AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ಪತ್ರದ ಬೆನ್ನಲ್ಲೇ ವರಸೆ ಬದಲಿಸಿದ ಕೇರಳ ಸರ್ಕಾರ: ಕನ್ನಡಿಗರಿಗೆ ಮಲಯಾಳಂ ಕಡ್ಡಾಯ ಅಲ್ಲ

ಕೇರಳದ ಮಲಯಾಳಂ ಭಾಷಾ ಮಸೂದೆ 2025 ಕುರಿತು ಕರ್ನಾಟಕ ಸಿಎಂ ಸಿದ್ದರಾಮಯ್ಯರ ಪತ್ರಕ್ಕೆ ಕೇರಳ ಸಿಎಂ ಪಿಣರಾಯಿ ಪ್ರತಿಕ್ರಿಯಿಸಿದ್ದಾರೆ. ಹೊರರಾಜ್ಯದ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯವಲ್ಲ, ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲಾಗಿದೆ. ಕನ್ನಡ ಮಾತನಾಡುವವರಿಗೆ ತಮ್ಮ ಭಾಷೆಯಲ್ಲೇ ಪತ್ರ ವ್ಯವಹಾರಕ್ಕೆ ಅವಕಾಶವಿದೆ ಎಂದಿದ್ದಾರೆ. ಮಸೂದೆಯು ಭಾಷಾ ವೈವಿಧ್ಯತೆಯನ್ನು ಗೌರವಿಸುತ್ತದೆ.

ಸಿಎಂ ಸಿದ್ದರಾಮಯ್ಯ ಪತ್ರದ ಬೆನ್ನಲ್ಲೇ ವರಸೆ ಬದಲಿಸಿದ ಕೇರಳ ಸರ್ಕಾರ: ಕನ್ನಡಿಗರಿಗೆ ಮಲಯಾಳಂ ಕಡ್ಡಾಯ ಅಲ್ಲ
ಸಾಂದರ್ಭಿಕ ಚಿತ್ರ
ಹರೀಶ್ ಜಿ.ಆರ್​.
| Edited By: |

