KEA Recruitment 2026: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!

ಕರ್ನಾಟಕ ಕಂದಾಯ ಇಲಾಖೆಯ ಗ್ರೂಪ್-ಸಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿ ದಿನಾಂಕವನ್ನು KEA ವಿಸ್ತರಿಸಿದೆ. ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ತಕ್ಷಣವೇ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಪರಿಷ್ಕೃತ ಕೊನೆಯ ದಿನಾಂಕಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

KEA Recruitment 2026: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!
KEA VA ನೇಮಕಾತಿ

Updated on: Jul 31, 2026 | 1:00 PM

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ (Village Administrative Officer – VA) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿದೆ. ಕಂದಾಯ ಇಲಾಖೆಯ ವಿವಿಧ ಜಿಲ್ಲೆಗಳಲ್ಲಿನ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದದ ಗ್ರೂಪ್-ಸಿ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಈ ಪ್ರಮುಖ ಪ್ರಕಟಣೆಯನ್ನು ಹೊರಡಿಸಲಾಗಿದೆ.

ವಿಸ್ತರಿಸಲಾದ ಹೊಸ ದಿನಾಂಕಗಳ ವಿವರ:

ಈ ಹಿಂದೆ ಹೊರಡಿಸಲಾಗಿದ್ದ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು 30.07.2026 ಮತ್ತು ಶುಲ್ಕ ಪಾವತಿಸಲು 31.07.2026 ಕೊನೆಯ ದಿನಾಂಕವಾಗಿತ್ತು. ಆದರೆ ಈಗ ಅಭ್ಯರ್ಥಿಗಳಿಗೆ ಮತ್ತಷ್ಟು ಕಾಲಾವಕಾಶ ನೀಡಲಾಗಿದ್ದು, ವಿಸ್ತರಿಸಲಾದ ದಿನಾಂಕಗಳು ಕೆಳಗಿನಂತಿವೆ:

  • ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07.08.2026
  • ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 10.08.2026

ಇದನ್ನೂ ಓದಿ: ಜಾಬ್ ಇಂಟರ್‌ವ್ಯೂಗೆ ಹೋಗುವ ಮುನ್ನ ಈ ತಪ್ಪು ಮಾಡಬೇಡಿ; ಸಿಂಪಲ್​ ಟಿಪ್ಸ್​ ಇಲ್ಲಿದೆ

ಮುಖ್ಯ ಸೂಚನೆ:

ದಿನಾಂಕ 10.07.2026 ರಂದು ಬಿಡುಗಡೆ ಮಾಡಲಾದ ಮೂಲ ಅಧಿಸೂಚನೆಯಲ್ಲಿನ ಉಲ್ಲೇಖಿತ ಇತರೆ ಯಾವುದೇ ನಿಯಮಗಳು ಮತ್ತು ಷರತ್ತುಗಳಲ್ಲಿ ಬದಲಾವಣೆ ಇರುವುದಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ಈ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ತಕ್ಷಣವೇ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ cetonline.karnataka.gov.in ಗೆ ಭೇಟಿ ನೀಡಿ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us