AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus: ಕೇರಳದಿಂದ‌ ಕರ್ನಾಟಕ ಪ್ರವೇಶಕ್ಕೆ ನಿರ್ಬಂಧ ವಿಚಾರ; ಮಧ್ಯಪ್ರವೇಶಿಸಲು ಕೇರಳ ಹೈಕೋರ್ಟ್ ನಕಾರ

Kerala HC: ಕೇರಳ ಹೈಕೋರ್ಟ್​ಗೆ ಕರ್ನಾಟಕದ‌ ನ್ಯಾಯಾಂಗ ವ್ಯಾಪ್ತಿ ಇಲ್ಲ ಎಂದು ಕರ್ನಾಟಕ ಸರ್ಕಾರದ ಪರವಾಗಿ ಎಜಿ ಪ್ರಭುಲಿಂಗ್ ನಾವದಗಿ ವಾದ‌‌ ಮಂಡಿಸಿದ್ದರು. ಕರ್ನಾಟಕ ಸರ್ಕಾರದ ವಾದವನ್ನು ಕೇರಳ ಹೈಕೋರ್ಟ್ ಒಪ್ಪಿಕೊಂಡಿದೆ.

Coronavirus: ಕೇರಳದಿಂದ‌ ಕರ್ನಾಟಕ ಪ್ರವೇಶಕ್ಕೆ ನಿರ್ಬಂಧ ವಿಚಾರ; ಮಧ್ಯಪ್ರವೇಶಿಸಲು ಕೇರಳ ಹೈಕೋರ್ಟ್ ನಕಾರ
ಕೇರಳ ಹೈಕೋರ್ಟ್
TV9 Web
| Updated By: ganapathi bhat|

Updated on:Sep 28, 2021 | 8:39 PM

Share

ತಿರುವನಂತಪುರ: ಕೇರಳದಿಂದ‌ ಕರ್ನಾಟಕ ಪ್ರವೇಶಕ್ಕೆ ನಿರ್ಬಂಧ ವಿಚಾರವಾಗಿ ಮಧ್ಯಪ್ರವೇಶಿಸಲು ಕೇರಳ ಹೈಕೋರ್ಟ್ ನಿರಾಕರಿಸಿದೆ. ಅದರಂತೆ, ಗಡಿನಾಡು ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಲಾಗಿದೆ. ಕೇರಳದಲ್ಲಿ ಕೊರೊನಾ ಉಲ್ಬಣಿಸಿದ ಹಿನ್ನೆಲೆಯಲ್ಲಿ ಕೇರಳದವರ ಪ್ರವೇಶಕ್ಕೆ ಕರ್ನಾಟಕ ನಿರ್ಬಂಧ ವಿಧಿಸಿತ್ತು. ಆರ್​ಟಿಪಿಸಿಆರ್ ಹಾಗೂ 2 ಡೋಸ್ ಲಸಿಕೆ ಪ್ರಮಾಣಪತ್ರ ಕಡ್ಡಾಯಗೊಳಿಸಿತ್ತು. ಈ ಕ್ರಮವನ್ನು ಕೇರಳ ಹೈಕೋರ್ಟ್​ನಲ್ಲಿ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು.

ಕರ್ನಾಟಕದ ಕ್ರಮವನ್ನು ಕೇರಳ ಹೈಕೋರ್ಟ್​ನಲ್ಲಿ ಪ್ರಶ್ನಿಸಲಾಗಿತ್ತು. ಆದರೆ, ಅದಕ್ಕೆ ಪ್ರತಿಯಾಗಿ ಕರ್ನಾಟಕ ರಾಜ್ಯಕ್ಕೆ ಪ್ರವೇಶ ನಿಷೇಧಿಸಿಲ್ಲ, ನಿಬಂಧನೆ ವಿಧಿಸಿದೆ. ಕೇರಳ ಹೈಕೋರ್ಟ್ ಕರ್ನಾಟಕದ ವಿಚಾರದಲ್ಲಿ ಆದೇಶಿಸುವಂತಿಲ್ಲ. ಕೇರಳ ಹೈಕೋರ್ಟ್​ಗೆ ಕರ್ನಾಟಕದ‌ ನ್ಯಾಯಾಂಗ ವ್ಯಾಪ್ತಿ ಇಲ್ಲ ಎಂದು ಕರ್ನಾಟಕ ಸರ್ಕಾರದ ಪರವಾಗಿ ಎಜಿ ಪ್ರಭುಲಿಂಗ್ ನಾವದಗಿ ವಾದ‌‌ ಮಂಡಿಸಿದ್ದರು. ಕರ್ನಾಟಕ ಸರ್ಕಾರದ ವಾದವನ್ನು ಕೇರಳ ಹೈಕೋರ್ಟ್ ಒಪ್ಪಿಕೊಂಡಿದೆ. ಆ ಮೂಲಕ, ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಅರ್ಜಿ ವಜಾ ಆಗಿದೆ.

ಕರ್ನಾಟಕ ಕೊರೊನಾ ಪ್ರಕರಣಗಳು ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 28) ಹೊಸದಾಗಿ 629 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,74,528 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,24,102 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 17 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,763 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 12,634 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 229 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,45,900 ಕ್ಕೆ ಏರಿಕೆಯಾಗಿದೆ. 12,45,900 ಸೋಂಕಿತರ ಪೈಕಿ 12,22,338 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,143 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,418 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಇದನ್ನೂ ಓದಿ: Bengaluru: ಒಂದೇ ಕಾಲೇಜಿನ 54 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ಇದನ್ನೂ ಓದಿ: ಕೊರೊನಾ ಲಸಿಕೆ ನೀಡಿಕೆಯಲ್ಲಿ ಭಾರತ ಮತ್ತೊಮ್ಮೆ ಸಾಧನೆ; ಸೋಮವಾರವೂ 1 ಕೋಟಿ ಡೋಸ್ ಲಸಿಕೆ ನೀಡಿಕೆ

Published On - 6:09 pm, Tue, 28 September 21

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್