ದೈಹಿಕ ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ತರಬೇತಿ, ವೈಮಾನಿಕ ತರಬೇತಿ ಶಾಲೆ ಪುನಾರಂಭ: ನಾರಾಯಣಗೌಡ ಮಾಹಿತಿ

ಬೆಂಗಳೂರು: ದೈಹಿಕ ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ತರಬೇತಿ ನೀಡುವ ಕುರಿತು ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ ಇಂದು (ಸಪ್ಟೆಂಬರ್ 8) ವಿಕಾಸಸೌಧದಲ್ಲಿ ಹೇಳಿಕೆ ನೀಡಿದ್ದಾರೆ. 1,666 ದೈಹಿಕ ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ತರಬೇತಿ ನೀಡಲಾಗುವುದು. ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ವೈಜ್ಞಾನಿಕ ತರಬೇತಿ ನೀಡುತ್ತೇವೆ ಎಂದು ಕ್ರೀಡಾ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ವಿಕಾಸಸೌಧದಲ್ಲಿ ನಾರಾಯಣಗೌಡ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಯುವ ಸಬಲೀಕರಣ, ಕ್ರೀಡಾ ಸಚಿವ ನಾರಾಯಣಗೌಡ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ. ಶೀಘ್ರದಲ್ಲೇ […]

ದೈಹಿಕ ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ತರಬೇತಿ, ವೈಮಾನಿಕ ತರಬೇತಿ ಶಾಲೆ ಪುನಾರಂಭ: ನಾರಾಯಣಗೌಡ ಮಾಹಿತಿ
ಸಚಿವ ಕೆ.ಸಿ. ನಾರಾಯಣ ಗೌಡ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on: Sep 08, 2021 | 5:40 PM

ಬೆಂಗಳೂರು: ದೈಹಿಕ ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ತರಬೇತಿ ನೀಡುವ ಕುರಿತು ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ ಇಂದು (ಸಪ್ಟೆಂಬರ್ 8) ವಿಕಾಸಸೌಧದಲ್ಲಿ ಹೇಳಿಕೆ ನೀಡಿದ್ದಾರೆ. 1,666 ದೈಹಿಕ ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ತರಬೇತಿ ನೀಡಲಾಗುವುದು. ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ವೈಜ್ಞಾನಿಕ ತರಬೇತಿ ನೀಡುತ್ತೇವೆ ಎಂದು ಕ್ರೀಡಾ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ವಿಕಾಸಸೌಧದಲ್ಲಿ ನಾರಾಯಣಗೌಡ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಯುವ ಸಬಲೀಕರಣ, ಕ್ರೀಡಾ ಸಚಿವ ನಾರಾಯಣಗೌಡ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ.

ಶೀಘ್ರದಲ್ಲೇ ತರಬೇತಿ ಆರಂಭಿಸಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ತಳಮಟ್ಟದಲ್ಲೇ ಕ್ರೀಡಾಪಟುಗಳನ್ನು ಗುರುತಿಸಿ ತರಬೇತಿ ಕೊಡುತ್ತೇವೆ. ತಿಂಗಳಾಂತ್ಯದಲ್ಲಿ ಕ್ರೀಡಾ ಇಲಾಖೆಯಿಂದ ತರಬೇತಿ ಶುರು ಮಾಡುತ್ತೇವೆ ಎಂದು ನಾರಾಯಣಗೌಡ ಮಾಹಿತಿ ನೀಡಿದ್ದಾರೆ.

ಅಧಿವೇಶನ ಮುಗಿದ ಮರುದಿನವೇ ವೈಮಾನಿಕ ತರಬೇತಿ ಪುನಾರಂಭ ಮಾಡಲಾಗುತ್ತದೆ. ಜಕ್ಕೂರು ವೈಮಾನಿಕ ತರಬೇತಿ ಶಾಲೆ ಪುನಾರಂಭವಾಗುತ್ತೆ. ಸಿಎಂ ಬಸವರಾಜ ಬೊಮ್ಮಾಯಿ ಆಹ್ವಾನಿಸಿ ಉದ್ಘಾಟಿಸಲು ತೀರ್ಮಾನ ಮಾಡಿದ್ದೇವೆ ಎಂದು ಕೂಡ ನಾರಾಯಣಗೌಡ ಹೇಳಿದ್ದಾರೆ. ಹಳೇ ವಿದ್ಯಾರ್ಥಿಗಳಿಗೆ ಹಿಂದಿನ ಶುಲ್ಕ ದರದಲ್ಲೇ ತರಬೇತಿ ನೀಡುತ್ತೇವೆ. ಹೊಸದಾಗಿ ಪ್ರವೇಶ ಪಡೆಯುವವರಿಗೆ ಪರಿಷ್ಕೃತ ದರ ಹೇಳಲಾಗುವುದು. ಈ ಬಗ್ಗೆ ಕೂಡ ಕ್ರೀಡಾ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಖೇಲೋ ಇಂಡಿಯಾ ಕೇಂದ್ರ ಪ್ರಾರಂಭ ವಿಚಾರವಾಗಿ ಮಾತನಾಡಿದ ಅವರು, ಹಣ ಬಿಡುಗಡೆಯಾದರೂ ಕೇಂದ್ರ ಆರಂಭವಾಗದ ಹಿನ್ನೆಲೆ ಅಧಿಕಾರಿಗಳ ಕಾರ್ಯವೈಖರಿಗೆ ನಾರಾಯಣಗೌಡ ಬೇಸರ ವ್ಯಕ್ತಪಡಿಸಿದ್ದಾರೆ. ಕ್ರೀಡಾ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬೇಸರ ಹೊರಹಾಕಿದ್ದಾರೆ. ಇದುವರೆಗೂ ಯಾವುದೇ ಪ್ರಕ್ರಿಯೆಯೂ ಆರಂಭವಾಗಿಲ್ಲ. ಕೇವಲ ಘೋಷಣೆಗಷ್ಟೇ ಯೋಜನೆ ಸೀಮಿತವಾದರೆ ಹೇಗೆ? ತಕ್ಷಣ ಕೆಲಸ ಆರಂಭಿಸದಿದ್ರೆ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ನಾರಾಯಣಗೌಡ ಎಚ್ಚರಿಕೆ ಕೊಟ್ಟಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, 1 ವಾರದೊಳಗೆ ಆರಂಭಿಸುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಪ್ರತಿ ಶಾಲೆಯಲ್ಲೂ ಕನಿಷ್ಠ ಒಂದು ಗುಂಟೆಯಾದರೂ ಆಟದ ಮೈದಾನ ಇರಬೇಕು: ಕ್ರೀಡಾ ಸಚಿವ ನಾರಾಯಣಗೌಡ

ಇದನ್ನೂ ಓದಿ: ಪ್ಯಾರಾ ಓಲಂಪಿಕ್​ನಲ್ಲಿ ಚಿನ್ನ ಗೆದ್ದರೆ 5 ಕೋಟಿ ರೂಪಾಯಿ ಬಹುಮಾನ: ಸಚಿವ ಡಾ. ನಾರಾಯಣಗೌಡ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್