Kempe Gowda Jayanti 2023: ರಾಜ್ಯಾದ್ಯಂತ ಜೂ.27ರಂದು ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ಜೂ.27ರಂದು ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲು ರಾಜ್ಯಾದ್ಯಂತ ಸಿದ್ದತೆಗಳು ನಡೆಯುತ್ತಿವೆ. ಆದ್ದರಿಂದ ಕೆಂಪೇಗೌಡರು ಯಾರು? ಬೆಂಗಳೂರಿಗೆ ಅವರ ಕೊಡುಗೆ ಏನು? ಎಂಬೆಲ್ಲಾ ವಿಷಯಗಳ ಕುರಿತು ಮಾಹಿತಿ ಇಲ್ಲಿದೆ.

Kempe Gowda Jayanti 2023: ರಾಜ್ಯಾದ್ಯಂತ ಜೂ.27ರಂದು ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ
ಕೆಂಪೇಗೌಡ
Follow us
ಅಕ್ಷತಾ ವರ್ಕಾಡಿ
|

Updated on:Jun 23, 2023 | 11:33 AM

ಬೆಂಗಳೂರು: ಗುರುವಾರ ಬೆಂಗಳೂರಿನಲ್ಲಿ ನಡೆದ ಕೆಂಪೇಗೌಡ ಜಯಂತಿ(Kempegowda Jayanthi) ಪೂರ್ವಭಾವಿ ಸಭೆಯಲ್ಲಿ ಹಲವಾರು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಉಪ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್​​​(D. K. Shivakumar)  ಜೂ.27ರಂದು ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲು ತಿರ್ಮಾನಿಸಲಾಗಿದೆ ಎಂದು ಹೇಳಿದರು. ಇದೀಗಾಗಲೇ ರಾಜ್ಯಾದ್ಯಂತ ಆಚರಣೆಗೆ ಸಿದ್ದತೆಗಳು ನಡೆಯುತ್ತಿವೆ. ಆದ್ದರಿಂದ ಕೆಂಪೇಗೌಡರು ಯಾರು? ಬೆಂಗಳೂರಿಗೆ ಅವರ ಕೊಡುಗೆ ಏನು? ಎಂಬೆಲ್ಲಾ ವಿಷಯಗಳ ಕುರಿತು ಮಾಹಿತಿ ಇಲ್ಲಿದೆ.

ಬೆಂಗಳೂರಿನ ನಿರ್ಮಾತೃ:

