AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್

ಬೆಂಗಳೂರಿನ ಕೋಗಿಲು ಕ್ರಾಸ್ ಅಕ್ರಮ ಶೆಡ್ ತೆರವು ಹಾಗೂ ನಂತರ ಕೇರಳಿಗರಿಗೆ ಮನೆ ನೀಡುವ ರಾಜ್ಯ ಸರ್ಕಾರದ ನಿರ್ಧಾರ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಸರ್ಕಾರ ನಡೆದಿರುವುದನ್ನು ಜೆಡಿಎಸ್ ತೀವ್ರವಾಗಿ ಖಂಡಿಸಿದೆ. ಸಿದ್ದರಾಮಯ್ಯರನ್ನು ‘ಕೇರಳಿಗರ ಚೇಟಾ’ ಎಂದು ಜರೆದಿದ್ದು, ಕೇರಳಕ್ಕಾಗಿ ಮಾಡಿದ ಕೆಲಸಗಳ ಪಟ್ಟಿ ಮಾಡಿದೆ.

ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್
ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್
Ganapathi Sharma
|

Updated on: Dec 30, 2025 | 2:45 PM

Share

ಬೆಂಗಳೂರು, ಡಿಸೆಂಬರ್ 30: ಬೆಂಗಳೂರಿನ (Bengaluru) ಕೋಗಿಲು ಕ್ರಾಸ್ ಬಡಾವಣೆಯಲ್ಲಿ ಅಕ್ರಮ ಶೆಡ್​​ಗಳ ತೆರವು ಹಾಗೂ ನಂತರದ ಬೆಳವಣಿಗೆಗಳು ಕರ್ನಾಟಕದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಬೆನ್ನಲ್ಲೇ ತಕ್ಷಣವೇ ಅಕ್ರಮ ಶೆಡ್​ಗಳಲ್ಲಿ ವಾಸಿಸುತ್ತಿದ್ದ ಕೇರಳಿಗರಿಗೆ ಮನೆ ನೀಡಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರ, ಪ್ರವಾಹ ಸೇರಿದಂತೆ ಪ್ರಾಕೃತಿಕ ವಿಕೋಪಗಳಿಂದ ನಿರಾಶ್ರಿತರಾದ ಕನ್ನಡಿಗರಿಗೇ ವರ್ಷಗಳಿಂದ ಪರಿಹಾರ ನೀಡದೇ ಇರುವ ವಿಚಾರ ಮುನ್ನೆಲೆಗೆ ಬಂದಿದೆ. ಇದೀಗ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಎಕ್ಸ್ ಮೂಲಕ ವಾಗ್ದಾಳಿ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಎಂದು ಜರೆದಿದೆ. ಅಲ್ಲದೆ, ಕೇರಳಕ್ಕಾಗಿ ಸಿದ್ದರಾಮಯ್ಯ ಈವರೆಗೆ ಏನೇನು ಮಾಡಿದ್ದಾರೆ ಎಂಬ ಪಟ್ಟಿ ನೀಡಿದೆ.

