AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ್ತೂರಿ ರಂಗನ್ ವರದಿ ಜಾರಿಗೆ ಜನಪ್ರತಿನಿಧಿಗಳ ಸಭೆಯಲ್ಲಿ ಸಮ್ಮತಿ: ಸಚಿವ ಈಶ್ವರ್ ಖಂಡ್ರೆ ಹೇಳಿದ್ದಿಷ್ಟು

ಕರ್ನಾಟಕದಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಿಸುವ ನಿಟ್ಟಿನಲ್ಲಿ ಕಸ್ತೂರಿ ರಂಗನ್​ ವರದಿ ಜಾರಿಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಸಭೆಯಲ್ಲಿ ಸಮ್ಮತಿ ಸಿಕ್ಕಿದೆ. ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ ರಾಜ್ಯದಲ್ಲಿ 20,668 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದೆ ಎಂದು ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಕಸ್ತೂರಿ ರಂಗನ್ ವರದಿ ಜಾರಿಗೆ ಜನಪ್ರತಿನಿಧಿಗಳ ಸಭೆಯಲ್ಲಿ ಸಮ್ಮತಿ: ಸಚಿವ ಈಶ್ವರ್ ಖಂಡ್ರೆ ಹೇಳಿದ್ದಿಷ್ಟು
ಕಸ್ತೂರಿ ರಂಗನ್ ವರದಿ ಜಾರಿಗೆ ಜನಪ್ರತಿನಿಧಿಗಳ ಸಭೆಯಲ್ಲಿ ಸಮ್ಮತಿ: ಸಚಿವ ಈಶ್ವರ್ ಖಂಡ್ರೆ ಹೇಳಿದ್ದಿಷ್ಟು
ಗಂಗಾಧರ​ ಬ. ಸಾಬೋಜಿ
|

Updated on:Sep 19, 2024 | 5:02 PM

Share

ಬೆಂಗಳೂರು, ಸೆಪ್ಟೆಂಬರ್​ 19: ಕರ್ನಾಟಕದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚದರ ಕಿಲೋಮೀಟರ್​ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ (Eshwar Khandre) ಹೇಳಿದ್ದಾರೆ.  ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತಂತೆ ಕೇಂದ್ರ ಸರ್ಕಾರ ಆ.2ರಂದು 6ನೇ ಅಧಿಸೂಚನೆ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಿಲುವು ಸಲ್ಲಿಸಬೇಕಿದ್ದು, 11 ಜಿಲ್ಲೆಗಳ ಜನಪ್ರತಿನಿಧಿಗಳ (ಬಾಧ್ಯಸ್ಥರ) ಸಭೆ ಇಂದು ಮಾಡಲಾಗಿದೆ.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ ರಾಜ್ಯದಲ್ಲಿ 20,668 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದೆ. ಈ ಬಗ್ಗೆ ಭೌತಿಕ ಸರ್ವೆ ನಡೆಸಿದರೆ ಈ ಪ್ರದೇಶ ಇನ್ನೂ ಹೆಚ್ಚಳವಾಗಲಿದೆ ಎಂಬ ಅಭಿಪ್ರಾಯವನ್ನೂ ಜನಪ್ರತಿನಿಧಿಗಳು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.

ಹಲವು ತಲೆಮಾರುಗಳಿಂದ ಅರಣ್ಯ ಪ್ರದೇಶದಲ್ಲೇ ಜೀವನ ನಡೆಸುತ್ತಿರುವವರನ್ನು ಒಕ್ಕಲೆಬ್ಬಿಸುವುದು ಸೂಕ್ತವಲ್ಲ. ಅವರಿಗೆ ಬೇರೆ ಕಡೆ ಪುನರ್ವಸತಿ ಕಲ್ಪಿಸಿದರೂ ಅವರು ಅಲ್ಲಿಗೆ ಹೋಗುವುದಿಲ್ಲ ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಗಿದ್ದು ಹೀಗಾಗಿ ನಾಳೆಯ ಸಚಿವ ಸಂಪುಟ ಸಭೆಯಲ್ಲಿ ಈ ಎಲ್ಲ ವಿಚಾರಗಳ ಬಗ್ಗೆ ಚಿಂತನ ಮಂಥನ ನಡೆಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಸಫಾರಿ ಹೋಗುವವರಿಗೆ ಗುಡ್​ನ್ಯೂಸ್: ಸಿಂಹ, ಹುಲಿ ಜೊತೆಗೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ ಆರಂಭ

ಹಲವು ಜನಪ್ರತಿನಿಧಿಗಳು ಈಗಾಗಲೇ ರಾಜ್ಯದಲ್ಲಿ 16114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶ ಇದ್ದು, ಇನ್ನು ಹೆಚ್ಚಳ ಮಾಡಿದರೆ ಅರಣ್ಯದಂಚಿನ ಜನರ ಬದುಕೇ ದುಸ್ತರವಾಗುತ್ತದೆ. ಹೀಗಾಗಿ ಬಫರ್ ವಲಯವನ್ನು ಶೂನ್ಯಕ್ಕೆ ತರಬೇಕು ಎಂದು ಸಲಹೆ ನೀಡಿದ್ದಾರೆ. ಖಾಲಿ ಇರುವ 16114 ಚ.ಕಿ.ಮೀ. ಮಿತಿಗೆ ನಾವು ಸಮ್ಮತಿಸಿದರೆ ಶೂನ್ಯ ಬಫರ್ ಆಗುತ್ತದೆ ಎಂಬ ಅಭಿಪ್ರಾಯವು ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.

