
ಕರ್ನಾಟಕ ಸರ್ಕಾರ ಸ್ವಾಮ್ಯದ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (KBJNL) ಖಾಲಿ ಇರುವ ಲೀಗಲ್ ಆಫೀಸರ್ ಹುದ್ದೆಯ ಭರ್ತಿಗೆ ನೇರ ಸಂದರ್ಶನ ಕರೆದಿದೆ. ಸಂಸ್ಥೆಯಲ್ಲಿ ಲೀಗಲ್ ಮ್ಯಾಟರ್ಸ್, ಅದರಲ್ಲೂ ಮುಖ್ಯವಾಗಿ ಭೂಸ್ವಾಧೀನ ಪ್ರಕರಣಗಳನ್ನು ನಿರ್ವಹಿಸಲು ಸೂಕ್ತ ಅರ್ಹತೆ ಮತ್ತು ಅನುಭವ ಹೊಂದಿರುವ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಿದೆ. ಆಯ್ಕೆಯಾಗುವ ಅಭ್ಯರ್ಥಿಯು ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿ ಕಾರ್ಯನಿರ್ವಹಿಸಬೇಕಿರುತ್ತದೆ. ಲೀಗಲ್ ಆಫೀಸರ್ ವಿಭಾಗದಲ್ಲಿ ಒಟ್ಟು ಒಂದು (01) ಹುದ್ದೆ ಖಾಲಿ ಇದ್ದು, ಅರ್ಹ ಕಾನೂನು ಪದವೀಧರರು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ (Law Graduate) ಪಡೆದಿರಬೇಕು ಹಾಗೂ ಪದವಿಯ ನಂತರ 7 ರಿಂದ 10 ವರ್ಷಗಳ ಸಂಬಂಧಿತ ಕೆಲಸದ ಅನುಭವ ಹೊಂದಿರಬೇಕು. ಅರ್ಹತೆ ಪಡೆಯಲು ಅಭ್ಯರ್ಥಿಯ ಗರಿಷ್ಠ ವಯಸ್ಸು 38 ವರ್ಷ ಮೀರಬಾರದು. ಅಲ್ಲದೇ ಕನ್ನಡದಲ್ಲಿ ಮಾತನಾಡಲು, ಓದಲು ಮತ್ತು ಬರೆಯಲು ಕಡ್ಡಾಯವಾಗಿ ತಿಳಿದಿರಬೇಕು ಹಾಗೂ ಇಂಗ್ಲಿಷ್ ಭಾಷೆ ಮತ್ತು ಕಂಪ್ಯೂಟರ್ ಬಳಕೆಯ ಜ್ಞಾನ ಅತ್ಯಗತ್ಯ. ಇದರೊಂದಿಗೆ LLM ಅಥವಾ CS, CA, CMA ನಂತಹ ವೃತ್ತಿಪರ ಕೋರ್ಸ್ ಮಾಡಿದ ಅಭ್ಯರ್ಥಿಗಳಿಗೆ ಆಯ್ಕೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು.
ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ
ಆಯ್ಕೆಯಾದ ಅಭ್ಯರ್ಥಿಗೆ ಸೂಕ್ತ ವೇತನವನ್ನು ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ದಿನಾಂಕ 29.08.2026 ರಂದು ಬೆಳಿಗ್ಗೆ 11:00 ಗಂಟೆಗೆ ಕೃಷ್ಣ ಭಾಗ್ಯ ಜಲ ನಿಗಮ, ಲಿಜನ್ ಆಫೀಸ್, PWD ಅನೆಕ್ಸ್ ಕಟ್ಟಡ, 3ನೇ ಮಹಡಿ, ಕೆ.ಆರ್. ಸರ್ಕಲ್, ಬೆಂಗಳೂರು – 560001 ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ kbjnl.karnataka.gov.in ಗೆ ಭೇಟಿ ನೀಡಬಹುದು.
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