ಎಚ್ಡಿಕೆಗೆ ಸುಪ್ರೀಂ ಕೋರ್ಟ್‌ನಿಂದ ತಾತ್ಕಾಲಿಕ ರಕ್ಷಣೆ; ಹೈಕೋರ್ಟ್‌ಗೆ ಮೇಲ್ಮನವಿಗೆ ಅವಕಾಶ
ರಾಮನಗರದ ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಒತ್ತುವರಿ ತೆರವು ಸಂಬಂಧ ಕುಮಾರಸ್ವಾಮಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗೆ ತಡೆ ಕೋಡಿ ಸಲ್ಲಿಸಿದ್ದು, ಈ ಸಂಬಂಧ ಸುಪ್ರೀಂಕೋರ್ಟ್ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿದೆ. ಸಮಾಜ ಪರಿವರ್ತನಾ ಸಮುದಾಯ ನ್ಯಾಯಾಂಗ ನಿಂದನೆ ಅರ್ಜಿಗೆ ತಡೆ ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇತ್ಯಾರ್ಥಗೊಳಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸೂಚಿಸಿದೆ.

ನವದೆಹಲಿ, (ಮಾರ್ಚ್ 28): ಬಿಡದಿಯ ಕೇತಗಾನಹಳ್ಳಿ ಬಳಿ ಸರ್ಕಾರಿ ಜಮೀನು ಪ್ರಕರಣಕ್ಕೆ (Kethaganahalli land encroachment case) ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇತ್ಯರ್ಥಪಡಿಸಿದೆ. ಕುಮಾರಸ್ವಾಮಿಯHD Kumaraswamy) ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್(supreme court) ಮಹತ್ವದ ಆದೇಶ ನೀಡಿದ್ದು, ತಮ್ಮ ವಿರುದ್ಧದ ಪ್ರಕರಣದಲ್ಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಕುಮಾರಸ್ವಾಮಿಗೆ ಅವಕಾಶ ಮಾಡಿಕೊಟ್ಟಿದೆ. ಈ ಮೂಲಕ ಸುಪ್ರೀಂಕೋರ್ಟ್ , ಎಚ್.ಡಿ.ಕುಮಾರಸ್ವಾಮಿ ಅರ್ಜಿ ಇತ್ಯರ್ಥಪಡಿಸಿದೆ.
ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗೆ ತಡೆ ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು (ಮಾರ್ಚ್ 28) ಇತ್ಯರ್ಥಪಡಿಸಿದೆ. ಮತ್ತೊಂದೆಡೆ ಸುಪ್ರೀಂಕೋರ್ಟ್‌ನಲ್ಲಿ ನ್ಯಾಯಾಂಗ ಅರ್ಜಿ ವಿಚಾರಣೆ ಬಾಕಿ ಎಂದು ಕರ್ನಾಟಕ ಹೈಕೋರ್ಟ್ನಿಂದ ರಿಲೀಫ್ ಪಡಿದುಕೊಂಡಿದ್ದರು.
ಆರು ಎಕರೆ ಒತ್ತುವರಿ ಸಂಬಂಧ ಸ್ಥಳೀಯ ತಹಸೀಲ್ದಾರ್ ನೀಡಿರುವ ನೋಟಿಸ್ ಪ್ರಶ್ನಿಸಿ ಎಚ್.ಡಿ. ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯು ಸೋಮವಾರ ನ್ಯಾ.ಎನ್.ಎಸ್. ಸಂಜಯಗೌಡ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆ ನಡೆದಿತ್ತು. ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಉದಯ್ ಹೊಳ್ಳ, ಅಧಿಕಾರ ವ್ಯಾಪ್ತಿ ಇಲ್ಲದಿದ್ದರೂ ತಹಸೀಲ್ದಾರ್ ಅರ್ಜಿದಾರರಿಗೆ ನೋಟಿಸ್ ನೀಡಿದ್ದಾರೆ. 1985 ರಲ್ಲಿಯೇ ಕ್ರಯಪತ್ರವಾಗಿರುವ ಜಮೀನಿಗೆ ಈಗ ನೋಟಿಸ್ ನೀಡಲಾಗಿದೆ. ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ. ಹಾಗಾಗಿ, ತಹಸೀಲ್ದಾರ್ ನೋಟಿಸ್‌ಗೆ ತಡೆ ನೀಡಬೇಕು ಎಂದು ಕೋರಿದ್ದರು. ಹೀಗಾಗಿ ಹೈಕೋರ್ಟ್ , ಮಾರ್ಚ್ 27 ರವರೆಗೂ ಅರ್ಜಿದಾರರ ವಿರುದ್ಧ ಯಾವುದೇ ವಿಧವಾದ ಬಲವಂತದ ಕ್ರಮ ಕೈಗೊಳ್ಳುಬಾರದು ಎಂದು ತಿಳಿಸಿ ವಿಚಾರಣೆಯನ್ನು ಮಾರ್ಚ್ 27ಕ್ಕೆ ನಿಗದಿಪಡಿಸಿತ್ತು.
