AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂ ಒತ್ತುವರಿ ಆರೋಪ: ನ್ಯಾಯಾಂಗ ನಿಂದನೆ ಕೇಸ್​​​ನಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್

ಬೆಂಗಳೂರು ದಕ್ಷಿಣದ (ರಾಮನಗರ) ಬಿಡದಿ ಬಳಿ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್​ ಡಿ ಕುಮಾರಸ್ವಾಮಿ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ದಾಖಲಿಸಿರುವ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್​ ತಾತ್ಕಾಲಿಕವಾಗಿ ತಡೆ ನೀಡಿದೆ. ಹಾಗಾದ್ರೆ, ಏನಿದು ಪ್ರಕರಣ ಎನ್ನುವ ಡಿಟೇಲ್ಸ್ ಇಲ್ಲಿದೆ.

ಭೂ ಒತ್ತುವರಿ ಆರೋಪ: ನ್ಯಾಯಾಂಗ ನಿಂದನೆ ಕೇಸ್​​​ನಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್
Hd Kumaraswamy And Supreme court
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Jul 17, 2025 | 2:55 PM

Share

ನವದೆಹಲಿ, (ಜುಲೈ 17): ಬಿಡದಿ ಬಳಿ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ(ketaganahalli land dispute Case) ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್​ ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ (Supreme court)​ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಂಕಜ್ ಮಿಥಲ್ ಹಾಗೂ ನ್ಯಾಯಾಮೂರ್ತಿ.ಪ್ರಸನ್ನ ಬಿ. ವರಾಳೆ ಅವರ ದ್ವಿಸದಸ್ಯ ಪೀಠ, ಮುಂದಿನ ಆದೇಶದವರೆಗೂ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ.

ಹಿಂದಿನ ರಾಮನಗರ ಜಿಲ್ಲೆ ಬಿಡದಿ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಹಾಗೂ ಅವರ ಸಂಬಂಧಿ ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ಮತ್ತಿತರರ ವಿರುದ್ಧದ ಭೂ ಕಬಳಿಕೆ ಆರೋಪ ಸಂಬಂಧ ಲೋಕಾಯುಕ್ತ ನೀಡಿರುವ ಆದೇಶ ಜಾರಿಗೊಳಿಸುವಲ್ಲಿ ಸರಕಾರ ವಿಫಲವಾಗಿದೆ ಎಂದು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯದ ಎಸ್‌ ಆರ್‌ ಹಿರೇಮಠ ಅವರು ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಈ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಅರ್ಜಿ ವಿಚಾರಣೆಯಲ್ಲಿ ಭಾಗವಹಿಸಲು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿಗೆ ಅನುಮತಿ ನೀಡಿತ್ತು. ಆದ್ರೆ, ಹೈಕೋರ್ಟ್​ ನ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಭೂಕಬಳಿಕೆ ಆರೋಪ: ಹೆಚ್​ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಬಾಕಿ ಇರುವುದರಿಂದ ತಮ್ಮ ವಿರುದ್ಧದ ಕಾನೂನು ಪ್ರಕ್ರಿಯೆಗೆ ತಡೆ ನೀಡುವಂತೆ ಕುಮಾರಸ್ವಾಮಿ ಹೈಕೋರ್ಟ್‌ಗೆ ಮನವಿ ಮಾಡಿದ್ದರು. ಕುಮಾರಸ್ವಾಮಿ ಅವರ ಮನವಿ ಪರಿಗಣಿಸಿದ ನ್ಯಾಯಾಲಯ, ಮಾರ್ಚ್ 27 ರವರೆಗೂ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಆದೇಶಿಸಿ ವಿಚಾರಣೆಯನ್ನು ಮುಂದೂಡಿತ್ತು. ಇದೀಗ ಸುಪ್ರೀಂಕೋರ್ಟ್, ಕುಮಾರಸ್ವಾಮಿ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಗೆ ತಡೆ ನೀಡಿ ಆದೇಶಿಸಿದೆ.

ಇದನ್ನೂ ಓದಿ
Image
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
Image
ಕಾನೂನು ಬಾಹಿರವಾಗಿ ಭೂಮಿ ಇದ್ರೆ ವಶಪಡಿಸಿಕೊಳ್ಳಿ: ಕುಮಾರಸ್ವಾಮಿ ಪತ್ರ
Image
ಕೇಂದ್ರ ಸಚಿವ ಕುಮಾರಸ್ವಾಮಿ ತೋಟದ ಮನೆ ಸುತ್ತ ಒತ್ತುವರಿ ತೆರವಿಗೆ ಸಿದ್ಧತೆ
Image
ಡಿನೋಟಿಫಿಕೇಷನ್‌ ಪ್ರಕರಣ: ಕುಮಾರಸ್ವಾಮಿ ಅರ್ಜಿ ವಜಾ ಮಾಡಿದ ಸುಪ್ರೀಂ

ಪ್ರಕರಣ ಹಿನ್ನೆಲೆ

2014 ರಲ್ಲಿ ಬಿಡದಿ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಎಂಟು ಸರ್ವೆ ನಂಬರ್‌ಗಳಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಲಾಗಿದ್ದು, ಈ ಒತ್ತುವರಿ ತೆರಿವಿಗೆ ಲೋಕಾಯುಕ್ತ ಸೂಚಿಸಿತ್ತು. ಲೋಕಾಯುಕ್ತದ ಸೂಚನೆ ಬಳಿಕವೂ ಅಧಿಕಾರಿಗಳು ತೆರವು ಮಾಡಲಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಮಾಜ ಪರಿವರ್ತನ ಸಮಾಜ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮೂರು ತಿಂಗಳಲ್ಲಿ ತೆರವು ಮಾಡಲು ಸೂಚನೆ ನೀಡಿತ್ತು. ಹೈಕೋರ್ಟ್ ಸೂಚನೆ ಬಳಿಕವೂ ತೆರವು ಮಾಡದ ಅಧಿಕಾರಿಗಳು ಈ ಹಿನ್ನೆಲೆ ಸಮಾಜ ಪರಿವರ್ತನಾ ಸಮಾಜ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಈ ನ್ಯಾಯಾಂಗ ನಿಂದನೆ ಅರ್ಜಿ ವಜಾ ಮಾಡಲು ಕುಮಾರಸ್ವಾಮಿ ಸುಪ್ರೀಂ ಕೋರ್ಟ್‌ಗೆ ಕೋರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:34 pm, Thu, 17 July 25