AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KFWCCF Recruitment 2026: ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: KFWCCF ನಲ್ಲಿ 2 PRO ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನ (KFWCCF) ಸಾರ್ವಜನಿಕ ಸಂಪರ್ಕ ಅಧಿಕಾರಿ (PRO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು ಎರಡು ವರ್ಷಗಳ ಗುತ್ತಿಗೆ ಆಧಾರಿತ ನೇಮಕಾತಿಯಾಗಿದ್ದು, ಒಟ್ಟು 2 PRO ಹುದ್ದೆಗಳಿವೆ. ಆಸಕ್ತ ಅಭ್ಯರ್ಥಿಗಳು www.kfwccf.in ವೆಬ್‌ಸೈಟ್ ಮೂಲಕ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ, ಜುಲೈ 18 ರೊಳಗೆ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗಾಗಿ ವೆಬ್‌ಸೈಟ್ ಭೇಟಿ ನೀಡಿ.

KFWCCF Recruitment 2026: ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: KFWCCF ನಲ್ಲಿ 2 PRO ಹುದ್ದೆಗಳಿಗೆ ಅರ್ಜಿ ಆಹ್ವಾನ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶImage Credit source: www.kfwccf.in
ಅಕ್ಷತಾ ವರ್ಕಾಡಿ
| Edited By: |

Updated on:Jul 08, 2026 | 1:18 PM

Share

ಮುಖ್ಯಾಂಶಗಳು

  • ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನದಲ್ಲಿ ಉದ್ಯೋಗವಕಾಶ
  • 2 ಸಾರ್ವಜನಿಕ ಸಂಪರ್ಕ ಅಧಿಕಾರಿ (PRO) ಹುದ್ದೆಗಳಿಗೆ ಅರ್ಜಿ ಆಹ್ವಾನ.
  • ಗುತ್ತಿಗೆ ಆಧಾರದಲ್ಲಿ ಎರಡು ವರ್ಷಗಳ ಅವಧಿಗೆ ನೇಮಕಾತಿ.

ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನ (KFWCCF)ವು ಸಾರ್ವಜನಿಕ ಸಂಪರ್ಕ ಅಧಿಕಾರಿ (Public Relations Officer – PRO) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯು ಗುತ್ತಿಗೆ ಆಧಾರದಲ್ಲಿ ಎರಡು ವರ್ಷಗಳ ಅವಧಿಗೆ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯಡಿ ಒಟ್ಟು 2 ಸಾರ್ವಜನಿಕ ಸಂಪರ್ಕ ಅಧಿಕಾರಿ (PRO) ಹುದ್ದೆಗಳು ಭರ್ತಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕರ್ನಾಟಕ ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆ ಪ್ರತಿಷ್ಠಾನದ ಅಧಿಕೃತ ವೆಬ್‌ಸೈಟ್ www.kfwccf.in ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ವೆಬ್‌ಸೈಟ್‌ನಲ್ಲಿ ನೀಡಿರುವ ಸೂಚನೆಗಳಂತೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು 2026ರ ಜುಲೈ 18 ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಕೊಡಗು ಜಿಲ್ಲಾ ಪಂಚಾಯತ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಸಂಪೂರ್ಣ ಮಾಹಿತಿ ಇಲ್ಲಿದೆ

ಹೆಚ್ಚಿನ ಮಾಹಿತಿ ಎಲ್ಲಿದೆ?

ಹುದ್ದೆಯ ಅರ್ಹತೆ, ವಯೋಮಿತಿ, ವೇತನ, ಆಯ್ಕೆ ವಿಧಾನ ಹಾಗೂ ಇತರ ಷರತ್ತುಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು KFWCCF ಅಧಿಕೃತ ವೆಬ್‌ಸೈಟ್ www.kfwccf.in ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳುವುದು ಅಗತ್ಯ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:10 pm, Wed, 8 July 26

Follow Us