ಇದನ್ನೂ ಓದಿ: ಕೇತಗಾನಹಳ್ಳಿ ಭೂ ಒತ್ತುವರಿ ಆರೋಪ: ನೋಟಿಸ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಕುಮಾರಸ್ವಾಮಿ
ಪ್ರಕರಣದ ಹಿನ್ನೆಲೆ
ಎಚ್.ಡಿ. ಕುಮಾರಸ್ವಾಮಿ ಮತ್ತು ಅವರ ಸಂಬಂಧಿ ಡಿ.ಸಿ.ತಮ್ಮಣ್ಣ ಮತ್ತಿತರರು 2014ರಲ್ಲಿ ರಾಮನಗರದ ಬಿಡಿದಿ ಬಳಿಯ ಕೇತಗಾನಹಳ್ಳಿಯಲ್ಲಿ ವಿವಿಧ ಎಂಟು ಸರ್ವೆ ನಂಬರ್ಗಳ ಒಟ್ಟು 14 ಎಕರೆ ಭೂಮಿ ಒತ್ತುವರಿ ಮಾಡಿದ್ದಾರೆಂಬ ಆರೋಪವಿದೆ. ಈ ಸಂಬಂಧ ಲೋಕಾಯುಕ್ತ ನೀಡಿದ್ದ ವರದಿ ಜಾರಿಗೊಳಿಸಲು ಹೈಕೋರ್ಟ್ ಆದೇಶ ನೀಡಿದ್ದರೂ ಅದನ್ನು ಪಾಲನೆ ಮಾಡಿಲ್ಲ ಎಂದು ಆರೋಪಿಸಿ ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ಅವರು ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದರು. ಈ ಅರ್ಜಿ ಪರಿಶೀಲಿಸಿದ್ದ ಹೈಕೋರ್ಟ್ ವಿಭಾಗೀಯ ಪೀಠ ಭೂಮಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿತ್ತು. ಆನಂತರ ಜಮೀನಿನ ಸರ್ವೆ ಕಾರ್ಯ ನಡೆಸಿದ ಸ್ಥಳೀಯ ತಹಸೀಲ್ದಾರ್, ಎಚ್‌ಡಿಕೆ ಮತ್ತಿತರರಿಗೆ ಕಾನೂನಿನ್ವಯ ನೋಟಿಸ್ ಜಾರಿಗೊಳಿಸಿದ್ದರು. ಅದನ್ನು ಪ್ರಶ್ನಿಸಿ ಎಚ್‌ಡಿಕೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಹೀಗಾಗಿ ಇದೀಗ ಆರು ಎಕರೆ ಒತ್ತುವರಿ ಸಂಬಂಧ ಸ್ಥಳೀಯ ತಹಸೀಲ್ದಾರ್ ನೀಡಿರುವ ನೋಟಿಸ್ ಪ್ರಶ್ನಿಸಿ ಎಚ್.ಡಿ. ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಯಾವ ತೀರ್ಪು ನೀಡುತ್ತೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.
Published On - 4:10 pm, Fri, 28 March 25