KCET Results 2024: ಸಿಇಟಿ ಫಲಿತಾಂಶ ಪ್ರಕಟ ಮಾಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024ರ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಶನಿವಾರ ಪ್ರಕಟಿಸಿದೆ. ಹರ್ಷಾ ಕಾರ್ತಿಕೇಯ ಮೊದಲ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಏಪ್ರಿಲ್​ನಲ್ಲಿ ಸಿಇಟಿ ಪರೀಕ್ಷೆ ನಡೆದಿದ್ದು, 3,10,314 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ karresults.nic.in ನಲ್ಲಿ ಫಲಿತಾಂಶ ಲಭ್ಯವಿದೆ.

KCET Results 2024: ಸಿಇಟಿ ಫಲಿತಾಂಶ ಪ್ರಕಟ ಮಾಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಸಿಇಟಿ ಫಲಿತಾಂಶ ಪ್ರಕಟ ಮಾಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jun 01, 2024 | 7:10 PM

ಬೆಂಗಳೂರು, ಜೂನ್​ 1: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024ರ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಫಲಿತಾಂಶವನ್ನು ಶನಿವಾರ ಪ್ರಕಟಿಸಿದೆ. ಹರ್ಷಾ ಕಾರ್ತಿಕೇಯ ಮೊದಲ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಫಲಿತಾಂಶವು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ karresults.nic.in ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ವಿಷಯವಾರು ಅಂಕಗಳ ವಿವರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.

ಏಪ್ರಿಲ್​ನಲ್ಲಿ ಸಿಇಟಿ ಪರೀಕ್ಷೆ ನಡೆದಿದ್ದು, 3,10,314 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಕುರಿತಾಗಿ ಟ್ವೀಟ್​ ಮಾಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET-2024)ಯ ಫಲಿತಾಂಶವನ್ನು ಪ್ರಕಟಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಟ್ವೀಟ್​ 

ಫಲಿತಾಂಶವು ಪ್ರಾಧಿಕಾರದ ವೆಬ್‌ಸೈಟ್​ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ವಿಷಯವಾರು ಅಂಕಗಳ ವಿವರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.

ಫಲಿತಾಂಶ ನೋಡುವುದು ಹೇಗೆ?

ಹಂತ 1: kea.kar.nic.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ

ಹಂತ 2: ವೆಬ್‌ಸೈಟ್‌ನಲ್ಲಿ ಫಲಿತಾಂಶ ಆಯ್ಕೆ ಲಿಂಕ್ ಅನ್ನು ಕ್ಲಿಕ್ ಮಾಡಿ

ಹಂತ 3: ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕದಂತಹ ನಿಮ್ಮ ಮಾಹಿತಿ ನಮೂದಿಸಿ

ಹಂತ 4: ಫಲಿತಾಂಶವನ್ನು ವೀಕ್ಷಿಸಿ ಮತ್ತು ಡೌನ್‌ಲೋಡ್ ಮಾಡಿ

ಇದನ್ನೂ ಓದಿ: CET Result 2024: ಕರ್ನಾಟಕ ಸಿಇಟಿ ಫಲಿತಾಂಶ ಯಾವಾಗ? ಸ್ಪಷ್ಟನೆ ನೀಡಿದ ಕೆಇಎ

ಪರೀಕ್ಷೆಯಲ್ಲಿ ಪಠ್ಯಕ್ರಮದ ಹೊರತಾಗಿ ಪ್ರಶ್ನೆಗಳು ಬಂದಿರುವುದಾಗಿ ದೂರು ಬಂದ ಹಿನ್ನಲೆ ಸರ್ಕಾರದ ನಿರ್ದೇಶನದಂತೆ ವಿಷಯ ಪರಿಣಿತರ ವರದಿಯನ್ನಾಧರಿಸಿ ಪ್ರಶ್ನೆಗಳನ್ನು ಕೈಬಿಟ್ಟು ಮೌಲ್ಯಮಾಪನ ಕಾರ್ಯ ಮಾಡಲಾಗಿದೆ.

ಭೌತಶಾಸ್ತ್ರ 09, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಪ್ರಶ್ನೆಗಳನ್ನು ಬಿಟ್ಟು ಮೌಲ್ಯಮಾಪನ ಮಾಡಿ ಫಲಿತಾಂಶ ಪ್ರಕಟ ಮಾಡಲಾಗಿದೆ. ಗಣಿತ 01 ಹಾಗೂ ಭೌತಶಾಸ್ತ್ರ 01 ಸೇರಿ ಎರಡೂ ವಿಷಯಗಳಲ್ಲಿ ತಲಾ ಒಂದೊಂದು ಅಂಕಗಳನ್ನು ಕೃಪಾಂಕ ನೀಡಲಾಗಿದೆ. ಎಲ್ಲ ವಿಷಯಗಳಲ್ಲಿ ಪರಿಷ್ಕೃತ ಸರಿ ಉತ್ತರಗಳನ್ನು ಆಧರಿಸಿ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.

ಇದನ್ನೂ ಓದಿ: ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ಎಡವಟ್ಟು, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಲೆದಂಡ

ಪರಿಷ್ಕೃತ ಸರಿ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿರುವ ದ್ವಿತೀಯ ಪಿಯು ವಾರ್ಷಿಕ ಮೊದಲ ಎರಡು ಪರೀಕ್ಷೆಗಳ ಪೈಕಿ ಅತಿ ಹೆಚ್ಚು ಅಂಕಗಳನ್ನು ಗಣನೆಗೆ ತೆಗೆದುಕೊಂಡು ಮೆರಿಟ್ ಪಟ್ಟಿ ಪ್ರಕಟಿಸಿರುವುದಾಗಿ ಕೆಇಎ ಮಾಹಿತಿ ಹೊರಡಿಸಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:44 pm, Sat, 1 June 24

ತಾಜಾ ಸುದ್ದಿ
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