AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BWSSB ನೇಮಕಾತಿ : 210 ನೀರು ಸರಬರಾಜು ನಿರ್ವಾಹಕರು ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ KEA ಸಿಹಿ ಸುದ್ದಿ ನೀಡಿದೆ. ಪುರಸಭೆ ಆಡಳಿತ ನಿರ್ದೇಶನಾಲಯ ಹಾಗೂ BWSSB ಯಲ್ಲಿ ಖಾಲಿ ಇರುವ ಒಟ್ಟು 210 ಗ್ರೂಪ್-ಸಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. 10ನೇ ತರಗತಿ ಮತ್ತು ITI ಅರ್ಹತೆಯಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 30ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವೇತನ ಶ್ರೇಣಿ, ವಯೋಮಿತಿ ಸಡಿಲಿಕೆ, ಆಯ್ಕೆ ಪ್ರಕ್ರಿಯೆ ಮತ್ತು ಪರೀಕ್ಷಾ ವಿವರಗಳು ಲಭ್ಯವಿವೆ. ಇದೊಂದು ಉತ್ತಮ ಅವಕಾಶ.

BWSSB ನೇಮಕಾತಿ : 210 ನೀರು ಸರಬರಾಜು ನಿರ್ವಾಹಕರು ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಸರ್ಕಾರಿ ಉದ್ಯೋಗ
ಅಕ್ಷತಾ ವರ್ಕಾಡಿ
|

Updated on:Sep 29, 2026 | 4:48 PM

Share

ಕರ್ನಾಟಕ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಉದ್ಯೋಗಾಕಾಂಕ್ಷಿಗಳಿಗೆ ಕೆಇಎ (KEA) ಸಿಹಿ ಸುದ್ದಿ ನೀಡಿದೆ. ಪುರಸಭೆ ಆಡಳಿತ ನಿರ್ದೇಶನಾಲಯದ ಅಡಿಯಲ್ಲಿರುವ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ (BWSSB) ಖಾಲಿ ಇರುವ ಒಟ್ಟು 210 ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ತಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಇದೊಂದು ಅತ್ಯುತ್ತಮ ಅವಕಾಶವಾಗಿದೆ.

ಹುದ್ದೆಗಳ ವಿವರ ಮತ್ತು ವೇತನ ಶ್ರೇಣಿ:

ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 210 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ವಿವಿಧ ಹುದ್ದೆಗಳಿಗೆ ವಿಭಿನ್ನ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ಇದರಲ್ಲಿ 80 ನೀರು ಸರಬರಾಜು ನಿರ್ವಾಹಕರು ಹಾಗೂ 3 ಎಲೆಕ್ಟ್ರಿಷಿಯನ್ ಗ್ರೇಡ್-1 ಹುದ್ದೆಗಳಿಗೆ ಮಾಸಿಕ 37,500 ರಿಂದ 76,100ರೂ. ವರೆಗೆ ವೇತನ ಸಿಗಲಿದೆ. ಅದೇ ರೀತಿ 122 ಸಹಾಯಕ ನೀರು ಸರಬರಾಜು ನಿರ್ವಾಹಕರು ಹಾಗೂ 5 ಎಲೆಕ್ಟ್ರಿಷಿಯನ್ ಗ್ರೇಡ್-2 ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 34,100 ರಿಂದ 67,600ರೂ. ವರೆಗೆ ವೇತನ ದೊರೆಯಲಿದೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ 10ನೇ ತರಗತಿ (SSLC) ಅಥವಾ ಸಂಬಂಧಿತ ಟ್ರೇಡ್‌ನಲ್ಲಿ ITI ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನಿಯಮಾವಳಿಗಳ ಪ್ರಕಾರ ವಯೋಮಿತಿ ಸಡಿಲಿಕೆ ಇದ್ದು, ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್‌ಸಿ, ಎಸ್‌ಟಿ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ ವಿನಾಯಿತಿ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ ಮತ್ತು ಪರೀಕ್ಷಾ ವಿವರ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆಯು ಎರಡು ಪ್ರಮುಖ ಪತ್ರಿಕೆಗಳನ್ನು ಒಳಗೊಂಡಿರಲಿದ್ದು, ಪತ್ರಿಕೆ-1 ರಲ್ಲಿ ಕನ್ನಡ ಭಾಷಾ ಪರೀಕ್ಷೆ ಹಾಗೂ ಪತ್ರಿಕೆ-2 ರಲ್ಲಿ ವಿಷಯ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯನ್ನು 2026ರ ನವೆಂಬರ್ ತಿಂಗಳಿನಲ್ಲಿ ನಡೆಸಲು ಕೆಇಎ ಯೋಜನೆ ರೂಪಿಸಿದೆ.

ಇದನ್ನೂ ಓದಿ: ಎಸ್‌ಬಿಐ ನೇಮಕಾತಿ: ವಾರ್ಷಿಕ 97 ಲಕ್ಷ ರೂ.ವರೆಗೆ ವೇತನ; 207 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕದ ವಿವರಗಳು:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ವರ್ಗಕ್ಕೆ ಅನುಗುಣವಾಗಿ ಶುಲ್ಕ ಪಾವತಿಸಬೇಕಾಗುತ್ತದೆ. ಸಾಮಾನ್ಯ ಅರ್ಹತೆ ಹಾಗೂ ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 1500 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಇನ್ನು ಎಸ್‌ಸಿ, ಎಸ್‌ಟಿ, ಪ್ರವರ್ಗ-1, ಮಾಜಿ ಸೈನಿಕರು, ತೃತೀಯ ಲಿಂಗಿ ಹಾಗೂ ವಿಶೇಷ ಪ್ರೋತ್ಸಾಹಕ ಅಭ್ಯರ್ಥಿಗಳು 500ರೂ. ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ ಮತ್ತು ಪ್ರಮುಖ ದಿನಾಂಕಗಳು:

ಆಸಕ್ತ ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್‌ಸೈಟ್ (cetonline.karnataka.gov.in) ಗೆ ಭೇಟಿ ನೀಡಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಭರ್ತಿ ಮಾಡುವ ಮುನ್ನ ಅಗತ್ಯ ದಾಖಲೆಗಳಾದ ಐಡಿ ಪ್ರೂಫ್, ಶೈಕ್ಷಣಿಕ ಪ್ರಮಾಣಪತ್ರಗಳು ಹಾಗೂ ಇತ್ತೀಚಿನ ಛಾಯಾಚಿತ್ರವನ್ನು ಸಿದ್ಧವಿಟ್ಟುಕೊಳ್ಳುವುದು ಸೂಕ್ತ. ಆನ್‌ಲೈನ್ ಅರ್ಜಿ ಸಲ್ಲಿಕೆ ಈಗಾಗಲೇ ಸೆಪ್ಟೆಂಬರ್ 16 ರಿಂದ ಆರಂಭವಾಗಿದ್ದು, ಸೆಪ್ಟೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿಸಲು ಅಕ್ಟೋಬರ್ 1 ರವರೆಗೆ ಕಾಲಾವಕಾಶ ನೀಡಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:44 pm, Tue, 29 September 26

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More