AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಪಿಯು ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ: ಇಲ್ಲಿದೆ ಹುದ್ದೆಗಳ ವಿವರ

ಕರ್ನಾಟಕ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಒಟ್ಟು 814 ಪಿಯು ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಸೂಚನೆ ಹೊರಡಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಹಾಗಾದ್ರೆ, ವಿದ್ಯಾರ್ಹತೆ, ವಯೋಮಿತಿ, ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಕೊನೆ ದಿನಾಂಕ ಸೇರಿದಂತೆ ಇತರೆ ಮಾಹಿತಿ ಈ ಕೆಳಗಿನಂತಿದೆ.

ಕರ್ನಾಟಕ ಪಿಯು ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ: ಇಲ್ಲಿದೆ ಹುದ್ದೆಗಳ ವಿವರ
Recruitment
ರಮೇಶ್ ಬಿ. ಜವಳಗೇರಾ
|

Updated on: Nov 27, 2026 | 11:13 PM

Share

ಬೆಂಗಳೂರು, ನವೆಂಬರ್ 27: ಕರ್ನಾಟಕ ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ವಿವಿಧ ವಿಷಯಗಳ ಒಟ್ಟು 814 ಉಪನ್ಯಾಸಕರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಸೂಚನೆ ಹೊರಡಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಡಿಸೆಂಬರ್ 25 ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ಡಿಸೆಂಬರ್ 26 ಕೊನೆ ದಿನ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಒಟ್ಟು ಉಪನ್ಯಾಸಕರ ಹುದ್ದೆಗಳಲ್ಲಿ ಉಳಿಕೆ ಮೂಲ ವೃಂದದ 778 ಹಾಗೂ ಕಲ್ಯಾಣ ಕರ್ನಾಟಕ ವೃಂದದ 36 ಹುದ್ದೆಗಳು ಸೇರಿವೆ. ಸ್ನಾತಕೋತ್ತರ ಪದವಿ ಜೊತೆಗೆ ಬಿ.ಎಡ್ ಮಾಡಿರುವವರು ಅರ್ಜಿ ಸಲ್ಲಿಸಲು ಅರ್ಹರು. ಮಾರ್ಚ್ ತಿಂಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಉದ್ಯೋಗ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: FDA , SDA ನೇಮಕಾತಿ ಅರ್ಜಿ ಸಲ್ಲಿಕೆ ಗಡುವು ವಿಸ್ತರಣೆ

ಹುದ್ದೆಗಳ ವಿವರ:   ಕನ್ನಡ ವಿಷಯದಲ್ಲಿ 89 ಹುದ್ದೆ ಭರ್ತಿಗೆ ಅರ್ಜಿ ಕರೆಯಲಾಗಿದೆ. ಇಂಗ್ಲಿಷ್-145, ಇತಿಹಾಸ-50, ಅರ್ಥಶಾಸ್ತ್ರ-90, ರಾಜ್ಯಶಾಸ್ತ್ರ-25, ಸಮಾಜಶಾಸ್ತ್ರ-25, ಭೂಗೋಳ ಶಾಸ್ತ್ರ-10, ವಾಣಿಜ್ಯ ಶಾಸ್ತ್ರ-150, ಭೌತಶಾಸ್ತ್ರ-30, ರಸಾಯನಶಾಸ್ತ್ರ-30, ಗಣಿತ-30, ಜೀವಶಾಸ್ತ್ರ-30, ಕಂಪ್ಯೂಟರ್ ಸೈನ್ಸ್-110. ಹೀಗೆ ಹಲವು ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಕರೆದಿದ್ದು, ಅರ್ಹರು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

