ಸರ್ಕಾರದಿಂದ ಮಹತ್ವದ ಆದೇಶ: ಕರ್ನಾಟಕ ನೌಕರರು ಈ ಬಟ್ಟೆ ಧರಿಸುವುದು ಕಡ್ಡಾಯ

ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರಿ ನೌಕರರು ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ಯೋಜನೆ ಏಪ್ರಿಲ್ 24ರಿಂದ ಜಾರಿಗೆ ಬರಲಿದೆ.

ಸರ್ಕಾರದಿಂದ ಮಹತ್ವದ ಆದೇಶ: ಕರ್ನಾಟಕ ನೌಕರರು ಈ ಬಟ್ಟೆ ಧರಿಸುವುದು ಕಡ್ಡಾಯ
ವಿಧಾನಸೌಧ
Image Credit source: karnataka.gov.in
Edited By:

Updated on: Jan 29, 2026 | 4:22 PM

ಬೆಂಗಳೂರು, ಜನವರಿ 29: ರಾಜ್ಯ ಸರ್ಕಾರಿ ನೌಕರರಿಗೆ (government employees) ಖಾದಿ (Khadi) ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್​​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 24ರಂದು ಈ ಯೋಜನೆಗೆ ಚಾಲನೆ ದೊರೆಯಲಿದೆ.

ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ, ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್​ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ಸಭೆ ಮಾಡಲಾಗಿದೆ.

ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು

  • ಪ್ರತಿ ತಿಂಗಳ ಮೊದಲ ಶನಿವಾರದಂದು ಎಲ್ಲಾ ಅಧಿಕಾರಿ, ನೌಕರರು ಖಾದಿ ಬಟ್ಟೆಗಳನ್ನು ಧರಿಸಿ ಕರ್ತವ್ಯ ನಿರ್ವಹಿಸುವುದು.
  • ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಳಿಗೆಗಳಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸುವುದು.

ಇದನ್ನೂ ಓದಿ: ಕರ್ನಾಟಕ ಪೊಲೀಸರಿಗೆ ಭರ್ಜರಿ ಗಿಫ್ಟ್, ಕುಟುಂಬಸ್ಥರ ಜತೆ ಕಾಲ ಕಳೆಯಲು ರಜೆ ಭಾಗ್ಯ

  • ಖಾದಿ ಗ್ರಾಮೋದ್ಯೋಗ ಮಂಡಳಿಯು ಹಾಲಿ ನೀಡುತ್ತಿರುವ ರಿಯಾಯಿತಿಯ ಹೊರತಾಗಿ ಅಧಿಕಾರಿ, ನೌಕರರಿಗೆ ಶೇ. 5% ಹೆಚ್ಚುವರಿ ರಿಯಾಯಿತಿ ನೀಡುವುದು.
  • ಪುರುಷ ನೌಕರರು ಖಾದಿ ಬಟ್ಟೆಯ ಶರ್ಟ್,ಪ್ಯಾಂಟ್, ಒವರ್ ಕೋಟ್ ಹಾಗೂ ಇತರೆ ಶಿಸ್ತಿನ ಉಡುಗೆಗಳು.
  • ಮಹಿಳಾ ನೌಕರರು ಖಾದಿ ಹಾಗೂ ಖಾದಿ ಸಿಲ್ಕ್ ಬಟ್ಟೆಯ ಸೀರೆ, ಚೂಡಿದಾರ್ ಇತರೆ ಶಿಸ್ತಿನ ಉಡುಗೆಗಳು.
  • ಎಂಎಸ್​ಐಎಲ್​ ಸಂಸ್ಥೆಯ ಮೂಲಕ ಸೇನಾ ಕ್ಯಾಂಟೀನ್ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ದಿನಬಳಕೆ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಪೂರೈಸಲು “ಸರ್ಕಾರಿ ನೌಕರರ ಕ್ಯಾಂಟೀನ್” ಪ್ರಾರಂಭಿಸಲು 2026-27ನೇ ಸಾಲಿನ ಆಯ-ವ್ಯಯದಲ್ಲಿ ಈ ಯೋಜನೆಯನ್ನು ಘೋಷಣೆ ಮಾಡುವುದು.

ಇದನ್ನೂ ಓದಿ: ಸರ್ಕಾರದಿಂದ ಮಹತ್ವದ ಆದೇಶ: ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಕನಸು ಕಾಣುತ್ತಿದ್ದವರಿಗೆ ಬಿಗ್ ಶಾಕ್

  • ಕೆಎಸ್​ಐಸಿ ಸಂಸ್ಥೆಯು ಭಾರತೀಯ ಆಡಳಿತ ಸೇವೆಯ ಅಧಿಕಾರಿಗಳು ಖರೀದಿಸುವ ರೇಷ್ಮೆ ಸೀರೆ ಮತ್ತು ರೇಷ್ಮೆ ವಸ್ತ್ರಗಳಿಗೆ ಹೆಚ್ಚುವರಿ ಶೇ.5% ವಿಶೇಷ ರಿಯಾಯಿತಿ ನೀಡುತ್ತಿರುವ ಮಾದರಿಯಲ್ಲೇ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರಿಗೂ ಹೆಚ್ಚುವರಿ ಶೇ. 5% ವಿಶೇಷ ರಿಯಾಯಿತಿ ನೀಡುವುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:18 pm, Thu, 29 January 26

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us