Updated on:Jan 10, 2026 | 5:05 PM

Share

ಬೆಂಗಳೂರು, ಜ.10: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ ಸಂಬಂಧಿಸಿದಂತೆ ಕೇರಳ ಸರ್ಕಾರ ‘ಮಲಯಾಳ ಭಾಷಾ ಮಸೂದೆ 2025’ಗೆ (Kerala Malayalam Bill) ಅನುಮೋದನೆ ನೀಡಿತ್ತು. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ​​ಗೆ ಪತ್ರ ಬರೆದಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಪತ್ರಕ್ಕೆ ಕೇರಳ ಸಿಎಂ ಪಿಣರಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಹೊರರಾಜ್ಯ, ವಿದೇಶಿ ವಿದ್ಯಾರ್ಥಿಗಳಿಗೆ ಮಲಯಾಳಂ ಪರೀಕ್ಷೆ ಕಡ್ಡಾಯ ಅಲ್ಲ ಎಂದು ಹೇಳಿದ್ದಾರೆ. 9, 10ನೇ ತರಗತಿ, ಪಿಯುಸಿಗೆ ಮಲಯಾಳಂ ಪರೀಕ್ಷೆ ಕಡ್ಡಾಯಗೊಳಿಸಿಲ್ಲ ಎಂದು ತಮ್ಮ ಎಕ್ಸ್​​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಮಸೂದೆಯಲ್ಲಿ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲಾಗಿದೆ. ಕನ್ನಡ, ತಮಿಳು ಮಾತನಾಡುವ ಭಾಷಾ ಅಲ್ಪಸಂಖ್ಯಾತರ ಹಕ್ಕು ರಕ್ಷಣೆಗಾಗಿ ಈ ಮಸೂದೆಯನ್ನು ತರಲಾಗಿದೆ. ಹಕ್ಕು ರಕ್ಷಣೆಗೆ ಮಸೂದೆಯ ಸೆಕ್ಷನ್ 7ರಲ್ಲಿ ರಕ್ಷಣಾತ್ಮಕ ನಿಯಮ ಅಳವಡಿಕೆ ಮಾಡಲಾಗಿದೆ. ಸಚಿವಾಲಯ, ಇಲಾಖೆ ಮುಖ್ಯಸ್ಥರ ಜತೆ ಪತ್ರ ವ್ಯವಹಾರವನ್ನು ಕೂಡ ತಮ್ಮ ಭಾಷೆಯಲ್ಲೇ ನಡೆಸಬಹುದು ಎಂದು ಹೇಳಿದ್ದಾರೆ. ಕಚೇರಿಗಳಲ್ಲೂ ತಮ್ಮ ಮಾತೃಭಾಷೆಯಲ್ಲೇ ಪತ್ರ ವ್ಯವಹಾರಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ಕೇರಳ ಸಚಿವಾಲಯ ಹಾಗೂ ಕಚೇರಿಗಳ ನಿಮ್ಮ ಭಾಷೆಯಲ್​ಲೇ ಉತ್ತರಿಸುತ್ತದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ಪಠ್ಯಕ್ರಮದ ಅನ್ವಯ ಲಭ್ಯವಿರುವ ಭಾಷೆಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಭಾರತೀಯ ಸಂವಿಧಾನದ 346 ಮತ್ತು 347ನೇ ವಿಧಿಗಳು ಹಾಗೂ 1963ರ ಅಧಿಕೃತ ಭಾಷಾ ಕಾಯ್ದೆಗೆ ಈ ಭಾಷಾ ನೀತಿ ಅನುಗುಣವಾಗಿದೆ. ಕೇರಳ ಸರ್ಕಾರ ಒಕ್ಕೂಟ ವ್ಯವಸ್ಥೆಯ ಹಕ್ಕುಗಳನ್ನು ಎತ್ತಿಹಿಡಿಯುತ್ತಿದೆ. ಪ್ರತಿಯೊಬ್ಬ ನಾಗರಿಕನ ಭಾಷಾ ಗುರುತನ್ನು ರಕ್ಷಿಸಲು ಸರ್ಕಾರ ಬದ್ಧ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇರಳದ ಮಲಯಾಳ ಭಾಷಾ ಮಸೂದೆಯಲ್ಲೇನಿದೆ? ಕನ್ನಡಿಗರಿಗೆ, ಕನ್ನಡ ಶಾಲೆಗಳಿಗೇಕೆ ಆತಂಕ?

ಮಲಯಾಳ ಭಾಷಾ ಮಸೂದೆಯಲ್ಲೇನಿದೆ?

ಈ ಮಸೂದೆ ಕೇರಳದಾದ್ಯಂತ ಮಲಯಾಳವನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ಮಸೂದೆ. 016 ರಲ್ಲಿ ಮಂಡಿಸಲಾದ ಈ ಮಸೂದೆಯನ್ನು ಭಾಷಾ ಅಲ್ಪಸಂಖ್ಯಾತರಿಗೆ ವಿರುದ್ದವಾಗಿದೆ ಎಂದು ಅಂದಿನ ರಾಜ್ಯಪಾಲರು ತಿರಸ್ಕರಿಸಿದ್ದರು. 1 ರಿಂದ 10 ನೇ ತರಗತಿಯವರೆಗೆ ಕನ್ನಡ ಮಾಧ್ಯಮ ಶಾಲೆಯೂ ಸೇರಿದಂತೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯಗೊಳಿಸುವುವ ಬಗ್ಗೆ ಈ ಮಸೂದೆಯಲ್ಲಿ ಉಲ್ಲೇಖವಾಗಿದೆ. ರಾಜ್ಯಪಾಲರು ತಿರಸ್ಕರಿಸಿದ್ದ ನಂತರ ಇದರಲ್ಲಿ ಕೆಲವೊಂದು ಬದಲಾವಣೆಗಳನ್ನು ತಂದು, ಮತ್ತೆ ಈ ಮಸೂದೆಯನ್ನು ಮಂಡಿಸಲು ಮುಂದಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:02 pm, Sat, 10 January 26

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?