್ದ ಪೂರ್ವಭಾವಿ ಪರೀಕ್ಷೆಯನ್ನು ಇತ್ತೀಚೆಗೆ ಮತ್ತೆ ಮುಂದೂಡಿಕೆ ಮಾಡಲಾಗಿತ್ತು. ಆ.25ರಂದೇ ಬ್ಯಾಂಕಿಂಗ್‌ ಪರೀಕ್ಷೆ ನಿಗದಿಯಾಗಿದ್ದರಿಂದ ಕೆಎಎಸ್‌ ಅಭ್ಯರ್ಥಿಗಳಿಗೆ ಸಮಸ್ಯೆಯಾಗಿತ್ತು. ಹೀಗಾಗಿ ಕೆಪಿಎಸ್​ಸಿ ಪರೀಕ್ಷೆ ದಿನಾಂಕ ಮುಂದೂಡುವಂತೆ ಅಭ್ಯರ್ಥಿಗಳು ಮನವಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us