ಹುಬ್ಬಳ್ಳಿ: KLE ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಜಾಮೀನು ಅರ್ಜಿಯನ್ನು ನಗರದ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ. ನ್ಯಾಯಾಧೀಶ ಕೆ.ಗಂಗಾಧರ ಅವರು ಅರ್ಜಿ ವಜಾಗೊಳಿಸಿ ಆದೇಶಿಸಿದ್ದಾರೆ. ಸದ್ಯ ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಫೆ.15ರಂದು ಪಾಕ್ ಪರ ವಿದ್ಯಾರ್ಥಿಗಳು ಘೋಷಣೆ ಕೂಗಿ ವಿಡಿಯೋ ಹರಿಬಿಟ್ಟಿದ್ದರು. ಈ ವಿಡಿಯೋ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ, ಆರೋಪಿಗಳ ಪರ ವಕಾಲತ್ತು ವಹಿಸದಂತೆ ಹುಬ್ಬಳ್ಳಿ ವಕೀಲರ ಸಂಘ ತೀರ್ಮಾನಿಸಿತ್ತು. ಇಷ್ಟೇ ಅಲ್ಲ ಆರೋಪಿಗಳ ಪರವಾದಿಸಲು ಬಂದ ವಕೀಲರ ವಿರುದ್ಧ ವಿರೋಧ ವ್ಯಕ್ತವಾಗಿತ್ತು. ಆದ್ರೆ, ಇದನ್ನೆಲ್ಲಾ ಗಂಭೀರವಾಗಿ ಪರಿಗಣಿಸಿದ್ದ ಬೆಂಗಳೂರು ಹೈಕೋರ್ಟ್, ಕಾನೂನು ಉಲ್ಲಂಘನೆ ಮಾಡದಂತೆ ಹಾಗೂ ಸಂವಿಧಾನಕ್ಕೆ ಅಗೌರವ ತರದಂತೆ ಖಡಕ್ ಎಚ್ಚರಿಕೆ ನೀಡಿತ್ತು.
Published On - 3:16 pm, Mon, 9 March 20