‘ಇದೊಂದು ಪ್ರಕರಣಕ್ಕೆ ಮಾತ್ರ ಸೀಮಿತ’ ಎಂದು ತಿಪ್ಪೇಸಾರುವ ಕೇರಳಿಗರ ಚೇಟಾ ಸಿದ್ದರಾಮಯ್ಯ ಅವರ ವಸತಿ ರಹಿತ ಕನ್ನಡಿಗರಿಗೆ ಮಿಡಿಯದ ಮಾನವೀಯತೆ, ಕೇರಳದ ಅಕ್ರಮ ವಲಸಿಗರಿಗೆ ಮಿಡಿಯುತ್ತಿರುವ ಇಬ್ಭಗೆ ನೀತಿಗೆ ಧಿಕ್ಕಾರವಿರಲಿ. ಹೈಕಮಾಂಡ್ ಆರ್ಡರ್‌ ಅನ್ನು ತಲೆಬಾಗಿ, ಕುರ್ಚಿ ಕಳೆದುಕೊಳ್ಳುವ ಭೀತಿಯಲ್ಲಿ ಅಕ್ರಮ ವಲಸಿಗರ ಪರವಾಗಿ, ತರಾತುರಿಯಲ್ಲಿ ಸಭೆಗಳನ್ನು ನಡೆಸಿ ಆದೇಶ ಹೊರಡಿಸಿ, ವಸತಿ ರಹಿತ ಕನ್ನಡಿಗರಿಗೆ ಬಗೆದ ವಿಶ್ವಾಸದ್ರೋಹವಲ್ಲವೇ? ಕರ್ನಾಟಕದಲ್ಲಿ ಸುಮಾರು 30 ಲಕ್ಷಕ್ಕೂ ಹೆಚ್ಚು ವಸತಿರಹಿತ ಬಡ ಕನ್ನಡಿಗರಿಗೆ ಸೂರಿಲ್ಲ. ವಸತಿ ಇಲಾಖೆಯ ಮನೆ ಹಂಚಿಕೆಗಾಗಿ ಅರ್ಜಿ ಸಲ್ಲಿಸಿ ಲಕ್ಷಾಂತರ ಜನರು ಹಗಲು ರಾತ್ರಿ ದುಡಿದ ಹಣವನ್ನು ಮುಂಗಡ ಕಟ್ಟಿ, ವರ್ಷಾನುಗಟ್ಟಲೇ ಇನ್ನೂ ಕಾಯುತ್ತಿದ್ದಾರೆ. ಇಂತಹ ನಿರ್ಗತಿಕರಿಗೆ ಮನೆಗಳನ್ನು ನೀಡುವ ಮನಸ್ಸು ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲವಾಗಿದೆ’ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ವೋಟ್‌ ಬ್ಯಾಂಕ್‌ಗಾಗಿ ಒಂದು ಸಮುದಾಯದ ಓಲೈಕೆ ಮಾಡುತ್ತಿರುವ ಕಾಂಗ್ರೆಸ್‌ ಪಕ್ಷ, ವಸತಿ ಸಚಿವ ಜಮೀರ್ ಅಹ್ಮದ್ ಕನ್ನಡಿಗರ ತೆರಿಗೆ ಹಣದಲ್ಲಿ ವಲಸಿಗರಿಗೆ 11.20 ಲಕ್ಷ ರೂ ವೆಚ್ಚದ ಮನೆಗಳನ್ನು ನೀಡಿ, ರಾಜ ಮಾರ್ಯಾದೆ ಕೊಡುತ್ತಿರುವುದು ರಾಜ್ಯದ ಜನರಿಗೆ ಮಾಡುತ್ತಿರುವ ವಂಚನೆ ಎಂದು ಜೆಡಿಎಸ್ ಟೀಕಿಸಿದೆ.

ಜೆಡಿಎಸ್ ಎಕ್ಸ್ ಸಂದೇಶ

ಹೈಕಮಾಂಡ್‌ನ ತೊಗಲುಗೊಂಬೆಯಾದ ಕಾಂಗ್ರೆಸ್‌ ಸರ್ಕಾರ ಎಂದು ಮತ್ತೊಂದು ಎಕ್ಸ್ ಸಂದೇಶದ ಮೂಲಕ ಕಿಡಿಕಾರಿದೆ.

ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರನ್ನು ಹೈಕಮಾಂಡ್‌ ತನ್ನ ಕೈಗೊಂಬೆಯಾಗಿಸಿಕೊಂಡು ಆಟವಾಡಿಸುತ್ತಿದೆ. ಕೇರಳದ ಅಕ್ರಮ ವಲಸಿಗರಿಗೆ ಬೆಂಗಳೂರಿನಲ್ಲಿ 11.20 ಲಕ್ಷ ರೂ. ಮೌಲ್ಯದ ಮನೆ ಗ್ಯಾರಂಟಿ, ಕೇರಳದ ವಯನಾಡಿನ ಸಂತ್ರಸ್ತರಿಗೆ 10 ಕೋಟಿ ರೂ. ವೆಚ್ಚದಲ್ಲಿ 100 ಮನೆ, ಆನೆದಾಳಿಗೆ ಬಲಿಯಾದ ಕೇರಳದ ವ್ಯಕ್ತಿಗೆ 15 ಲಕ್ಷ ರೂ. ಪರಿಹಾರ, ಇದು ಕನ್ನಡಿಗರ ವಿರೋಧಿ ಕಾಂಗ್ರೆಸ್​​​​ನಿಂದ ರಾಜ್ಯದ ಜನತೆಗೆ ನಿರಂತರವಾಗಿ ಆಗುತ್ತಿರುವ ಅನ್ಯಾಯ ಎಂದು ಜೆಡಿಎಸ್ ಹೇಳಿದೆ.

ಇದನ್ನೂ ಓದಿ: ಬರ–ಪ್ರವಾಹಕ್ಕೆ ವರ್ಷಗಳ ನಿರೀಕ್ಷೆ, ಕೋಗಿಲು ಲೇಔಟ್‌ಗೆ ಎರಡು ದಿನಗಳಲ್ಲಿ ಪರಿಹಾರ: ಸರ್ಕಾರದ ವಿರುದ್ಧ ಗುಡುಗಿದ ಜೋಶಿ

ಭೂಸ್ವಾಧೀನ ವಿರೋಧಿಸಿದ ರೈತರ ಮೇಲೆ ಕೋಪ, ಆಕ್ರೋಶ. ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗ ಕೇರಳಿಗರ ಮೇಲೆ ಮೃದುಧೋರಣೆ. ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕೀಯಕ್ಕೆ ಧಿಕ್ಕಾರ ಎಂದು ಜೆಡಿಎಸ್ ಉಲ್ಲೇಖಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!