ಕರ್ನಾಟಕಕ್ಕೆ ಅದರಲ್ಲೂ ಮುಖ್ಯವಾಗಿ ಬೆಂಗಳೂರಿಗೆ ಕೆಂಪೇಗೌಡರ ಕೊಡುಗೆ ಅಪಾರ. ಬೆಂಗಳೂರು ನಿರ್ಮಾತೃ ಎಂಬ ಹೆಗ್ಗಳಿಕೆಯು ಇವರಿಗಿದೆ. ವಿಜಯನಗರ ಸಾಮ್ರಾಜ್ಯದ ಅಡಿಯಲ್ಲಿ ಊಳಿಗಮಾನ್ಯ ಆಡಳಿತಗಾರರಾಗಿದ್ದರು. 1510ರಲ್ಲಿ ಯಲಹಂಕದಲ್ಲಿ ಜನಿಸಿದ ಕೆಂಪೇಗೌಡರು 1528ರಲ್ಲಿ ಯುವರಾಜರಾಗಿ ಪಟ್ಟಾಭಿಷೇಕ ನಡೆದಿತ್ತು. ವಿಜಯನಗರ ಸಾಮ್ರಾಜ್ಯದ ವೈಭವ ನೋಡಿದ್ದರಿಂದ ಅಂತದ್ದೇ ಒಂದು ನಗರವನ್ನು ಸ್ಥಾಪಿಸಬೇಕು ಎಂಬ ಕನಸು ಕಂಡಿದ್ದ ಇವರು ಬೆಂಗಳೂರು ಎಂಬ ಪಟ್ಟಣವನ್ನು ಕಟ್ಟಿ ಬೆಳೆಸುವಲ್ಲಿ ಸಾಕಷ್ಟು ಶ್ರಮ ವಹಿಸಿದ್ದರು. ಅದಕ್ಕಾಗಿ ಉತ್ತಮ ಸ್ಥಳ ಗುರುತಿಸಿ ಜನರಿಂದ ಹಣ ಸಂಗ್ರಹಿಸಿ ಬೆಂಗಳೂರು ಪಟ್ಟಣ ನಿರ್ಮಿಸಿದರು. ಭವಿಷ್ಯದಲ್ಲಿ ಬೆಂಗಳೂರಿಗರು ಆರ್ಥಿಕವಾಗಿ ಕುಗ್ಗಬಾರದು ಜೊತೆಗೆ ಜನರ ಅಗತ್ಯತೆಗೆ ಅನುಗುಣವಾಗಿ ನಾಲ್ಕು ದಿಕ್ಕಿಗೆ ನಾಲ್ಕು ಗೋಪುರ, ಪ್ರತಿ ಬಡಾವಣೆಗೆ ಒಂದು ಕೆರೆ, ನೂರಾರು ಜನರ ವೃತ್ತಿಗೆ ಅನುಗುಣವಾಗಿ ಬೀದಿ ರೂಪಿಸಿದ್ದರು. ನಗರದಲ್ಲಿ ಕುಡಿಯುವ ಮತ್ತು ಕೃಷಿ ಅಗತ್ಯಗಳನ್ನು ಪೂರೈಸಲು ಸುಮಾರು 1,000 ಕೆರೆಗಳನ್ನು ಅಭಿವೃದ್ಧಿಪಡಿಸಿದ ಕೀರ್ತಿಯೂ ಅವರಿಗೆ ಸಲ್ಲುತ್ತದೆ. ಸುಮಾರು 56 ವರ್ಷಗಳ ಕಾಲ ಸುಧೀರ್ಘ ಆಡಳಿತ ನಡೆಸಿ ಜನರ ಒಳಿತಿಗಾಗಿ ಶ್ರಮವಹಿಸಿದ ನಾಡಪ್ರಭು ಕೆಂಪೇಗೌಡರು1569 ರಲ್ಲಿ ನಿಧನರಾದರು.

ಇದನ್ನು ಓದಿ: ಅಂತರಾಷ್ಟ್ರೀಯ ಒಲಿಂಪಿಕ್ ದಿನದ ಇತಿಹಾಸ, ಮಹತ್ವದ ಬಗ್ಗೆ ಇಲ್ಲಿದೆ ಮಾಹಿತಿ

ಕೆಂಪೇಗೌಡರ ಹೆಗ್ಗುರುತುಗಳು:

ಬೆಂಗಳೂರಿಗೆ ನಾಡಪ್ರಭು ನೀಡಿರುವ ಕೊಡುಗೆಯನ್ನು ಸದಾ ಸ್ಮರಿಸಲು ರಾಜ್ಯ ಸರ್ಕಾರಗಳು ಪ್ರಮುಖ ಹೆಗ್ಗುರುತುಗಳನ್ನು ಅವರಿಗಾಗಿ ಅರ್ಪಿಸಿವೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಕೆಂಪೇಗೌಡ ಬಸ್ ನಿಲ್ದಾಣ ಮತ್ತು ನಾಡಪ್ರಭು ಕೆಂಪೇಗೌಡ ಮೆಟ್ರೋ ಸ್ಟೇಷನ್ ನೀವು ಬೆಂಗಳೂರಿನಲ್ಲಿ ಕಾಣಬಹುದು. ಇತ್ತೀಚೆಗಷ್ಟೇ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಬ್ಬಾಗಲಿನಲ್ಲೇ ಹೆಮ್ಮೆಯ ಪ್ರಧಾನಿ ಅನಾವರಣಗೊಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 11:32 am, Fri, 23 June 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್