ಬೆಂಗಳೂರು: ದೈಹಿಕ ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ತರಬೇತಿ ನೀಡುವ ಕುರಿತು ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ ಇಂದು (ಸಪ್ಟೆಂಬರ್ 8) ವಿಕಾಸಸೌಧದಲ್ಲಿ ಹೇಳಿಕೆ ನೀಡಿದ್ದಾರೆ. 1,666 ದೈಹಿಕ ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ತರಬೇತಿ ನೀಡಲಾಗುವುದು. ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ವೈಜ್ಞಾನಿಕ ತರಬೇತಿ ನೀಡುತ್ತೇವೆ ಎಂದು ಕ್ರೀಡಾ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ವಿಕಾಸಸೌಧದಲ್ಲಿ ನಾರಾಯಣಗೌಡ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಯುವ ಸಬಲೀಕರಣ, ಕ್ರೀಡಾ ಸಚಿವ ನಾರಾಯಣಗೌಡ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ.
ಶೀಘ್ರದಲ್ಲೇ ತರಬೇತಿ ಆರಂಭಿಸಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ತಳಮಟ್ಟದಲ್ಲೇ ಕ್ರೀಡಾಪಟುಗಳನ್ನು ಗುರುತಿಸಿ ತರಬೇತಿ ಕೊಡುತ್ತೇವೆ. ತಿಂಗಳಾಂತ್ಯದಲ್ಲಿ ಕ್ರೀಡಾ ಇಲಾಖೆಯಿಂದ ತರಬೇತಿ ಶುರು ಮಾಡುತ್ತೇವೆ ಎಂದು ನಾರಾಯಣಗೌಡ ಮಾಹಿತಿ ನೀಡಿದ್ದಾರೆ.
ಅಧಿವೇಶನ ಮುಗಿದ ಮರುದಿನವೇ ವೈಮಾನಿಕ ತರಬೇತಿ ಪುನಾರಂಭ ಮಾಡಲಾಗುತ್ತದೆ. ಜಕ್ಕೂರು ವೈಮಾನಿಕ ತರಬೇತಿ ಶಾಲೆ ಪುನಾರಂಭವಾಗುತ್ತೆ. ಸಿಎಂ ಬಸವರಾಜ ಬೊಮ್ಮಾಯಿ ಆಹ್ವಾನಿಸಿ ಉದ್ಘಾಟಿಸಲು ತೀರ್ಮಾನ ಮಾಡಿದ್ದೇವೆ ಎಂದು ಕೂಡ ನಾರಾಯಣಗೌಡ ಹೇಳಿದ್ದಾರೆ. ಹಳೇ ವಿದ್ಯಾರ್ಥಿಗಳಿಗೆ ಹಿಂದಿನ ಶುಲ್ಕ ದರದಲ್ಲೇ ತರಬೇತಿ ನೀಡುತ್ತೇವೆ. ಹೊಸದಾಗಿ ಪ್ರವೇಶ ಪಡೆಯುವವರಿಗೆ ಪರಿಷ್ಕೃತ ದರ ಹೇಳಲಾಗುವುದು. ಈ ಬಗ್ಗೆ ಕೂಡ ಕ್ರೀಡಾ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ಖೇಲೋ ಇಂಡಿಯಾ ಕೇಂದ್ರ ಪ್ರಾರಂಭ ವಿಚಾರವಾಗಿ ಮಾತನಾಡಿದ ಅವರು, ಹಣ ಬಿಡುಗಡೆಯಾದರೂ ಕೇಂದ್ರ ಆರಂಭವಾಗದ ಹಿನ್ನೆಲೆ ಅಧಿಕಾರಿಗಳ ಕಾರ್ಯವೈಖರಿಗೆ ನಾರಾಯಣಗೌಡ ಬೇಸರ ವ್ಯಕ್ತಪಡಿಸಿದ್ದಾರೆ. ಕ್ರೀಡಾ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬೇಸರ ಹೊರಹಾಕಿದ್ದಾರೆ. ಇದುವರೆಗೂ ಯಾವುದೇ ಪ್ರಕ್ರಿಯೆಯೂ ಆರಂಭವಾಗಿಲ್ಲ. ಕೇವಲ ಘೋಷಣೆಗಷ್ಟೇ ಯೋಜನೆ ಸೀಮಿತವಾದರೆ ಹೇಗೆ? ತಕ್ಷಣ ಕೆಲಸ ಆರಂಭಿಸದಿದ್ರೆ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ನಾರಾಯಣಗೌಡ ಎಚ್ಚರಿಕೆ ಕೊಟ್ಟಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, 1 ವಾರದೊಳಗೆ ಆರಂಭಿಸುವುದಾಗಿ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: ಪ್ರತಿ ಶಾಲೆಯಲ್ಲೂ ಕನಿಷ್ಠ ಒಂದು ಗುಂಟೆಯಾದರೂ ಆಟದ ಮೈದಾನ ಇರಬೇಕು: ಕ್ರೀಡಾ ಸಚಿವ ನಾರಾಯಣಗೌಡ
ಇದನ್ನೂ ಓದಿ: ಪ್ಯಾರಾ ಓಲಂಪಿಕ್ನಲ್ಲಿ ಚಿನ್ನ ಗೆದ್ದರೆ 5 ಕೋಟಿ ರೂಪಾಯಿ ಬಹುಮಾನ: ಸಚಿವ ಡಾ. ನಾರಾಯಣಗೌಡ