ಸೇವಾನಿರತ: ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ನೇರ ನೇಮಕಾತಿ ಕೋಟಾದ ಶೇ. 75 ರಷ್ಟು ಹುದ್ದೆಗಳಲ್ಲಿ ಶೇ. 74 ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಹಾಗೂ ಶೇ. 01 ರಷ್ಟು ಹುದ್ದೆಗಳನ್ನು ಸದರಿ ಇಲಾಖೆಯ ಯಾವುದೇ ಗ್ರೂಪ್-ಸಿ ವೃಂದದಲ್ಲಿನ ಸೇವಾನಿರತ ಸಿಬ್ಬಂದಿಗಳು ಖಾಯಂ ಪೂರ್ವಾವಧಿಯನ್ನು ತೃಪ್ತಿಕರವಾಗಿ ಪೂರೈಸಿರುತ್ತಾರೆಂದು ಸಕ್ಷಮ ಪ್ರಾಧಿಕಾರದಿಂದ ಘೋಷಿಸಲ್ಪಟ್ಟಿರುವವರಿಗೆ ಮೀಸಲಿಟ್ಟಿದ್ದು, ಅರ್ಹ ಸೇವಾನಿರತ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದರೆ ಸದರಿ ಹುದ್ದೆಯನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು.

ವಯೋಮಿತಿ: ಕರ್ನಾಟ ಕಸಾಮಾನ್ಯ ಸೇವೆಗಳು (ಪದವಿ ಪೂರ್ವ ಶಿಕ್ಷಣ) (ನೇಮಕಾತಿ) ನಿಯಮಗಳು, 2013 ರಲ್ಲಿ ನಿರ್ದಿಷ್ಟ ಪಡಿಸಿರುವಂತೆ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 21 ವರ್ಷಗಳು ತುಂಬಿರತಕ್ಕದ್ದು ಹಾಗೂ ಕೆಳಕಂಡಂತೆ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.

  • ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ- 40 ವರ್ಷಗಳು.
  • ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ-43 ವರ್ಷಗಳು.
  • ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 45 ವರ್ಷಗಳು.

ಅರ್ಜಿ ಶುಲ್ಕ ವಿವರಗಳು: ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗ ಅಭ್ಯರ್ಥಿಗಳಿಗೆ-750 ರೂ., ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 /ಮಾಜಿ ಸೈನಿಕ / ತೃತೀಯ ಲಿಂಗದ ಅಭ್ಯರ್ಥಿಗಳಿಗೆ 500 ರೂ. ವಿಶೇಷ ಚೇತನ ಅಭ್ಯರ್ಥಿಗಳಿಗೆ 250 ರೂಪಾಯಿ ನಿಗದಿಪಡಿಸಲಾಗಿದ್ದು, ಆನ್‌ಲೈನ್ ಮೂಲಕ ಮಾತ್ರ ಶುಲ್ಕ ಪಾವತಿಸಬೇಕು. ಇನ್ನು ಪಾವತಿಸಿದ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ. ಹೀಗಾಗಿ ಶುಲ್ಕ ಪಾವತಿಸುವ ಮೊದಲು ಅಗತ್ಯವಿರುವ ಎಲ್ಲಾ ಶೈಕ್ಷ ಕ ಅರ್ಹತೆ, ಮೀಸಲಾತಿ, ವಯೋಮಿತಿ ಹಾಗೂ ಇತರೆ ಎಲ್ಲಾ ಅರ್ಹತಾ ಷರತ್ತುಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿಕೊಂಡು ಶುಲ್ಕವನ್ನು ಪಾವತಿ ಮಾಡತಕ್ಕದ್ದು.

ವೇತನ ಶ್ರೇಣಿ: 2024ರ ಪರಿಷ್ಕೃತ ವೇತನ ಶ್ರೇಣಿ 69250-1650-74200-1900-85600-2300-99400-2700-115600-3100-134200. ಇನ್ನು ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್.ಪಿ.ಎಸ್) ಅನ್ವಯಿಸುತ್ತದೆ ಹಾಗೂ ಕೆಜಿಐಡಿ ಸೌಲಭ್ಯ ಇರುತ್ತದೆ.

ಇನ್ನು ಈ ನೇಮಕಾತಿ ವಿವದ ಬಗ್ಗೆ ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್​ಸೈಟ್​​ಗೆ ಭೇಟಿ ನೀಡಿ ನೋಡಿಕೊಳ್ಳಬಹುದಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More