ಈಶ್ವರ ಖಂಡ್ರೆ ಟ್ವೀಟ್​

ಇಂದು ನಡೆದ ಸಭೆಯಲ್ಲಿ ಪಶ್ಚಿಮಘಟ್ಟ ವ್ಯಾಪ್ತಿಯ 11 ಜಿಲ್ಲೆಗಳ ಸಚಿವರ, ಶಾಸಕರ ಮತ್ತು ಸಂಸತ್ ಸದಸ್ಯರ ಅಭಿಪ್ರಾಯ ಪಡೆಯಲಾಗಿದೆ. ಆ ಎಲ್ಲ ಅಭಿಪ್ರಾಯವನ್ನು ನಾಳೆ ನಡೆಯಲಿರುವ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ, ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸಿ, ಸಂಪುಟದ ಅನುಮೋದನೆ ಪಡೆದು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ವಿಶೇಷ ಪ್ಯಾಕೇಜ್​ಗೆ ಒತ್ತಾಯ:

ಈಗಾಗಲೇ ಇರುವ 16114 ಚ.ಕಿ.ಪ್ರದೇಶಕ್ಕೆ ಅಂಗೀಕಾರ ನೀಡಿದರೂ ಈ ಪ್ರದೇಶದಲ್ಲಿರುವ 1576 ಗ್ರಾಮಗಳ ಜನರ ಜೀವನೋಪಾಯಕ್ಕೆ ಅನಾನುಕೂಲ ಆಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಲಾಗಿದೆ.

ಪಶ್ಚಿಮ ಘಟ್ಟ ಕೇವಲ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡಿಗೆ ಮಾತ್ರ ಸಂಬಂಧಿಸಿದ್ದಲ್ಲ. ಈ ಘಟ್ಟ ಪ್ರದೇಶ ಹಲವು ನದಿಗಳ ಉಗಮ ಸ್ಥಾನವಾಗಿದೆ. ಮಿಗಿಲಾಗಿ ಮಳೆಯ ಮಾರುತಗಳನ್ನು ತಡೆಯುವ ಕಾರಣ ದೇಶಾದ್ಯಂತ ವ್ಯಾಪಕ ಮಳೆಯಾಗುತ್ತದೆ. ಹೀಗಾಗಿ ಈ ಪಶ್ಚಿಮಘಟ್ಟ ಸಂರಕ್ಷಣೆಯ ಹೊಣೆ ಕೇಂದ್ರದ್ದು ಆಗಿದೆ. ಹಾಗಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ಒತ್ತುವರಿ ತೆರವಿನ ಬಗ್ಗೆ ಸ್ಪಷ್ಟೀಕರಣ:

ಒತ್ತುವರಿ ತೆರವಿನ ಬಗ್ಗೆ ತಾವು ನೀಡಿರುವ ಟಿಪ್ಪಣಿಗಳು ಸ್ಪಷ್ಟವಾಗಿವೆ. 2015ರ ನಂತರದ ಒತ್ತುವರಿ ಮಾತ್ರ ತೆರವು ಮಾಡಲು ಸೂಚಿಸಲಾಗಿದೆ. ಜೊತೆಗೆ 2015ರ ಸರ್ಕಾರದ ಆದೇಶ ಮತ್ತು ನಡವಳಿಯಂತೆ 3 ಎಕರೆಗಿಂತ ಮೇಲ್ಪಟ್ಟ ದೊಡ್ಡ ಒತ್ತುವರಿ ತೆರವು ಮಾಡಲಾಗುತ್ತಿದ್ದು, ಬಡ ರೈತರ ಒತ್ತುವರಿಯನ್ನು (ಪಟ್ಟಾಭೂಮಿ ಮತ್ತು ಒತ್ತುವರಿ ಸೇರಿ 3 ಎಕರೆ) ತೆರವು ಮಾಡಿಸುವುದಿಲ್ಲ ಎಂದು ಹಲವು ಬಾರಿ ಸ್ಪಷ್ಟಪಡಿಸಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಿರೂರು, ವಯನಾಡ್ ಭೂಕುಸಿತದಿಂದ ಎಚ್ಚೆತ್ತ ಸರ್ಕಾರ, ಪಶ್ಚಿಮ ಘಟ್ಟದಲ್ಲಿನ ಅನಧಿಕೃತ ಹೋಮ್ ಸ್ಟೇ‌, ರೆಸಾರ್ಟ್ ತೆರವಿಗೆ ಸೂಚನೆ

ಇಂದು ನಡೆದ ಸಭೆಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಡಾ.ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೋಳಿ, ಮಧು ಬಂಗಾರಪ್ಪ, ಮಾಂಕಾಳ ವೈದ್ಯ, ವಿಧಾನಪರಿಷತ್ ಉಪ ಸಭಾಪತಿ ಪ್ರಾಣೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಶಾಸಕರಾದ ಆರಗ ಜ್ಞಾನೇಂದ್ರ, ನಯನ ಮೋಟಮ್ಮ, ರಾಜೇಗೌಡ, ಹರೀಶ್ ಪೂಂಜಾ, ಸಂಸದರಾದ ಶ್ರೇಯಸ್ ಪಟೇಲ್ ಮತ್ತಿತರರು ಪಾಲ್ಗೊಂಡಿದ್ದರು.

ವರದಿ: ಈರಣ್ಣ ಬಸವ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:01 pm, Thu, 19 September 24

ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